RCB: ಕಪ್ ಗೆದ್ದ ಆರ್‌ಸಿಬಿ; ವಿಜಯ್ ಮಲ್ಯ ಹೇಳಿದ್ದೇನು?
16 ವರ್ಷಗಳಿಂದ ಆರ್ ಸಿಬಿ ಪುರುಷರ ತಂಡ ಮಾಡದೇ ಇರುವ ಸಾಧನೆಯನ್ನು ಆರ್ ಸಿಬಿ ಮಹಿಳಾ ತಂಡ ಎರಡನೇ ವರ್ಷವೇ ಮಾಡಿ ತೋರಿಸಿದೆ. 16 ವರ್ಷಗಳ ಬಳಿಕ ಆರ್ ಸಿಬಿ ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿದೆ. ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ಆರ್ ಸಿಬಿ ಇತಿಹಾಸ ಬರೆದಿದೆ.
ಆರ್‌ಸಿಬಿ ಗೆಲುವಿನ ಬಳಿಕ ತಂಡದ ಮಾಲಿಕರಾಗಿದ್ದ ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ. ಮೊದಲ ಬಾರಿ ಕಪ್ ಗೆದ್ದುಕೊಟ್ಟ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ತಂಡವನ್ನು ಕಟ್ಟಿ ಬೆಳೆಸಿದ್ದ ಮಲ್ಯ ಪ್ರಶಸ್ತಿ ಗೆಲ್ಲುವ ಕನಸು ಕಂಡಿದ್ದರು. ಅದಾದ ಬಳಿಕ ತಂಡದ ಒಡೆತನವನ್ನು ಬಿಟ್ಟುಕೊಟ್ಟರು, ತಂಡದ ಮೇಲಿನ ಅವರ ಒಲವು ಕಡಿಮೆಯಾಗಿಲ್ಲ.

ಆರ್ ಸಿಬಿ ಪ್ರಶಸ್ತಿ ಗೆಲ್ಲುತ್ತಿದ್ದಂತೆ ಟ್ವೀಟ್ ಮಾಡಿರುವ ಅವರು, "ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿ ಗೆದ್ದ ಆರ್‌ಸಿಬಿ ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರ್‌ಸಿಬಿ ಪುರುಷರ ತಂಡವು ದೀರ್ಘಾವಧಿಯಿಂದ ಕಾಯುತ್ತಿರುವ ಐಪಿಎಲ್ ಅನ್ನು ಗೆದ್ದರೆ ಅದು ಅದ್ಭುತ ಡಬಲ್ ಆಗಿರುತ್ತದೆ. ಒಳ್ಳೆಯದಾಗಲಿ" ಎಂದು ಹೇಳಿದ್ದಾರೆ.
Heartiest congratulations to the RCB Women’s Team for winning the WPL. It would be a fantastic double if the RCB Men’s Team won the IPL which is long overdue. Good Luck.
— Vijay Mallya (@TheVijayMallya) March 17, 2024
ಸಿಎಂ ಸಿದ್ದರಾಮಯ್ಯ ಟ್ವೀಟ್
ಆರ್‌ಸಿಬಿ ಗೆಲುವಿನ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದಾರೆ. "ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.
ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.
— Siddaramaiah (@siddaramaiah) March 17, 2024
ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು… pic.twitter.com/39HqqJyjVs
ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ, ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications