IPL 2023: ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಂದು ಮಹತ್ವದ ದಾಖಲೆ ನಿರ್ಮಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸಿ ಮಿಂಚಿದರು. ಈ ಮೂಲಕ ಐಪಿಎಲ್‌ನಲ್ಲಿ ಎಲ್ಲಾ 9 ತಂಡಗಳ ವಿರುದ್ಧ ಅರ್ಧಶತಕ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಚಿನ್ನಸ್ವಾಮಿ ಅಂಗಳದಲ್ಲಿ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಬಳಿಕ ಅವರು ಈ ಮಹತ್ವದ ದಾಖಲೆ ನಿರ್ಮಿಸಿದರು.

ಈ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡುವ ರುತುರಾಜ್ ಗಾಯಕ್ವಾಡ್ ಐಪಿಎಲ್‌ನ 9 ತಂಡಗಳ ವಿರುದ್ಧ ಅರ್ಧಶತಕ ಬಾರಿಸಿದ ಮೊದಲನೇ ಆಟಗಾರ ಎನಿಸಿಕೊಂಡಿದ್ದರು. ರುತುರಾಜ್ ನಂತರ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ ಎರಡನೇ ಬ್ಯಾಟರ್ ಎನಿಸಿಕೊಂಡರು. ಕಳೆದ ವರ್ಷ ಅತ್ಯುತ್ತಮ ಫಾರ್ಮ್‌ನಲ್ಲಿಲ್ಲದ ವಿರಾಟ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅರ್ಧಶತಕ ಗಳಿಸುವಲ್ಲಿ ವಿಫಲವಾಗಿದ್ದರು. ಇಲ್ಲದಿದ್ದರೇ ಕಳೆದ ವರ್ಷವೇ ಈ ದಾಖಲೆ ಮಾಡಬಹುದಿತ್ತು.

Virat Kohli Become Second Player In IPL To Score fifties Against All 9 Teams

ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಆವೃತ್ತಿಯಲ್ಲಿ ಆಡಿದ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ ಅರ್ಧಶತಕ ಗಳಿಸಿ ಮಿಂಚಿದ್ದರು. 49 ಎಸೆತಗಳಲ್ಲಿ 6 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 82 ರನ್ ಗಳಿಸಿ ಮಿಂಚಿದ್ದರು. ನಂತರ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೇವಲ 21 ರನ್ ಗಳಿಸಿ ಔಟಾಗಿದ್ದ ಅವರು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮತ್ತೆ ಅತ್ಯುತ್ತಮ ಫಾರ್ಮ್‌ ಪ್ರದರ್ಶಿಸಿದರು.

ಎಲ್ಲಾ ಫ್ರಾಂಚೈಸಿಗಳ ವಿರುದ್ಧ ಅಮೋಘ ಆಟ

ವಿರಾಟ್ ಕೊಹ್ಲಿ ಈಗ ಎಲ್ಲಾ 9 ಐಪಿಎಲ್ ತಂಡಗಳ ವಿರುದ್ಧ ಅರ್ಧಶತಕ ಗಳಿಸಿದ್ದಾರೆ. ನಿಷ್ಕ್ರಿಯಗೊಂಡಿರುವ ಕೊಚ್ಚಿ ಟಸ್ಕರ್ಸ್ ಕೇರಳವನ್ನು ಹೊರತುಪಡಿಸಿ ಉಳಿದ ತಂಡಗಳ ವಿರುದ್ಧ 50 ರನ್‌ಗಳನ್ನು ಬಾರಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅತಿ ಹೆಚ್ಚು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಸಿಎಸ್‌ಕೆ ವಿರುದ್ಧ ಅವರು ಬರೋಬ್ಬರಿ 9 ಅರ್ಧಶತಕ ಗಳಿಸಿ ದಾಖಲೆ ಮಾಡಿದ್ದಾರೆ.

Virat Kohli Become Second Player In IPL To Score fifties Against All 9 Teams

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 51.39 ಸರಾಸರಿ ಹೊಂದಿರುವುದು ಅವರ ಮತ್ತೊಂದು ದಾಖಲೆಯಾಗಿದೆ. ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 46 ಅರ್ಧಶತಕ ಮತ್ತು 5 ಶತಕಗಳನ್ನು ಗಳಿಸಿದ್ದಾರೆ. ಅವರು ಐಪಿಎಲ್‌ನಲ್ಲಿ 7000 ರನ್‌ಗಳ ಗಡಿಯನ್ನು ಸಮೀಪಿಸುತ್ತಿದ್ದಾರೆ. ವಿರಾಟ್ ಸದ್ಯ 218 ಇನ್ನಿಂಗ್ಸ್‌ಗಳಲ್ಲಿ 36.69 ಸರಾಸರಿಯಲ್ಲಿ 129.54 ಸ್ಟ್ರೈಕ್‌ರೇಟ್‌ನಲ್ಲಿ 6788 ರನ್ ಗಳಿಸಿದ್ದಾರೆ.

ಫಾರ್ಮ್‌ಗೆ ಮರಳಿದ ಕೊಹ್ಲಿ

ವಿರಾಟ್ ಕೊಹ್ಲಿ ಸತತವಾಗಿ ಮೂರು ವರ್ಷಗಳ ಕಾಲ ಫಾರ್ಮ್ ಅನ್ನು ಕಳೆದುಕೊಂಡಿದ್ದರು. 2022ರ ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಶತಕ ಗಳಿಸುವ ಮೂಲಕ ಮತ್ತೆ ಫಾರ್ಮ್‌ಗೆ ಮರಳಿದರು. ನಂತರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಅಜೇಯ 82 ರನ್ ಗಳಿಸುವ ಮೂಲಕ ಐತಿಹಾಸಿಕ ಗೆಲುವಿಗೆ ಕಾರಣವಾಗಿದ್ದರು. ನಂತರ ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಯಲ್ಲಿ ಶತಕ ಬಾರಿಸಿದರು. 2023ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೂಡ ಎರಡು ಶತಕ ಗಳಿಸಿದರು.

Virat Kohli Become Second Player In IPL To Score fifties Against All 9 Teams

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದರು. ಮೂರು ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಗಳಿಸಿದರು. ಮೂರು ಮಾದರಿಯಲ್ಲಿ ಶತಕ ಗಳಿಸಿರುವ ಅವರು, ಐಪಿಎಲ್‌ನಲ್ಲಿ ಕೂಡ ಉತ್ತಮ ಪ್ರದರ್ಶನ ಮುಂದುವರೆಸಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ ಭಾರತ ತಂಡದಲ್ಲಿ ದೊಡ್ಡ ಪಾತ್ರ ವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+