Virat Kohli: ವಿರಾಟ್ ಕೊಹ್ಲಿ ಪ್ರದರ್ಶನ ಖುಷಿ ಕೊಟ್ಟಿಲ್ಲ ಎಂದು ಬ್ಯಾಟಿಂಗ್ ಕೋಚ್
ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯವಾಗಿ ಸೂಪರ್ 8 ಹಂತಕ್ಕೆ ಪ್ರವೇಶಿಸಿದ ಭಾರತ, ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಗೆಲುವು ಸಾಧಿಸಿದ್ದು, ಸೆಮಿಫೈನಲ್ ತಲುಪುವ ವಿಶ್ವಾಸದಲ್ಲಿದೆ.
ಇಂದು ಬಾಂಗ್ಲಾದೇಶದ ವಿರುದ್ಧ ಭಾರತ ಸೆಣೆಸಲಿದ್ದು, ಗೆಲುವು ಸಾಧಿಸಿದರೆ ಸೆಮಿಫೈನಲ್ ಸ್ಥಾನ ಬಹುತೇಕ ಖಚಿತವಾಗಲಿದೆ. ಮುಂದಿನ ಪಂದ್ಯಗಳಲ್ಲಿ ಬಲಿಷ್ಠ ಎದುರಾಳಿಗಳು ಸಿಗಲಿದ್ದು, ಭಾರತಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಫಾರ್ಮ್ ಚಿಂತೆ ಹೆಚ್ಚಿಸಿದೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದಿದ್ದ ವಿರಾಟ್ ಕೊಹ್ಲಿ, ಟಿ20 ವಿಶ್ವಕಪ್‌ನಲ್ಲಿ ಇನ್ನೂ ಸೈಲೆಂಟ್ ಆಗಿದ್ದಾರೆ. ಲೀಗ್ ಹಂತದಲ್ಲಿ ಐರ್ಲೆಂಡ್ ವಿರುದ್ಧ 1 ರನ್, ಪಾಕಿಸ್ತಾನದ ವಿರುದ್ಧ 3 ರನ್, ಯುಎಸ್‌ಎ ವಿರುದ್ಧ 0, ಮೂರು ಪಂದ್ಯಗಳಿಂದ ಕೇವಲ 4 ರನ್ ಗಳಿಸಿದರೆ, ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ 24 ರನ್ ಮಾತ್ರ ಗಳಿಸಿದ್ದಾರೆ.
ಬ್ಯಾಟಿಂಗ್ ಕೋಚ್ ಹೇಳಿದ್ದೇನು?
ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ವಿರಾಟ್ ಕೊಹ್ಲಿಗೆ ಸವಾಲು ಇದೆ, ಅವರ ಅನುಭವ ತಂಡಕ್ಕೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ ಎಂದಿದ್ದಾರೆ.
ವಿರಾಟ್ ಕೊಹ್ಲಿ ಅವರ ಪ್ರದರ್ಶನದಿಂದ ನನಗೆ ಸಂತೋಷವಾಗಿಲ್ಲ. ಅವರು ಹೆಚ್ಚು ರನ್ ಗಳಿಸಿದರೆ ನನಗೆ ಇಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಅನುಭವಿ ಆಟಗಾರರು ಉತ್ತಮ ರನ್ ಗಳಿಸದೇ ಇದ್ದರೂ, ಬೇರೆಯವರು ರನ್ ಗಳಿಸುತ್ತಿರುವು, ತಂಡದ ಗೆಲುವಿನಲ್ಲ ಕೊಡುಗೆ ನೀಡುತ್ತಿರುವುದು ಚನ್ನಾಗಿದೆ. ಮಧ್ಯಮ ಕ್ರಮಾಂಕ ಫಾರ್ಮ್ ಕಂಡುಕೊಂಡಿದೆ ಎಂದು ಹೇಳಿದರು.
ರಿಷಭ್ ಪಂತ್, ಸೂರ್ಯಕುಮಾರ್ ಯಾದವ್ ಇಬ್ಬರೂ ಈವರೆಗೂ ಭಾರತವನ್ನು ಸಂಕಷ್ಟದ ಪರಿಸ್ಥಿತಿಯಿಂದ ಕಾಪಾಡಿದ್ದಾರೆ. ಮುಂದಿನ ಪಂದ್ಯಗಳಲ್ಲಿ ರೋಹಿತ್, ಕೊಹ್ಲಿ ಫಾರ್ಮ್‌ಗೆ ಮರಳಿದರೆ ಭಾರತದ ಕಪ್ ಗೆಲ್ಲುವ ಹಾದಿ ಮತ್ತಷ್ಟು ಸುಲಭವಾಗಲಿದೆ.
ಭಾರತ ಶನಿವಾರ ಆ್ಯಂಟಿಗುವಾದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ತಂಡವು ನಾಲ್ವರು ಸ್ಪಿನ್ನರ್‌ಗಳನ್ನು ಹೊಂದಿದೆ ಮತ್ತು ವೆಸ್ಟ್ ಇಂಡೀಸ್ ಪರಿಸ್ಥಿತಿಗಳನ್ನು ಪರಿಗಣಿಸಿದರೆ ಭಾರತ ಬಲಿಷ್ಠ ಬೌಲಿಂಗ್ ಪಡೆಯನ್ನು ಹೊಂದಿದೆ.
"ಅಕ್ಷರ್ ಪಟೇಲ್ ಎಂಟನೇ ಕ್ರಮಾಂಕದಲ್ಲಿ ಆಡುವುದು ನಿಮಗೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡುತ್ತದೆ ಏಕೆಂದರೆ ಅವರು ಬ್ಯಾಟಿಂಗ್ ಮಾಡಬಲ್ಲರು ಮತ್ತು ಅವರು ಈ ಸಮಯದಲ್ಲಿ ಚೆನ್ನಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಆದ್ದರಿಂದ, ಇದು ತಂಡಕ್ಕೆ ಸಾಕಷ್ಟು ಆಯ್ಕೆಗಳನ್ನು ನೀಡುತ್ತದೆ," ಅವರು ಹೇಳಿದರು.












Click it and Unblock the Notifications