India vs Pakistan: ಪಾಕಿಸ್ತಾನದ ವಿರುದ್ಧ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯ? ಆತಂಕ ಮೂಡಿಸಿದ ಫೋಟೊ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ. ಫೆಬ್ರವರಿ 23ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಪಂದ್ಯ ಆರಂಭವಾಗಲಿದ್ದು ಈಗಾಗಲೇ ಕ್ಷಣಗಣನೆ ಆರಂಭವಾಗಿದೆ. ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಗೆಲ್ಲುವುದು ಮುಖ್ಯವಾಗಿದ್ದು, ಕಠಿಣ ಅಭ್ಯಾಸ ನಡೆಸುತ್ತಿವೆ. ಆದರೆ ಭಾರತ ತಂಡದ ಅಭಿಮಾನಿಗಳಿಗೆ ಅದೊಂದು ಫೋಟೊ ಇದೀಗ ಆತಂಕ ಮೂಡಿಸಿದೆ.
ಪಾಕಿಸ್ತಾನದ ವಿರುದ್ಧದ ಪಂದ್ಯ ಎಂದರೆ ವಿರಾಟ್ ಕೊಹ್ಲಿ ಯಾವಾಗಲೂ ಗಮನ ಸೆಳೆಯುತ್ತಾರೆ. ಸದ್ಯ ಫಾರ್ಮ್‌ನಲ್ಲಿ ಇಲ್ಲದೇ ಇದ್ದರೂ ಮುಖ್ಯವಾದ ಪಂದ್ಯಗಳಲ್ಲಿ ಅವರು ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ ಭಾನುವಾರ ನಡೆಯುವ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಆಡುವರೇ ಎನ್ನುವ ಅನುಮಾನ ಶುರುವಾಗಿದೆ.
ಹೌದು ವಿರಾಟ್ ಕೊಹ್ಲಿ ಕಾಲಿಗೆ ಗಾಯವಾಗಿದೆಯಾ ಎನ್ನುವ ಪ್ರಶ್ನೆ ಎದುರಾಗಿದ್ದು, ಅಭ್ಯಾಸದ ವೇಳೆಯಲ್ಲಿ ಕೊಹ್ಲಿ ಫೋಟೊ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಫೋಟೊದಲ್ಲಿ ವಿರಾಟ್ ಕೊಹ್ಲಿ ಎಡಗಾಲಿಗೆ ಐಸ್ ಪ್ಯಾಕ್ ಧರಿಸಿರುವುದನ್ನು ಕಾಣಬಹುದುರ. ಶನಿವಾರ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಕ್ಕೆ ಮುನ್ನ ಮೂರು ಗಂಟೆ ಮೊದಲೇ ಆಗಮಿಸಿ ಕಠಿಣ ಅಭ್ಯಾಸ ನಡೆಸಿದ್ದಾರೆ.

ಕಣಕ್ಕಿಳಿಯುತ್ತಾರಾ ವಿರಾಟ್ ಕೊಹ್ಲಿ?
ವಿರಾಟ್ ಕೊಹ್ಲಿ ಕಾಲಿಗೆ ಐಸ್ ಪ್ಯಾಕ್ ಕಟ್ಟಿಕೊಂಡಿರುವುದು ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ. ಹೆಚ್ಚು ಹೊತ್ತು ಅಭ್ಯಾಸ ಮಾಡಿದ್ದರಿಂದ ಅವರ ಕಾಲಿಗೆ ನೋವಾಗಿರಬಹುದು ಎಂದು ಹೇಳಲಾಗಿದೆ. ಕೊಹ್ಲಿ ಗಾಯದ ಬಗ್ಗೆ ಅಧಿಕೃತವಾಗಿ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.
ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲನೇ ಪಂದ್ಯದಲ್ಲಿ ಮೊಣಕಾಲಿನ ಗಾಯದಿಂದಾಗಿ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಆದರೆ ಈ ಬಾರಿ ಅವರು ಹಿಮ್ಮಡಿ ಬಳಿ ಐಸ್ ಪ್ಯಾಕ್ ಕಟ್ಟಿಕೊಂಡಿದ್ದು, ಇದು ಹಳೆಯ ಗಾಯವಲ್ಲ ಎನ್ನುವುದು ಖಚಿತವಾಗಿದೆ. ಗಾಯ ಗಂಭೀರವಾಗದೇ ಇರಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
ಒಂದು ವೇಳೆ ವಿರಾಟ್ ಕೊಹ್ಲಿ ಅನಿವಾರ್ಯವಾಗಿ ಗಾಯಗೊಂಡು ಪಂದ್ಯದಿಂದ ಹೊರಗುಳಿದರೆ ಅವರ ಬದಲಾಗಿ ರಿಷಬ್ ಪಂತ್ ಆಡುವ ಸಾಧ್ಯತೆ ಇದೆ. ಆದರೆ ರಿಷಬ್ ಪಂತ್ ಕೂಡ ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದ್ದು ಅವರ ಬದಲಾಗಿ ಯಾರು ಕಣಕ್ಕಿಳಿಯುತ್ತಾರೆ ನೋಡಬೇಕಿದೆ.












Click it and Unblock the Notifications