ಲಂಡನ್‌ನಲ್ಲಿ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸಿದ ವಿರಾಟ್ ಕೊಹ್ಲಿ

ಮುಂಬೈ, ಜುಲೈ 17; ಸತತ ಬ್ಯಾಟಿಂಗ್ ವೈಫಲ್ಯದಿಂದ ವಿರಾಟ್ ಕೊಹ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಜುಲೈ 22ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ವಿರಾಟ್ ಕೊಹ್ಲಿ ಸ್ಥಾನ ಪಡೆದಿಲ್ಲ. ವಿಶ್ರಾಂತಿ ನೆಪದಲ್ಲಿ ವಿರಾಟ್ ಕೊಹ್ಲಿಯನ್ನು ಬಿಸಿಸಿಐ ಕಡೆಗಣಿಸಿತಾ? ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿದೆ.

ಸತತ ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಕೆಲಸ ಹೊರೆಯನ್ನು ಕಡಿಮೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ವಿರಾಟ್ ಕೊಹ್ಲಿ ಆಗಸ್ಟ್ 27ರಿಂದ ಆರಂಭವಾಗಲಿರುವ ಏಷ್ಯಾಕಪ್‌ ಪಂದ್ಯಾವಳಿಯಲ್ಲಿ ಆಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ, ತಮ್ಮ ಬ್ಯಾಟಿಂಗ್ ಲಯ ಕಂಡುಕೊಳ್ಳಲು ವಿಫಲರಾಗಿದ್ದಾರೆ, ಟೆಸ್ಟ್, ಟಿ20 ಪಂದ್ಯದಲ್ಲಿ ಫಾರ್ಮ್‌ಗೆ ಮರಳಲು ವಿಫಲರಾದ ಬಳಿಕ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ತೊಡೆಸಂದು ನೋವಿನಿಂದ ಆಯ್ಕೆಯಾಗಿರಲಿಲ್ಲ, ಎರಡನೇ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದ ಕೊಹ್ಲಿ ಅಲ್ಲೂ ನಿರಾಸೆ ಮೂಡಿಸಿದ್ದರು. ಭಾನುವಾರ ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುತ್ತಾರಾ? ಎಂದು ನಿರೀಕ್ಷೆ ಮೂಡಿಸಿದ್ದಾರೆ.

Virat Kohli Likely To Spend Time With His Family In London After The Series Against England

ಇಂಗ್ಲೆಂಡ್ ವಿರುದ್ಧದ ಸರಣಿ ಮುಗಿದ ನಂತರ ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲೇ ಉಳಿಯಲಿದ್ದು, ಕುಟುಂಬದ ಜೊತೆ ಸಮಯವನ್ನು ಕಳೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಲಂಡನ್‌ನಲ್ಲೇ ವಾಸ್ತವ್ಯ ಹೂಡಲಿದ್ದು ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳ ಜೊತೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

"ಕೊಹ್ಲಿ ತಾಯಿ ಕೂಡ ಈ ಸಮಯದಲ್ಲಿ ಅವರ ಜೊತೆಯಾಗಲಿದ್ದು, ಕುಟುಂಬದ ಸದಸ್ಯರ ಜೊತೆ ಇರಲಿದ್ದಾರೆ. ಆಗಸ್ಟ್ 1ರಿಂದ ಏಷ್ಯಾ ಕಪ್‌ ಪಂದ್ಯಗಳಿಗಾಗಿ ಅಭ್ಯಾಸ ಪ್ರಾರಂಭಿಸುತ್ತಾರೆ" ಎಂದು ವರದಿಯಾಗಿದೆ.

Virat Kohli Likely To Spend Time With His Family In London After The Series Against England

ವೆಸ್ಟ್‌ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ; ವೆಸ್ಟ್ ಇಂಡೀಸ್ ಪ್ರವಾಸದಿಂದ ಜಸ್ಪ್ರೀತ್ ಬುಮ್ರಾ ಕೂಡ ವಿಶ್ರಾಂತಿ ಪಡೆಯಲಿದ್ದಾರೆ. ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದರೆ, ರೋಹಿತ್ ಶರ್ಮಾ ಟಿ 20 ಸರಣಿಯಲ್ಲಿ ನಾಯಕತ್ವ ವಹಿಸಲಿದ್ದಾರೆ. ಏಕದಿನ ಪಂದ್ಯಗಳಿಂದ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದು, ಐದು ಟಿ20 ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಭಾನುವಾರ (ಜುಲೈ 17) ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್‌ನಲ್ಲಿ ಇಂಗ್ಲೆಂಟ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ಒಂದು ಬಾರಿ ಜಯ ಸಾಧಿಸಿದ್ದು ಕೊನೆಯ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+