Virat Kohli: ಮ್ಯಾಕ್ಸ್‌ವೆಲ್ ಇನ್ನಿಂಗ್ಸ್‌ ಬಗ್ಗೆ ಗೆಳೆಯ ವಿರಾಟ್ ಕೊಹ್ಲಿ ಹೇಳಿದ್ದೇನು

ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅಮೋಘ ದ್ವಿಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯ ತಂಡಕ್ಕೆ ಜಯ ತಂದುಕೊಟ್ಟರು. ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ ಮೂರನೇ ತಂಡವಾಗಿ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

ಗ್ಲೆನ್ ಮ್ಯಾಕ್ಸ್‌ವೆಲ್ ದ್ವಿಶತಕ ಕಂಡು ಇಡೀ ಕ್ರಿಕೆಟ್ ಜಗತ್ತೇ ಬೆಚ್ಚಿಬಿದ್ದಿದೆ. ಸಚಿನ್ ತೆಂಡೂಲ್ಕರ್ ಕೂಡ ಮ್ಯಾಕ್ಸ್‌ವೆಲ್ ಇನ್ನಿಂಗ್ಸ್ ಅನ್ನು ತಮ್ಮ ಜೀವನದಲ್ಲಿ ನೋಡಿದ ಶ್ರೇಷ್ಠ ಆಟ ಎಂದು ಕರೆದಿದ್ದಾರೆ.

Virat Kohli Expresses Amazement Over Fellow RCB Stars World Cup Heroics

ಮ್ಯಾಕ್ಸ್‌ವೆಲ್ ಗೆಳೆಯರಾದ ವಿರಾಟ್ ಕೊಹ್ಲಿ, ಬೆನ್ ಸ್ಟೋಕ್ಸ್ ಮತ್ತು ಇತರ ಕ್ರಿಕೆಟಿಗರು ಕೂಡ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮ್ಯಾಕ್ಸ್‌ವೆಲ್ ಕೇವಲ 128 ಎಸೆತಗಳಲ್ಲಿ ಔಟಾಗದೆ 201 ರನ್ ಗಳಿಸಿದ ಅದ್ಭುತ ಇನ್ನಿಂಗ್ಸ್ ಅನ್ನು ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲಿ ಒಂದು ಎಂದು ಕರೆಯಲಾಗುತ್ತಿದೆ.

ಗೆಳೆಯನ ಆಟಕ್ಕೆ ಮನಸೋತ ಕೊಹ್ಲಿ

ಮ್ಯಾಕ್ಸ್‌ವೆಲ್ ಅವರ ಆಟವನ್ನು ಕಂಡು ವಿರಾಟ್ ಕೊಹ್ಲಿ ಕೂಡ ಮನಸೋತಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಲ್ಲಿ ಒಟ್ಟಿಗೆ ಆಡುವ ಕೊಹ್ಲಿ ಮತ್ತು ಮ್ಯಾಕ್ಸ್‌ವೆಲ್ ನಡುವೆ ಉತ್ತಮ ಬಾಂಧವ್ಯ ಇದೆ.

ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮ್ಯಾಕ್ಸ್‌ವೆಲ್ ಅವರ ಆಟವನ್ನು ಪ್ರಶಂಸಿದ್ದಾರೆ. " "ನೀವು ಮಾತ್ರ ಇದನ್ನು ಮಾಡಬಹುದು." ಎಂದು ಗೆಳೆಯನ ಆಟವನ್ನು ಹಾಡಿ ಹೊಗಳಿದ್ದಾರೆ.

ಆರ್‌ಸಿಬಿಯ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಕೂಡ ಮ್ಯಾಕ್ಸ್‌ವೆಲ್ ಆಟವನ್ನು ಪ್ರಶಂಸಿಲಾಗಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಅಂಗಳದಲ್ಲಿ ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧದ ಇನ್ನಿಂಗ್ಸ್‌ಗೆ ಮ್ಯಾಕ್ಸ್‌ವೆಲ್‌ರ ಇನ್ನಿಂಗ್ಸ್‌ ಅನ್ನು ಹೋಲಿಕೆ ಮಾಡಲಾಗಿದೆ.

ಮ್ಯಾಕ್ಸ್‌ವೆಲ್ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ನಡುವಿನ ಸಂಬಂಧವು ಅಂತರರಾಷ್ಟ್ರೀಯ ಕ್ರಿಕೆಟ್ ಗಡಿಗಳನ್ನು ಮೀರಿ ವಿಸ್ತರಿಸುತ್ತದೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ತಂಡದ ಸಹ ಆಟಗಾರರಾಗಿದ್ದ ಸಮಯದಲ್ಲಿ ಅವರ ಬಂಧವು ಗಾಡವಾಗಿದೆ. ಕೊಹ್ಲಿ ಮತ್ತು ಮ್ಯಾಕ್ಸ್‌ವೆಲ್ ಇಬ್ಬರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಫ್ರಾಂಚೈಸಿಯ ಭಾಗವಾಗಿದ್ದಾರೆ.

ಸೆಮಿಫೈನಲ್‌ ತಲುಪಿದ ಆಸ್ಟ್ರೇಲಿಯಾ

ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿವೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗುವುದು ಖಚಿತವಾಗಿದೆ. ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ನಾಲ್ಕನೇ ಸ್ಥಾನದಲ್ಲಿ ಸೆಮಿಫೈನಲ್ ಪ್ರವೇಶಿಸಲು ರೇಸ್‌ನಲ್ಲಿದ್ದು ಈ ಮೂರು ತಂಡಗಳಲ್ಲಿ ಸೆಮಿಫೈನಲ್‌ ಪ್ರವೇಶಿಸುವ ತಂಡ ಭಾರತದ ವಿರುದ್ಧ ಆಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+