ಮೈದಾನದಾಚೆಗೂ ವಿರಾಟ್ ಕೊಹ್ಲಿ ದೊಡ್ಡ ದಾಖಲೆ: ಮೆಸ್ಸಿ, ರೊನಾಲ್ಡೋ ಸಾಲಿಗೆ ಸೇರಿದ ದಿಗ್ಗಜ ಕ್ರಿಕೆಟಿಗ!
ಟೀಮ್ ಇಂಡಿಯಾದ ಮಾಜಿ ನಾಯಕ ಆಧುನಿಕ ಕ್ರಿಕೆಟ್‌ನ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಕ್ರಿಕೆಟ್ ಅಂಗಳದಲ್ಲಿ ಪ್ರತಿ ಬಾರಿಯೂ ಒಂದಲ್ಲಾ ಒಂದು ಹೊಸ ದಾಖಲೆಗಳನ್ನು ಬರೆಯುತ್ತಲೇ ಇದ್ದಾರೆ. ಆದರೆ ವಿರಾಟ್ ಕೊಹ್ಲಿ ಇದೀಗ ಮೈದಾನದಾಚೆಗೂ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಅವರು ಕ್ರೀಡಾಲೋಕದ ಜಾಗತಿಕ ತಾರೆಯರಾದ ಲಿಯೋನೆಲ್ ಮೆಸ್ಸಿ ಹಾಗೂ ಕ್ರಿಶ್ಚಿಯಾನೋ ರೊನಾಲ್ಡೋ ಸಾಲಿಗೆ ಸೇರಿದ್ದಾರೆ. ಅಂದಹಾಗೆ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿರುವುದು ಇನ್ಸ್ಟಾಗ್ರಾಮ್ ಫಾಲೋವರ್ಸ್‌ಗಳ ಸಂಖ್ಯೆಯಲ್ಲಿ.
ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈಗ 250 ಮಿಲಿಯನ್‌ಗೂ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಏಷ್ಯಾದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ. ಇನ್ನು ವಿಶ್ವ ಮಟ್ಟದಲ್ಲಿಯೂ ಈ ಸಾಧನೆಯನ್ನು ಕೇವಲ ಇಬ್ಬರು ಕ್ರೀಡಾಪಟುಗಳು ಮಾತ್ರವೇ ಮಾಡಿದ್ದು ಅರ್ಜೆಂಟಿನಾದ ದಿಗ್ಗಜ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಹಾಗೂ ಪೋರ್ಚುಗಲ್‌ನ ಸ್ಟಾರ್ ಆಟಗಾರ ಕ್ರಿಶ್ಚಿಯಾನೋ ರೊನಾಲ್ಡೋ ಈ ಸಾಧನೆ ಮಾಡಿದ ಉಳಿದ ಇಬ್ಬರು ಕ್ರೀಡಾಪಟುಗಳಾಗಿದ್ದಾರೆ.

ವಿರಾಟ್ ಕೊಹ್ಲಿ 2008ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಬಳಿಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯ, ಕೌಶಲ್ಯ ಹಾಗೂ ಸ್ಥಿರ ಪ್ರದರ್ಶನದ ಜೊತೆಗೆ ಮೈದಾನದ ಒಳಗೆ ಮತ್ತು ಹೊರಗಿನ ವ್ಯಕ್ತಿತ್ವದಿಂದಾಗಿ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಅಭಿಮಾನ ಹೊಂದಿದ್ದಾರೆ. ಸುದೀರ್ಘ ಕಾಲ ಕ್ರಿಕೆಟ್‌ನಲ್ಲಿ ನೀಡುತ್ತಿರುವ ಅದ್ಭುತ ಪ್ರದರ್ಶನದಿಂದಾಗಿ ವಿಶ್ವದಾದ್ಯಂತ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರೀಡಾಪಟುಗಳ ಪೈಕಿ ವಿರಾಟ್ ಕೊಹ್ಲಿ ಕೂಡ ಒಬ್ಬರಾಗಿದ್ದಾರೆ.
ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯವಾಗಿದ್ದು ತಮ್ಮ ಅಭಿಮಾನಿಗಳೊಂದಿಗೆ ಯಾವಾಗಲೂ ಸಂಪರ್ಕದಲ್ಲಿರುವ ಪ್ರಯತ್ನದಲ್ಲಿರುತ್ತಾರೆ. ಈ ಮೂಲಕ ಗಡಿಗಳನ್ನು ಮೀರಿ ಕ್ರಿಕೆಟ್ ಪ್ರೇಮಿಗಳಿಗೆ ಕೊಹ್ಲಿ ಹತ್ತಿರವಾಗಿದ್ದಾರೆ. ಇನ್ಸ್ಟಾಗ್ರಾಮ್ ತಮ್ಮ ಖಾಸಗಿ ಜೀವನದ ಕೆಲ ಸಂಗತಿಗಳನ್ನು, ತರಬೇತಿಯ ಮಾಹಿತಿಗಳನ್ನು ಹಾಗೂ ಕ್ರಿಕೆಟ್ ವೃತ್ತಿಜೀವನದ ವಿಚಾರಗಳನ್ನು ಹಂಚಿಕೊಳ್ಳಲು ವೇದಿಕೆಯಾಗಿ ಬಳಸಿಕೊಂಡಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೇಲೆ ಕೊಹ್ಲಿ ಚಿತ್ತ: ವಿರಾಟ್ ಕೊಹ್ಲಿ ಚಿತ್ತ ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನತ್ತ ನೆಟ್ಟಿದೆ. ಐಪಿಎಲ್‌ನಲ್ಲಿ ಭಾಗವಹಿಸಿದ್ದ ವರಾಟ್ ಕೊಹ್ಲಿ ಈ ಬಾರಿಯ ಟೂರ್‌ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ಮಿಂಚಿದ್ದರು. ಟೂರ್ನಿಯಲ್ಲಿ 2 ಶತಕ ಸಿಡಿಸಿದ್ದು 639ರನ್‌ಗಳನ್ನು ಗಳಿಸಿದ ಸಾಧನೆ ಮಾಡಿದ್ದಾರೆ. ಆದರೆ ಆರ್‌ಸಿಬಿ ಟೂರ್ನಿಯಲ್ಲಿ ಲೀಗ್ ಹಂತದಿಂದಲೇ ಹೊರಬಿದ್ದ ಕಾರಣ ಕೊಹ್ಲಿ ಅವರ ಐಪಿಎಲ್ ಅಭಿಯಾನ ಕೂಡ ಅಂತ್ಯವಾಗಿದೆ. ಇದೀಗ ವಿರಾಟ್ ಕೊಹ್ಲಿ ಜೂನ್ 6ರಿಂದ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನತ್ತ ಗಮನಹರಿಸಿದ್ದು ಈಗಾಗಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದಿದ್ದಾರೆ












Click it and Unblock the Notifications