Virat Kohli: ಅಬ್ಬರದ ಅರ್ಧಶತಕ; ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಏನೇ ಮಾಡಿದರೂ ಹೊಸ ದಾಖಲೆಯಾಗುವ ಹಂತಕ್ಕೆ ಬೆಳೆದಿದ್ದಾರೆ. ಐಪಿಎಲ್ 2025ರ ಆವೃತ್ತಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಆರ್ ಸಿಬಿ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ಹೊಸ ಸಾಧನೆ ಮಾಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 13,000 ರನ್ ಗಳಿಸಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಸಾಧನೆ ಮಾಡಿದ್ದಾರೆ. ಕ್ರಿಸ್ ಗೇಲ್, ಕೀರಾನ್ ಪೊಲಾರ್ಡ್, ಶೋಯೆಬ್ ಮಲಿಕ್ ಮತ್ತು ಅಲೆಕ್ಸ್ ಹೇಲ್ಸ್ ಬಳಿಕ ಈ ಸಾಧನೆ ಮಾಡಿದ ವಿಶ್ವದ ಐದನೇ ಬ್ಯಾಟರ್ ಎನಿಸಿಕೊಂಡರು. ಮುಂಬೈ ವಿರುದ್ಧ 29 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.

virat kohli first to reach 13000 t20 runs mi vs rcb ipl 2025

ವಿರಾಟ್ ಕೊಹ್ಲಿ 13 ಸಾವಿರ ರನ್ ಗಳಿಸಿದ್ದು, ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ 463 ಪಂದ್ಯಗಳಲ್ಲಿ 14562 ರನ್ ಗಳಿಸಿದ್ದಾರೆ. ಭಾರತದ ಮತ್ತೊಬ್ಬ ದಿಗ್ಗಜ ಬ್ಯಾಟರ್ ರೋಹಿತ್ ಶರ್ಮಾ 11,851 ರನ್ ಗಳಿಸಿದ್ದು ವಿರಾಟ್ ಕೊಹ್ಲಿ ಬಳಿಕ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

ಬುಮ್ರಾಗೆ ಸಿಕ್ಸರ್ ಸಿಡಿಸಿದ ಕೊಹ್ಲಿ

ಜಸ್ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿ ನಡುವಿನ ಪೈಪೋಟಿಯ ಬಗ್ಗೆ ಬಹಳಷ್ಟು ಕುತೂಹಲದಿಂದ ಕಾಯಲಾಗುತ್ತಿತ್ತು, ವಿರಾಟ್ ಕೊಹ್ಲಿಯವರನ್ನು ಜಸ್ಪ್ರೀತ್ ಬುಯಿಮ್ರಾ 17 ಇನ್ನಿಂಗ್ಸ್‌ಗಳಲ್ಲಿ ಐದು ಬಾರಿ ಅವರನ್ನು ಔಟ್ ಮಾಡಿದ್ದರು. ಆದರೆ ಸೋಮವಾರ ಪಂದ್ಯದಲ್ಲಿ ಕೊಹ್ಲಿ ಮೇಲುಗೈ ಸಾಧಿಸಿದರು, 93 ದಿನಗಳ ಬಳಿಕ ಕ್ರಿಕೆಟ್‌ಗೆ ಮರಳಿದ ಬುಮ್ರಾರನ್ನು ಎದುರಿಸಿದ ಮೊದಲನೇ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಸ್ವಾಗತಿಸಿದರು.

Take a Poll

ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ ಮುಂದುವರೆಸಿದರು. ಎಲ್ಲಾ ಬೌಲರ್‌ಗಳನ್ನು ದಂಡಿಸಿದರು. ಕೇವಲ 29 ಎಸೆತಗಳಲ್ಲಿ 6 ಬೌಂಡರಿಗಳು ಮತ್ತು 2 ಸಿಕ್ಸರ್‌ ಸಹಿತ ಅರ್ಧಶತಕ ಗಳಿಸಿದರು. ಇದು ಅವರ 57ನೇ ಅರ್ಧಶತಕವಾಗಿದೆ. 42 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ 67 ರನ್ ಗಳಿಸಿ ಔಟಾದರು.

ಬೃಹತ್ ಮೊತ್ತ ಕಲೆಹಾಕಿದ ಆರ್ ಸಿಬಿ

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿದೆ. ದೇವದತ್ ಪಡಿಕ್ಕಲ್ 37 ರನ್ ಗಳಿಸಿದರೆ, ನಾಯಕ ರಜತ್ ಪಟಿದಾರ್ 32 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 64 ರನ್ ಗಳಿಸಿದರು, ಜಿತೇಶ್ ಶರ್ಮಾ 19 ಎಸೆತಗಳಲ್ಲೇ 2 ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ ಅಜೇಯ 40 ರನ್ ಗಳಿಸಿ ಮಿಂಚಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+