Virat Kohli: ಮೂರು ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್‌ ಕೊಹ್ಲಿ

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್‌ ಕೊಹ್ಲಿ, ರಾಜಸ್ಥಾನ ರಾಯಲ್ಸ್ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವ ಕನಸಿನಲ್ಲಿರುವ ವಿರಾಟ್‌ ಸೊಗಸಾದ ಪ್ರದರ್ಶನ ನೀಡಿದ್ದಾರೆ. ಅವರು ಜೈಪುರ್‌ದಲ್ಲಿ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸುವ ಹುಮ್ಮಸ್ಸಿನಲ್ಲಿದ್ದಾರೆ.

ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಪ್ರದರ್ಶನದ ಮೇಲೆ ಎಲ್ಲರ ದೃಷ್ಟಿ ನೆಟ್ಟಿರುತ್ತದೆ. ಕೊಹ್ಲಿ ಪ್ರಸ್ತುತ ಆರೆಂಜ್ ಕ್ಯಾಪ್ ಅನ್ನು ಹೊಂದಿದ್ದಾರೆ. ಇವರು 4 ಪಂದ್ಯಗಳಲ್ಲಿ 67.67 ಸರಾಸರಿಯಲ್ಲಿ 203 ರನ್ ಗಳಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿಯ ಬ್ಯಾಟ್‌ನಿಂದ ಮೂರು ದಾಖಲೆಗಳನ್ನು ನಿರ್ಮಿಸುವ ಕನಸಿನಲ್ಲಿದ್ದಾರೆ.

Virat Kohli Poised to Make History Closing in on Breaking Three Records

ಯಾವ ದಾಖಲೆ ಮೇಲೆ ವಿರಾಟ್ ಕಣ್ಣು?

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಅವರು 241 ಪಂದ್ಯಗಳಲ್ಲಿ 7466 ರನ್ ಗಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 34 ರನ್ ಗಳಿಸುವಲ್ಲಿ ಯಶಸ್ವಿಯಾದರೆ, 7500 ರನ್ ಗಡಿ ಮುಟ್ಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಆರ್‌ಸಿಬಿ ಪರ ಕೊಹ್ಲಿ ಐಪಿಎಲ್‌ನಲ್ಲಿ ಇದುವರೆಗೆ 242 ಸಿಕ್ಸರ್‌ಗಳನ್ನು ಬಾರಿಸಿದ್ದು, ಇನ್ನು 8 ಸಿಕ್ಸರ್‌ಗಳನ್ನು ಬಾರಿಸಿದರೆ, ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಮತ್ತು ರೋಹಿತ್ ಶರ್ಮಾ ನಂತರ ಐಪಿಎಲ್‌ನಲ್ಲಿ 250 ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಶಿಖರ್‌ ಧವನ್‌ ದಾಖಲೆ ಅಳಿಸುವ ವಿಶ್ವಾಸದಲ್ಲಿ ಕೊಹ್ಲಿ

ಐಪಿಎಲ್‌ನಲ್ಲಿ ಹಲವು ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿರುವ ವಿರಾಟ್‌ ಮತ್ತೊಂದು ದಾಖಲೆ ಬರೆಯಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಬಲ್ಲ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿರಾಟ್‌ ರಾಜಸ್ಥಾನ ವಿರುದ್ಧ 29 ಪಂದ್ಯಗಳಲ್ಲಿ 618 ರನ್ ಗಳಿಸಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ 62 ರನ್ ಗಳಿಸಿದರೆ ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ.

Virat Kohli Poised to Make History Closing in on Breaking Three Records

ರಾಜಸ್ಥಾನ ರಾಯಲ್ಸ್ ವಿರುದ್ಧ ಐಪಿಎಲ್‌ನಲ್ಲಿ ಶಿಖರ್ ಧವನ್ 679 ರನ್ ಗಳಿಸಿದ್ದು, ಮೊದಲ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಕೊಹ್ಲಿ ಪ್ರಸ್ತುತ 5ನೇ ಸ್ಥಾನದಲ್ಲಿದ್ದು, ಎಬಿ ಡಿವಿಲಿಯರ್ಸ್, ಕೆಎಲ್ ರಾಹುಲ್, ಸುರೇಶ್ ರೈನಾ ಮತ್ತು ದಿನೇಶ್ ಕಾರ್ತಿಕ್ ಈ ಪಟ್ಟಿಯಲ್ಲಿ ಮುಂದಿದ್ದಾರೆ.

8000 ರನ್‌ ದಾಖಲೆಯ ಸನಿಹ

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ಆಟಗಾರರು ಒಂದೇ ತಂಡದಲ್ಲಿ ಆಡುವಾಗ 8000 ರನ್‌ಗಳ ಗಡಿಯನ್ನು ಮುಟ್ಟಿಲ್ಲ. ಆದರೆ ವಿರಾಟ್ ಕೊಹ್ಲಿ ಅವರು ವಿಶ್ವ ಕ್ರಿಕೆಟ್‌ನಲ್ಲಿ ಯಾವುದೇ ಒಂದು ಫ್ರಾಂಚೈಸಿ ಅಥವಾ ತಂಡಕ್ಕಾಗಿ ಆಡುವಾಗ ಈ ದಾಖಲೆಯನ್ನು ಮಾಡುವ ಅವಕಾಶವನ್ನು ಹೊಂದಿದ್ದಾರೆ. ಕೊಹ್ಲಿ ಆರ್‌ಸಿಬಿಗಾಗಿ 256 ಪಂದ್ಯಗಳಲ್ಲಿ 37.75 ಸರಾಸರಿಯಲ್ಲಿ 7890 ರನ್ ಗಳಿಸಿದ್ದಾರೆ ಮತ್ತು 8000 ರನ್‌ಗಳ ಗಡಿಯನ್ನು ಮುಟ್ಟಲು ಅವರಿಗೆ ಇನ್ನೂ 110 ರನ್‌ಗಳನ್ನು ಸಿಡಿಸಿದರೆ ಈ ದಾಖಲೆಗೂ ತಮ್ಮ ಹೆಸರನ್ನು ನಮೂದಿಸಬಹುದು.

ಪ್ರಸ್ತುತ ಐಪಿಎಲ್‌ನಲ್ಲಿ ಆರ್‌ಸಿಬಿ ಇನ್ನು ಹಲವು ಪಂದ್ಯಗಳನ್ನು ಆಡಲಿದೆ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 8 ಸಾವಿರ ರನ್‌ ಬಾರಿಸುವುದು ಇದೇ ಲೀಗ್‌ನಲ್ಲಿ ಸಾಧ್ಯ. ಅದು ಯಾವಗ ಎನ್ನುವುದುನ್ನು ಕಾದು ನೋಡಬೇಕಿದೆ ಅಷ್ಟೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+