Virat Kohli: ಎಲ್‌ಎಸ್‌ಜಿ ವಿರುದ್ಧದ ಪಂದ್ಯಕ್ಕೆ ಮುನ್ನ ಆಂಜನೇಯ ದೇವಸ್ಥಾನಕ್ಕೆ ವಿರಾಟ್ ಕೊಹ್ಲಿ ಭೇಟಿ
ಐಪಿಎಲ್ 2025ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ ಸಿಬಿ ಇದೀಗ ಅಗ್ರ 2 ಸ್ಥಾನದಲ್ಲಿ ಪ್ಲೇಆಫ್‌ಗೆ ಪ್ರವೇಶಿಸುವ ಹೊಸ್ತಿಲಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಿನ ಬಳಿಕ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದ್ದು ಎಲ್‌ಎಸ್‌ಜಿ ವಿರುದ್ಧ ಗೆದ್ದರೆ ಮಾತ್ರ ಮೊದಲ 2 ಸ್ಥಾನಗಳಲ್ಲಿ ಒಂದು ಸ್ಥಾನ ಖಚಿತವಾಗಲಿದೆ. ಮಹತ್ವದ ಪಂದ್ಯಕ್ಕೆ ಮುನ್ನ ವಿರಾಟ್ ಕೊಹ್ಲಿ ಅಯೋಧ್ಯೆಯ ರಾಮ ಮತ್ತು ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಭಾನುವಾರ ಅಯೋಧ್ಯೆಯ ರಾಮ ಮಂದಿರ ಮತ್ತು ಹನುಮಾನ್ ದೇವಸ್ತಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೊ- ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ಭೇಟಿಯ ಸಮಯದಲ್ಲಿ, ವಿರಾಟ್ ಅನುಷ್ಕಾ ದಂಪತಿಗಳು ಹನುಮಾನ್ ದೇವಸ್ಥಾನದ ಮಹಾಂತ್ ಜ್ಞಾನ್ ದಾಸ್ ಅವರ ಉತ್ತರಾಧಿಕಾರಿ ಮತ್ತು ಸಂಕಟ್ ಮೋಚನ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸಂಜಯ್ ದತ್ ಅವರನ್ನು ಸಹ ಭೇಟಿ ಮಾಡಿದ್ದಾರೆ. ಹನುಮಾನ್ ದೇವಸ್ಥಾನದ ಹಿರಿಯ ಅರ್ಚಕ ಹೇಮಂತ್ ದಾಸ್ ದಂಪತಿಗಳ ದರ್ಶನ ಮತ್ತು ಪೂಜೆಯ ಕೆಲಸಗಳನ್ನು ನೋಡಿಕೊಂಡರು.
ಎಲ್‌ಎಸ್‌ಜಿ ವಿರುದ್ಧ ಮಹತ್ವದ ಪಂದ್ಯ
ಮೇ 23 ರಂದು ಆರ್‌ಸಿಬಿ vs ಎಸ್‌ಆರ್‌ಹೆಚ್ ಪಂದ್ಯಕ್ಕಾಗಿ ಅನುಷ್ಕಾ ಪತಿಯೊಂದಿಗೆ ಲಕ್ನೋಗೆ ಹೋಗಿದ್ದರು. ಪಂದ್ಯದ ವೇಳೆ ಅವರು ಮೈದಾನದಲ್ಲಿ ಹಾಜರಿದ್ದು ಆರ್ ಸಿಬಿ ತಂಡವನ್ನು ಹುರಿದುಂಬಿಸಿದ್ದರು. ಲಕ್ನೋದಲ್ಲಿ ಇದ್ದ ದಂಪತಿ ಸಮೀಪದಲ್ಲೇ ಇರುವ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ವಿರಾಟ್ ಕೊಹ್ಲಿ 14 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ವೃಂದಾವನದಲ್ಲಿರುವ ಪ್ರೇಮಾನಂದ ಮಹಾರಾಜರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.
ಮೇ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋದ ಎಕಾನಾ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಆರ್ ಸಿಬಿ ಮೊದಲ ಎರಡು ಸ್ಥಾನಗಳಲ್ಲಿ ಒಂದು ಸ್ಥಾನ ಪಡೆಯುವುದು ಖಚಿತವಾಗಲಿದೆ. ಇದೇ ಕಾರಣಕ್ಕೆ ಆರ್ ಸಿಬಿಗೆ ಈ ಪಂದ್ಯ ಮಹತ್ವದ್ದಾಗಿದೆ.
ತಂಡದ ಪ್ರಮುಖ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ತಂಡವನ್ನು ಸೇರಿಕೊಂಡಿದ್ದು ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಟಿಮ್ ಡೇವಿಡ್ ಗಾಯಗೊಂಡಿದ್ದು ಅವರ ಫಿಟ್‌ನೆಸ್ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ, ಅವರು ಅಲಭ್ಯರಾದರೆ ಲಿಯಾಮ್ ಲಿವಿಂಗ್‌ಸ್ಟೋನ್ ಕಣಕ್ಕಿಳಿಯುವ ಸಾಧ್ಯತೆ ಇದೆ.












Click it and Unblock the Notifications