Virat Kohli: ಯುಎಸ್‌ಎಗೆ ಹೊರಟ ವಿರಾಟ್ ಕೊಹ್ಲಿ; ಅಭ್ಯಾಸ ಪಂದ್ಯ ಆಡೋದು ಅನುಮಾನ!

ಟಿ20 ವಿಶ್ವಕಪ್‌ಗೆ ಭಾರತ ತಂಡ ಅಭ್ಯಾಸ ಆರಂಭಿಸಿದೆ. ತಂಡವನ್ನು ಸೇರಿಕೊಳ್ಳಲು ವಿರಾಟ್ ಕೊಹ್ಲಿ ಕೂಡ ಇಂದು ಯುಎಸ್‌ಎಗೆ ಪ್ರಯಾಣಿಸಿದ್ದಾರೆ. ಐಪಿಎಲ್‌ನಲ್ಲಿ ಸತತವಾಗಿ ಪಂದ್ಯಗಳನ್ನು ಆಡಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಭಾರತ ತಂಡವನ್ನು ಸೇರಿಕೊಳ್ಳಲು ಸಮಯಾವಕಾಶ ಕೇಳಿದ್ದರು.

ಭಾರತ ತಂಡ ಎರಡು ಬ್ಯಾಚ್‌ಗಳಲ್ಲಿ ಹೊರಡಲು ನಿರ್ಧರಿಸಿತ್ತು. ನಾಯಕ ರೋಹಿತ್ ಶರ್ಮಾ ನೇತೃತ್ವದ ಮೊದಲನೆ ಗುಂಪು ಮೇ 25 ರಂದು ನಿರ್ಗಮಿಸಿತು ಮತ್ತು ಎರಡನೆಯ ಗುಂಪು ಎರಡು ದಿನಗಳ ನಂತರ ನಿರ್ಗಮಿಸಿತು.

Virat Kohli Departs To USA for T20 World Cup

ಕೊಹ್ಲಿ ಯಾವುದೇ ಬ್ಯಾಚ್ ಜೊತೆ ಪ್ರಯಾಣಿಸದಿರಲು ನಿರ್ಧರಿಸಿದ್ದರು. ಬದಲಾಗಿ ಅವರು ಅಲ್ಪಾವಧಿಗೆ ಭಾರತದಲ್ಲಿ ಉಳಿಯಲು ನಿರ್ಧರಿಸಿದರು. ಐದು ದಿನಗಳ ಕಾಲ ಕುಟುಂಬದ ಸದಸ್ಯರ ಜೊತೆ ಕಾಲ ಕಳೆದ ವಿರಾಟ್ ಕೊಹ್ಲಿ, ಈಗ ವಿಶ್ವಕಪ್ ವೇದಿಕೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.

ಈ ಬಾರಿ ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಕೂಡ ಅತ್ಯುತ್ತಮ ಫಾರ್ಮ್‌ ಅನ್ನು ಮುಂದುವರೆಸುವ ಸೂಚನೆ ಕೊಟ್ಟಿದ್ದಾರೆ.

ಭಾರತ ತಂಡದ ಅಭ್ಯಾಸ

ನ್ಯೂಯಾರ್ಕ್‌ನಲ್ಲಿರುವ ಭಾರತ ತಂಡ ಈಗಾಗಲೇ ಅಭ್ಯಾಸ ಆರಂಭಿಸಿದೆ. ಮೇ 31ರಂದು ಬಾಂಗ್ಲಾದೇಶದ ವಿರುದ್ಧ ಭಾರತ ಅಭ್ಯಾಸ ಪಂದ್ಯವನ್ನು ಆಡಲಿದೆ. ಬಳಿಕ ಜೂನ್ 5ರಂದು ಐರ್ಲೆಂಡ್ ವಿರುದ್ಧ ಪಂದ್ಯ ಆಡುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಲೀಗ್ ಹಂತದಲ್ಲಿ ಭಾರತ ನಾಲ್ಕು ಪಂದ್ಯಗಳನ್ನಾಡಲಿದೆ. ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಲಿದ್ದು, ಎರಡನೇ ಪಂದ್ಯ ಜೂನ್ 9ರಂದು ನಡೆಯಲಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾವನ್ನು ಎದುರಿಸಲಿದೆ.

ಮೂರನೇ ಪಂದ್ಯದಲ್ಲಿ ಯುಎಸ್‌ಎ, ನಾಲ್ಕನೇ ಪಂದ್ಯದಕ್ಕೆ ಕೆನಡಾ ತಂಡವನ್ನು ಎದುರಿಲಸಿದೆ. ಮೊದಲ ಮೂರು ಪಂದ್ಯಗಳನು ನ್ಯೂಯಾರ್ಕ್‌ನಲ್ಲಿ ನಡೆದರೆ, ಕೊನೆಯ ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಅದಾದ ಬಳಿಕ ಸೂಪರ್ 8 ಹಂತದ ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+