Virat Kohli: 100ನೇ ಟಿ20 ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ; ಈ ದಾಖಲೆ ಮಾಡಿದ ಮೊದಲ ಭಾರತೀಯ
ವಿರಾಟ್ ಕೊಹ್ಲಿ ಮೈದಾನಕ್ಕಿಳಿದರೆ ಸಾಕು ಹಲವು ದಾಖಲೆಗಳು ಸೃಷ್ಟಿಯಾಗುತ್ತವೆ. ಐಪಿಎಲ್ 2024ರ ಮೊದಲ ಪಂದ್ಯದಲ್ಲಿ ಟಿ20 ಕ್ರಿಕೆಟ್‌ನಲ್ಲಿ 12,000 ರನ್ ಪೂರೈಸಿದ್ದ ಸಾಧನೆ ಮಾಡಿದ್ದ ಅವರು, ಸೋಮವಾರ ನಡೆದ 2ನೇ ಪಂದ್ಯದಲ್ಲಿ ಮತ್ತೊಂದು ಮಹತ್ವದ ದಾಖಲೆ ಬರೆದರು.
ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಗಳಿಸಿದ ಸಾಧನೆ ಮಾಡಿದ್ದು, ಈ ದಾಖಲೆ ಮಾಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಮಹತ್ವದ ಮೈಲಿಗಲ್ಲು ಸ್ಥಾಪಿಸಿದರು.

ಪಂಜಾಬ್ ಕಿಂಗ್ಸ್ ವಿರುದ್ಧ 49 ಎಸೆತಗಳಲ್ಲಿ 11 ಬೌಂಡರಿ 2 ಸಿಕ್ಸರ್ ಸಹಿತ 77 ರನ್ ಗಳಿಸಿದ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ತಮ್ಮ 100ನೇ ಅರ್ಧಶತಕ ಪೂರೈಸಿದರು.
ಈ ದಾಖಲೆ ಬರೆದ ಮೊದಲ ಭಾರತೀಯ
ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ. ಒಟ್ಟಾರೆ ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಎನಿಸಿಕೊಂಡರು. ಕ್ರಿಸ್ ಗೇಲ್ (110 ಅರ್ಧಶತಕ), ಡೇವಿಡ್ ವಾರ್ನರ್ (109 ಅರ್ಧಶತಕ) ಮೊದಲ ಎರಡು ಸ್ಥಾನದಲ್ಲಿದ್ದಾರೆ.












Click it and Unblock the Notifications