Ind vs Eng: ಕಟಕ್ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದ ಸಂದರ್ಭದಲ್ಲಿ ಮೊಣಕಾಲು ಸಮಸ್ಯೆಯಿಂದ ಬಳಲುತ್ತಿದ್ದ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿಲ್ಲ. ಇದೀಗ ಎರಡನೇ ಪಂದ್ಯಕ್ಕೆ ಮುನ್ನ ವಿರಾಟ್ ಕೊಹ್ಲಿ ಫಿಟ್ ಆಗಿದ್ದು ಫೆಬ್ರವರಿ 9 ರಂದು ಭಾನುವಾರ ಕಟಕ್‌ನಲ್ಲಿ ನಡೆಯಲಿರುವ ಸರಣಿಯ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ನಾಗ್ಪುರದಲ್ಲಿ ನಡೆದ ಮೊದಲನೇ ಪಂದ್ಯದಲ್ಲಿ ಟಾಸ್ ಬಳಿಕ ಮಾತನಾಡಿದ್ದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬಲ ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿದ್ದು ತಂಡದಿಂದ ಹೊರಗುಳಿಯಲಿದ್ದಾರೆ ಎಂದು ಹೇಳಿದ್ದರು. ಇದೀಗ ಕೊಹ್ಲಿ ಗಾಯದ ಬಗ್ಗೆ ವರದಿಯೊಂದು ಬಂದಿದ್ದು ಟೈಮ್ಸ್ ಆಫ್ ಇಂಡಿಯಾ ಪ್ರಕಾರ, ಬುಧವಾರ ಅಭ್ಯಾಸದ ಸಮಯದಲ್ಲಿ ವಿರಾಟ್ ಕೊಹ್ಲಿ ಫಿಟ್ ಆಗಿದ್ದರು, ಆದರೆ ತರಬೇತಿಯ ಬಳಿಕ ತಂಡದ ಹೋಟೆಲ್‌ಗೆ ತಲುಪಿದಾಗ ಮೊಣಕಾಲು ಊದಿಕೊಂಡಿತ್ತು, ಆದ್ದರಿಂದ ಕೊನೆಯ ಕ್ಷಣದಲ್ಲಿ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದ್ದು ಭಾನುವಾರ ನಡೆಯುವ ಪಂದ್ಯದಲ್ಲಿ ಅವರು ಆಡಲಿದ್ದಾರೆ ಎಂದು ಹೇಳಲಾಗಿದೆ.

"ಅಭ್ಯಾಸದ ಸಮಯದಲ್ಲಿ ಅವರ ಬಲ ಮೊಣಕಾಲು ಚನ್ನಾಗಿತ್ತು ಆದರೆ ಹೋಟೆಲ್‌ಗೆ ವಾಪಸಾದ ಬಳಿಕ ಅದು ಊದಿಕೊಂಡಿತ್ತು. ಆದರೆ ಅದು ತೀರ ಗಂಭೀರವಲ್ಲ ಎನಿಸುತ್ತಿದ್ದು, ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ" ಎಂದು ತಂಡದೊಳಗಿನ ಮೂಲಗಳು ತಿಳಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ತಿಳಿಸಿದೆ.
ವಿರಾಟ್ ಕೊಹ್ಲಿ ಗಾಯಗೊಂಡ ಕಾರಣ ಯಶಸ್ವಿ ಜೈಸ್ವಾಲ್ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದರು. ಶುಭಮನ್ ಗಿಲ್ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಆಡಿದರು. ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ
ವಿರಾಟ್ ಕೊಹ್ಲಿ ಕಳೆದ ಕೆಲವು ವರ್ಷಗಳಿಂದ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ವಿಫಲವಾದ ಬಳಿಕ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಾಪಸಾತಿ ಮಾಡುವ ವಿಶ್ವಾಸದಲ್ಲಿದ್ದಾರೆ. ಫೆಬ್ರವರಿ 18ರಿಂದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭವಾಗಲಿದ್ದು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ರನ್ ಗಳಿಸುವ ಮೂಲಕ ವಿಶ್ವಾಸ ಹೆಚ್ಚಿಸಿಕೊಳ್ಳಲು ಕೊಹ್ಲಿ ಪ್ರಯತ್ನಿಸುತ್ತಿದ್ದಾರೆ.
ಭಾರತ ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.












Click it and Unblock the Notifications