Ind vs Eng: ವಿರಾಟ್ ಕೊಹ್ಲಿಗೆ ಗಾಯ; ಜೈಸ್ವಾಲ್, ರಾಣಾಗೆ ಒಲಿದ ಅದೃಷ್ಟ
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿರುವ ಭಾರತ, ಇದೀಗ ಏಕದಿನ ಸರಣಿ ಗೆಲುವಿನತ್ತ ಕಣ್ಣಿಟ್ಟಿದೆ. ಗುರುವಾರ ನಾಗ್ಪುರದಲ್ಲಿ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದ್ದು ಟಾಸ್ ಗೆದ್ದಿರುವ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
ಮೊಣಕಾಲು ನೋವಿನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಅನಿವಾರ್ಯವಾಗಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಹರ್ಷಿತ್ ರಾಣಾ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮಾತನಾಡಿ, ನಾವು ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಏಕದಿನ ಪಂದ್ಯಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಜೋ ರೂಟ್ ಅವರನ್ನು ತಂಡಕ್ಕೆ ಮತ್ತೆ ಸ್ವಾಗತಿಸಲು ಖುಷಿಯಾಗುತ್ತದೆ. ಎಲ್ಲರೂ ಆತ್ಮವಿಶ್ವಾಸದಿಂದ ಇದ್ದಾರೆ. ಚಾಂಪಿಯನ್ಸ್ ಟ್ರೋಫಿ ಇರುವುದರಿಂದ ಇದು ಕಠಿಣ ಪರೀಕ್ಷೆಯಾಗಿದೆ ಎಂದು ಹೇಳಿದರು.
ಟಾಸ್ ಸೋತ ರೋಹಿತ್ ಶರ್ಮಾ ಮಾತನಾಡಿ, ನಾವು ಕೂಡ ಮೊದಲು ಬೌಲಿಂಗ್ ಮಾಡಲು ಬಯಸಿದ್ದೆವು. ಆರಂಭದಲ್ಲೇ ವಿಕೆಟ್ ಪಡೆಯಲು ನಾವು ಆಕ್ರಮಣಕಾರಿ ಬೌಲಿಂಗ್ ಮಾಡಬೇಕು. ಉತ್ತಮವಾಗಿ ಪ್ರದರ್ಶನ ನೀಡಲು ಇದು ಒಳ್ಳೆ ಅವಕಾಶ, ವಿರಾಟ್ ಕೊಹ್ಲಿ ಅವರಿಗೆ ಬುಧವಾರ ರಾತ್ರಿ ಮೊಣಕಾಲು ಸಮಸ್ಯೆಯಾಗಿದ್ದು ಅವರು ಇಂದು ಆಡುತ್ತಿಲ್ಲ. ಯಶಸ್ವಿ ಜೈಸ್ವಾಲ್ ಮತ್ತು ಹರ್ಷಿತ್ ರಾಣಾ ಮೊದಲ ಪಂದ್ಯ ಆಡಲಿದ್ದಾರೆ ಎಂದರು.
ಉಭಯ ತಂಡಗಳ ಪ್ಲೇಯಿಂಗ್ 11
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.
ಇಂಗ್ಲೆಂಡ್: ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.












Click it and Unblock the Notifications