Virat Kohli: ಮೈದಾನದಲ್ಲೇ ವಿರಾಟ್ ಕೊಹ್ಲಿ ಎಡವಟ್ಟು; ಬೇಸರಗೊಂಡ ರೋಹಿತ್ ಶರ್ಮಾ
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಬೃಹತ್ ಮುನ್ನಡೆ ಕಾಯ್ದುಕೊಂಡಿದ್ದು ಗೆಲುವಿನ ವಿಶ್ವಾಸದಲ್ಲಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 3 ವಿಕೆಟ್ ಕಳೆದುಕೊಂಡು 81 ರನ್ ಗಳಿಸುವ ಮೂಲಕ 308 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ. ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 149 ರನ್‌ಗಳಿಗೆ ಆಲೌಟ್ ಆದ ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ರೋಹಿತ್ ಶರ್ಮಾ, ಜೈಸ್ವಾಲ್, ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಆದರೆ ಕೊಹ್ಲಿ ತೆಗೆದುಕೊಂಡ ತಪ್ಪಾದ ನಿರ್ಣಯ ಅವರನ್ನು ಮೈದಾನದಿಂದ ಹೊರಬರುವಂತೆ ಮಾಡಿತು.
36 ಎಸೆತಗಳಲ್ಲಿ 17 ರನ್ ಗಳಿಸಿದ್ದ ಅವರು ಉತ್ತಮ ಲಯದಲ್ಲಿರುವಂತೆ ಕಂಡರು, ಆದರೆ ಮೆಹದಿ ಹಸನ್ ಮಿರಾಜ್ ಅವರ ಬೌಲಿಂಗ್‌ನಲ್ಲಿ ಚೆಂಡು ಅವರ ಮುಂಭಾಗದ ಪ್ಯಾಡ್‌ಗೆ ಬಡಿಯಿತು. ಅಂಪೈರ್ ಔಟ್ ಎಂದು ನಿರ್ಣಯ ಕೊಟ್ಟರು. ಆದರೆ ಕೊಹ್ಲಿ ಡಿಆರ್ ಎಸ್ ತೆಗೆದುಕೊಳ್ಳಲು ಶುಭಮನ್ ಗಿಲ್ ಜೊತೆ ಚರ್ಚೆ ನಡೆಸಿದರು. ಚರ್ಚೆ ಬಳಿಕ ಡಿಆರ್ ಎಸ್ ತೆಗೆದುಕೊಳ್ಳದೇ ಇರಲು ನಿರ್ಧರಿಸಿದರು. ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.

ಆದರೆ ಮರುಪ್ರಸಾರದಲ್ಲಿ ನೋಡಿದಾಗ ಚೆಂಡು ಬ್ಯಾಟ್‌ಗೆ ಬಡಿದಿತ್ತು, ಇಂದು ವೇಳೆ ಕೊಹ್ಲಿ ಡಿಆರ್ ಎಸ್ ತೆಗೆದುಕೊಂಡಿದ್ದರು ಅಂಪೈರ್ ನಿರ್ಧಾರವನ್ನು ಬದಲಿಸಿಕೊಳ್ಳಬೇಕಿತ್ತು. ಮರುಪ್ರಸಾರವನ್ನು ನೋಡಿದ ನಾಯಕ ರೋಹಿತ್ ಶರ್ಮಾ, ಕೊಹ್ಲಿ ಡಿಆರ್ ಎಸ್ ತೆಗೆದುಕೊಳ್ಳದೇ ಇರವುದಕ್ಕೆ ಅಸಮಾಧಾನಗೊಂಡರು. ಅವರ ಪ್ರತಿಕ್ರಿಯೆ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
12000 ರನ್ ಗಳಿಸಿದ ಕೊಹ್ಲಿ
ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 17 ರನ್ ಗಳಿಸಿದರೂ ಹೊಸ ದಾಖಲೆಯನ್ನು ಬರೆದರು. ತವರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12,000 ರನ್ ಗಳಿಸಿದ ಎರಡನೇ ಕ್ರಿಕೆಟಿಗ ಎನ್ನುವ ದಾಖಲೆ ಬರೆದರು. ವೇಗವಾಗಿ 12,000 ರನ್ ಗಳಿಸಿದ ಮೊದಲ ಕ್ರಿಕೆಟಿಗ ಎನ್ನುವ ಸಾಧನೆ ಮಾಡಿದ್ದಾರೆ.
ಸಚಿನ್ ತೆಂಡೂಲ್ಕರ್ ಮಾತ್ರ ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗನಾಗಿದ್ದಾರೆ. ಸಚಿನ್ ತೆಂಡೂಲ್ಕರ್ 267 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ ಕೇವಲ 243 ಇನ್ನಿಂಗ್ಸ್‌ಗಳಲ್ಲಿ 12000 ರನ್ ಪೂರೈಸಿದ ಸಾಧನೆ ಮಾಡಿದರು.
ಕುಮಾರ್ ಸಂಗಾಕ್ಕರ 269 ಇನ್ನಿಂಗ್ಸ್‌ಗಳಲ್ಲಿ 12,000 ರನ್ ಗಳಿಸುವ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಜಾಕ್ ಕಾಲಿಸ್ 271 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರೆ, ರಿಕಿ ಪಾಂಟಿಂಗ್ 275 ಇನ್ನಿಂಗ್ಸ್‌ಗಳಲ್ಲಿ 12,000 ರನ್ ಗಳಿಸಿದ ಕ್ರಿಕೆಟಿಗನಾಗಿದ್ದಾರೆ.












Click it and Unblock the Notifications