ದಾಖಲೆಯ ಮೇಲೆ ವಿರಾಟ್ ಕಣ್ಣು; ಇತಿಹಾಸದ ಪುಟ ಸೇರಿದ ರೋಹಿತ್ ಶರ್ಮಾ
ಶ್ರೀಲಂಕಾ ವಿರುದ್ಧ ಎರಡನೇ ಏಕದಿನ ಪಂದ್ಯ ಭಾನುವಾರ ನಡೆಯಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಟೀಮ್ ಇಂಡಿಯಾದ್ದಾಗಿದೆ. ಇದೇ ವೇಳೆ ಟೀಮ್ ಇಂಡಿಯಾದ ಇಬ್ಬರು ಅನುಭವಿ ಆಟಗಾರರು ಎರಡನೇ ಪಂದ್ಯದಲ್ಲಿ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.
ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸದ್ಯ ಏಕದಿನ ಸರಣಿ ಆಡುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಇಬ್ಬರೂ ಸ್ಟಾರ್ ಬ್ಯಾಟರ್‌ಗಳು ದೊಡ್ಡ ದಾಖಲೆಯ ಸನಿಹದಲ್ಲಿದ್ದಾರೆ. ಟೀಮ್ ಇಂಡಿಯಾದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ರನ್‌ಗಳ ಮಹಲ್ ಕಟ್ಟಿ ದಾಖಲೆ ನಿರ್ಮಿಸುವ ನಿರೀಕ್ಷೆ ಇದೆ.

ದಾಖಲೆಯ ಸನಿಹದಲ್ಲಿ ವಿರಾಟ್
ಟೀಮ್ ಇಂಡಿಯಾದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಎರಡನೇ ಏಕದಿನ ಪಂದ್ಯದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸುವ ಅವಕಾಶ ಇದೆ. ಈ ಪಂದ್ಯದಲ್ಲಿ ಇವರು 92 ರನ್‌ಗಳನ್ನು ಗಳಿಸಿದ್ದೇ ಆದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್‌ಗಳ ಗಡಿ ದಾಟುವ ಅವಕಾಶ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಇದು ವರೆಗೆ 113 ಟೆಸ್ಟ್ ಪಂದ್ಯಗಳಲ್ಲಿ 8848 ರನ್, 293 ಏಕದಿನ ಪಂದ್ಯಗಳಲ್ಲಿ 13872 ರನ್ ಮತ್ತು 125 ಟಿ20 ಪಂದ್ಯಗಳಲ್ಲಿ 4188 ರನ್ ಗಳಿಸಿದ್ದಾರೆ.
92 ರನ್ ಅವಶ್ಯಕ
ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ 531 ಪಂದ್ಯಗಳ 589 ಇನಿಂಗ್ಸ್‌ನಲ್ಲಿ 26908 ರನ್ ಸಿಡಿಸಿದ್ದಾರೆ. ಅವರು ಎರಡನೇ ಪಂದ್ಯದಲ್ಲಿ 92 ರನ್ ಸಿಡಿಸಿದರೆ, ವೇಗವಾಗಿ 27 ಸಾವಿರ ರನ್ ಗಡಿ ದಾಟುವ ಇರಾದೆಯನ್ನು ಹೊಂದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27 ಸಾವಿರ ರನ್‌ಗಳ ಸಂಖ್ಯೆಯನ್ನು ದಾಟಿದ್ದಾರೆ. ಇವರು 664 ಪಂದ್ಯಗಳಲ್ಲಿ 34357 ರನ್ ಸಿಡಿಸಿದ್ದಾರೆ. ಈ ಲೆಕ್ಕಾಚಾರದಲ್ಲಿ ಶ್ರೀಲಂಕಾದ ಕುಮಾರ್ ಸಂಗಾಕ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು 28016 ರನ್ ಸಿಡಿಸಿದ್ದು, ಈ ಪಟ್ಟಿಯಲ್ಲಿ ಆಸೀಸ್‌ನ ದಿಗ್ಗಜ ಆಟಗಾರ ರಿಕ್ಕಿ ಪಾಂಟಿಂಗ್ 27483 ರನ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಒಂದು ವೇಳೆ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 128 ರನ್ ಗಳಿಸಿದ್ದೇ ಆದಲ್ಲಿ, ವಿಶ್ವ ಕ್ರಿಕೆಟ್‌ನಲ್ಲಿ ವೇಗವಾಗಿ 14000 ರನ್ ಬಾರಿಸಿದ ದಾಖಲೆಯನ್ನು ನಿರ್ಮಿಸಬಹುದು. ಕಳೆದ ವರ್ಷ ವಿರಾಟ್ ಕೊಹ್ಲಿ ವೇಗವಾಗಿ 26000 ರನ್ ಗಳಿಸಿದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದರು.
ರೋಹಿತ್ ದಾಖಲೆ
ಮೊದಲ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ 58 ರನ್ ಬಾರಿಸಿ ಅಬ್ಬರಿಸಿದ್ದರು. ಇದೇ ಪಂದ್ಯದಲ್ಲಿ ರೋಹಿತ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕರಾಗಿ ವೇಗವಾಗಿ 15 ಸಾವಿರ ರನ್ ಕಲೆ ಹಾಕಿ ಅಬ್ಬರಿಸಿದ್ದಾರೆ. ಆರಂಭಿಕರಾಗಿ ಈ ಸಾಧನೆ ಮಾಡಿದ ಭಾರತದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಈ ಮೊದಲು ವೀರೇಂದ್ರ ಸೆಹ್ವಾಗ್ ಮತ್ತು ಸಚಿನ್ ತೆಂಡೂಲ್ಕರ್ ಭಾರತಕ್ಕಾಗಿ ಈ ಸಾಧನೆ ಮಾಡಿದ್ದರು.
ಇನ್ನು ರೋಹಿತ್ ಶರ್ಮಾ ಅತಿ ಹೆಚ್ಚು ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ರನ್ ಸಿಡಿಸಿದ ಹಿರಿಮೆ ಹೊಂದಿದ್ದಾರೆ. ಈ ಮೂಲಕ ಹಿಟ್ ಮ್ಯಾನ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿ ಗಟ್ಟಿದ್ದಾರೆ. ಇಬ್ಬರೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 120ಕ್ಕೂ ಹೆಚ್ಚು ಬಾರಿ ಈ ಸಾಧನೆ ಮಾಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications