Virat Kohli: ಹುಟ್ಟುಹಬ್ಬದ ದಿನವೇ ಕ್ರಿಕೆಟ್ ದೇವರ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ
ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ, ಭಾರತದ ಕ್ರಿಕೆಟ್ ಕಾಶಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕಿಂಗ್ ವಿರಾಟ್ ಕೊಹ್ಲಿಏಕದಿನ ಕ್ರಿಕೆಟ್‌ನ 49ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ, ಅವರ ಹುಟ್ಟು ಹಬ್ಬದ ದಿನವೇ ಅವರ ಬ್ಯಾಟ್‌ನಿಂದ ಈ ವಿಶೇಷವಾದ ಶತಕ ದಾಖಲಾಗಿದೆ.
ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 48ನೇ ಶತಕ ಸಿಡಿಸಿದ್ದ ಕೊಹ್ಲಿ, ನಂತರ ಎರಡು ಬಾರಿ ಶತಕದ ಸನಿಹ ಬಂದು ಔಟಾಗಿದ್ದರು. ನವೆಂಬರ್ 5ರಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಕಿಂಗ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟುವ ಮೂಲಕ ಅಭಿಮಾನಿಗಳಿಗೆ ಡಬಲ್ ಖುಷಿ ನೀಡಿದ್ದಾರೆ.

ಹಲವು ದಾಖಲೆಗಳು ನಿರ್ಮಾಣ
ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 277 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಚಿನ್ ತೆಂಡೂಲ್ಕರ್ 452 ಏಕದಿನ ಇನ್ನಿಂಗ್ಸ್‌ಗಳಲ್ಲಿ 49 ಶತಕ ಸಿಡಿಸುವ ಮೂಲಕ ಈವರೆಗೂ ಮೊದಲ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ ಸಚಿನ ಸಾಧನೆ ಸರಿಗಟ್ಟಿದ್ದು, 50ನೇ ಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಳ್ಳುವ ಅವಕಾಶ ಹೊಂದಿದ್ದಾರೆ.
ವಿನೋದ್ ಕಾಂಬ್ಳಿ, ಸಚಿನ್ ತೆಂಡೂಲ್ಕರ್, ಸನತ್ ಜಯಸೂರ್ಯ, ರಾಸ್ ಟೇಲರ್, ಟಾಮ್ ಲಾಥಮ್, ಮಿಚೆಲ್ ಮಾರ್ಷ್ ಮಾತ್ರ ತಮ್ಮ ಹುಟ್ಟುಹಬ್ಬದ ದಿನ ಶತಕ ಸಿಡಿಸಿದ ಸಾಧನೆ ಮಾಡಿದ್ದು ಈಗ ವಿರಾಟ್ ಕೊಹ್ಲಿ ಕೂಡ ತಮ್ಮ ಹುಟ್ಟುಹಬ್ಬದ ದಿನ ಶತಕ ಸಿಡಿಸುವ ಮೂಲಕ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಭಾರತದಲ್ಲಿ ವಿರಾಟ್ ಕೊಹ್ಲಿ 6000 ರನ್ ಪೂರೈಸಿದ ಸಾಧನೆ ಕೂಡ ಮಾಡಿದರು. ಸಚಿನ್ ತೆಂಡೂಲ್ಕರ್ ಭಾರತದಲ್ಲಿ 6950 ರನ್ ಗಳಿಸಿದ್ದು ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.
ಉತ್ತಮ ಮೊತ್ತ ಕಲೆಹಾಕಿದ ಭಾರತ
ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿತು. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು ನಾಯಕ ರೋಹಿತ್ ಶರ್ಮಾ 24 ಎಸೆತಗಳಲ್ಲಿ 40 ರನ್ ಸಿಡಿಸುವ ಮೂಲಕ ಸ್ಫೋಟಕ ಆರಂಭ ನೀಡಿದರು. ಶುಭಮನ್ ಗಿಲ್ 23 ರನ್ ಗಳಿಸಿ ಔಟಾದರು.
ವಿರಾಟ್ ಕೊಹ್ಲಿ ಅಜೇಯ 101 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 77 ರನ್ ಗಳಿಸಿ ಕೊಹ್ಲಿ ಜೊತೆ ಉತ್ತಮ ಮೊತ್ತ ಕಲೆಹಾಕಿದರು. ಕೆಎಲ್ ರಾಹುಲ್ 8, ಸೂರ್ಯಕುಮಾರ್ ಯಾದವ್ 22 ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜಾ 15 ಎಸೆತಗಳಲ್ಲಿ 29 ರನ್ ಕಲೆ ಹಾಕಿ ಮಿಂಚಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications