India vs Australia: ಮೊದಲ ಟೆಸ್ಟ್‌ಗೆ ಮುನ್ನ ಫಾರ್ಮ್‌ಗೆ ಮರಳಿದ ಕೊಹ್ಲಿ

ಬಹುನಿರೀಕ್ಷಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗಾಗಿ ಆಸ್ಟ್ರೇಲಿಯಾಗೆ ಪ್ರವಾಸ ಮಾಡಿರುವ ಭಾರತ ಈಗಾಗಲೇ ಅಭ್ಯಾಸ ಆರಂಭಿಸಿದೆ. ಟೆಸ್ಟ್ ಸರಣಿಗೆ ಮುನ್ನ ಯಾವುದೇ ಅಭ್ಯಾಸ ಪಂದ್ಯಗಳನ್ನು ಆಯೋಜಿಸಿಲ್ಲ. ಆದ್ದರಿಂದ ಬಿಸಿಸಿಐ ಭಾರತ ತಂಡದ ಆಟಗಾರರನ್ನೇ ಎರಡು ತಂಡಗಳನ್ನಾಗಿ ವಿಂಗಡಿಸಿ ಮೂರು ದಿನದ ಅಭ್ಯಾಸ ಪಂದ್ಯ ನಡೆಸುತ್ತಿದೆ. ಈ ಅಭ್ಯಾಸ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 15 ರನ್ ಗಳಿಸಿ ಔಟಾಗಿದ್ದ ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಭರವಸೆ ಮೂಡಿಸಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ 15 ರನ್ ಗಳಿಸಿ ಔಟಾಗಿದ್ದ ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 30 ರನ್ ಗಳಿಸಿದ್ದಾರೆ. 30 ರನ್ ಗಳಿಸಿದ ಅವರು ಔಟಾಗದೇ ಉಳಿದಿದ್ದು ಆತ್ಮವಿಶ್ವಾಸ ಹೆಚ್ಚಿಸಿದೆ. ಈ ವರ್ಷ ಟೆಸ್ಟ್‌ ಕ್ರಿಕೆಟ್‌ನಲ್ಲಿ ಫಾರ್ಮ್‌ ಕಂಡುಕೊಳ್ಳಲು ಒದ್ದಾಡುತ್ತಿರುವ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಫಾರ್ಮ್‌ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

virat kohli bounced back simulation game india a

ತಂಡದ ಆತ್ಮವಿಶ್ವಾಸ ಹೆಚ್ಚಿಸಿದ ಕೊಹ್ಲಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಪಡೆಯಲು ಭಾರತ ಈ ಟೆಸ್ಟ್ ಸರಣಿಯನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಕನಿಷ್ಠ 4 ಟೆಸ್ಟ್ ಗೆದ್ದರೆ ಭಾರತ ನೇರವಾಗಿ ಫೈನಲ್ ತಲುಪಲು ಅವಕಾಶ ಇರುವುದರಿಂದ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ನವೆಂಬರ್ 22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದ್ದು, ಈ ಟೆಸ್ಟ್‌ಗೆ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ರೋಹಿತ್ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ರನ್ ಗಳಿಸುವುದು ಅನಿವಾರ್ಯವಾಗಿದೆ.

ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಅತ್ತುತ್ತಮ ಪ್ರದರ್ಶನ ನೀಡಿರುವ ಇತಿಹಾಸ ಹೊಂದಿದ್ದಾರೆ. ಇದೇ ಕಾರಣಕ್ಕೆ ಕೊಹ್ಲಿ ವಿಚಾರದಲ್ಲಿ ಎಚ್ಚರಿಕೆಯಿಂದ ಇರುವಂತೆ ಆಸ್ಟ್ರೇಲಿಯಾ ಮಾಜಿ ಆಟಗಾರರು ಪಾಟ್ ಕಮ್ಮಿನ್ಸ್ ಪಡೆಗೆ ಸೂಚನೆ ಕೊಟ್ಟಿದ್ದಾರೆ. ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಯಾವಾಗ ಬೇಕಾದರೂ ಫಾರ್ಮ್‌ಗೆ ಮರಳಬಹುದು, ಆತ ಫಾರ್ಮ್‌ನಲ್ಲಿಲ್ಲ ಎಂದು ನಿರ್ಲಕ್ಷ್ಯ ಮಾಡಬೇಡಿ ಎಂದು ಹೇಳಿದ್ದಾರೆ.

ರೋಹಿತ್ ಅಲಭ್ಯ, ಬುಮ್ರಾ ನಾಯಕ

ವೈಯಕ್ತಿಕ ಕಾರಣಗಳಿಂದ ಮೊದಲ ಟೆಸ್ಟ್‌ಗೆ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ಉಪನಾಯಕ ಜಸ್ಪ್ರೀತ್ ಬುಮ್ರಾ ಪರ್ತ್‌ ಟೆಸ್ಟ್‌ನಲ್ಲಿ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಬದಲಾಗಿ ಯುವ ಆಟಗಾರ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಕಾಯುತ್ತಿದ್ದಾರೆ. ಅಭ್ಯಾಸದ ವೇಳೆ ಮೊಣಕೈಗೆ ಚಂಡು ಬಡಿದ ಬಳಿಕ ಕೆಎಲ್ ರಾಹುಲ್‌ ಫಿಟ್ ಆಗಿದ್ದು ಭಾರತದ ಆತಂಕ ದೂರವಾಗಿದೆ. ಭಾರತದ ಬೌಲಿಂಗ್ ಬಲಿಷ್ಠವಾಗಿದ್ದು, ಬ್ಯಾಟರ್ ಗಳು ಫಾರ್ಮ್‌ಗೆ ಮರಳಿದರೆ ಭಾರತ ಈ ಸರಣಿಯನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಳ್ಳಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+