India vs Pakistan: ಪಾಕಿಸ್ತಾನದ ವಿರುದ್ಧ ಅಬ್ಬರಿಸಲು ವಿರಾಟ್ ಕೊಹ್ಲಿ ಮಾಸ್ಟರ್ ಪ್ಲಾನ್!
ಐಸಿಸಿ ಪಂದ್ಯಾವಳಿಯಲ್ಲಿ ಮತ್ತೊಮ್ಮೆ ಭಾರತ ಪಾಕಿಸ್ತಾನ ಮುಖಾಮುಖಿಯಾಗಲು ಸಜ್ಜಾಗಿವೆ. ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಒಂದೇ ಗುಂಪಿನಲ್ಲಿ ಆಡುತ್ತಿರುವ ಭಾರತ ಮತ್ತು ಪಾಕಿಸ್ತಾನ ಭಾನುವಾರ (ಫೆಬ್ರವರಿ 23) ರಂದು ಮುಖಾಮುಖಿಯಾಗಲಿವೆ. ಸೆಮಿಫೈನಲ್ ದೃಷ್ಟಿಯಿಂದ ಎರಡೂ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದ್ದು ಗೆಲ್ಲಲೇಬೇಕಾದ ಒತ್ತಡದಲ್ಲಿವೆ.
ಸಾಂಪ್ರದಾಯಿಕ ಎದುರಾಳಿಯನ್ನು ಮಣಿಸಲು ಭಾರತ ಕಠಿಣ ಅಭ್ಯಾಸ ನಡೆಸುತ್ತಿದೆ. 2017ರ ಫೈನಲ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸೋಲನುಭವಿಸುವ ಮೂಲಕ ಪ್ರಶಸ್ತಿ ಗೆಲುವಿನ ಕನಸು ಭಗ್ನವಾಗಿತ್ತು. ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದ್ದು, ಪಾಕಿಸ್ತಾನವನ್ನು ಪಂದ್ಯಾವಳಿಯಿಂದಲೇ ಹೊರ ಹಾಕಬಹುದಾಗಿದೆ.

ವಿರಾಟ್ ಕೊಹ್ಲಿ ಭರ್ಜರಿ ಸಿದ್ಧತೆ
ಪಾಕಿಸ್ತಾನದ ವಿರುದ್ಧದ ಪಂದ್ಯ ಎಂದರೆ ವಿರಾಟ್ ಕೊಹ್ಲಿ ಯಾವಾಗಲೂ ಭಾರತದ ನೆಚ್ಚಿನ ಬ್ಯಾಟರ್ ಆಗಿದ್ದಾರೆ. 2022ರ ಟಿ20 ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಇನ್ನಿಂಗ್ಸ್ ಸಾರ್ವಕಾಲಿಕ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಸೋಲಿನ ಅಂಚಿಗೆ ಭಾರತವನ್ನು ಪವಾಡ ಎನ್ನುವಂತೆ ಗೆಲ್ಲಿಸಿದ್ದರು ವಿರಾಟ್ ಕೊಹ್ಲಿ. ಉತ್ತಮ ಫಾರ್ಮ್‌ನಲ್ಲಿ ಇಲ್ಲದೇ ಇದ್ದರು ಪಾಕಿಸ್ತಾನ ಎಂದಾಗ ಕೊಹ್ಲಿ ನಿರೀಕ್ಷೆಗೂ ಮೀರಿ ಉತ್ತಮ ಪ್ರದರ್ಶನ ನೀಡಿದ್ದಾರೆ.
ಬಾಂಗ್ಲಾದೇಶದ ವಿರುದ್ಧ 22 ರನ್ ಗಳಿಸಿ ಔಟಾಗಿರುವ ವಿರಾಟ್ ಕೊಹ್ಲಿ ಪಾಕಿಸ್ತಾನದ ವಿರುದ್ಧ ಉತ್ತಮ ಪ್ರದರ್ಶನ ನೀಡಲು ವಿಶೇಷವಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಎಲ್ಲಾ ಆಟಗಾರರಿಗಿಂತ 3 ಗಂಟೆಗಳು ಮುಂಚಿತವಾಗಿ ಅವರು ಬ್ಯಾಟಿಂಗ್ ಅಭ್ಯಾಸ ನಡೆಸಲು ಹಾಜರಾಗುತ್ತಿದ್ದಾರೆ.
ಟೈಮ್ಸ್ ನೌ ವರದಿ ಮಾಡಿರುವ, ಕೊಹ್ಲಿ 3 ಗಂಟೆಗೆ ಮುಂಚಿತವಾಗಿ ಅಭ್ಯಾಸಕ್ಕೆ ಆಗಮಿಸಿದ್ದಾರೆ. ಯುಎಇ ಕ್ರಿಕೆಟ್ ತಂಡದ ಪ್ರಮುಖ ಬೌಲರ್‌ಗಳನ್ನು ತನಗೆ ಬೌಲಿಂಗ್ ಮಾಡುವಂತೆ ಕೊಹ್ಲಿ ಮನವಿ ಮಾಡಿದ್ದು, ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಸಹಾಯಕ ಕೋಚ್ ಅಭಿಷೇಕ್ ನಾಯರ್ ಕೂಡ ಕೊಹ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಲು ಸಹಾಯ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಸದ್ಯ ಉತ್ತಮ ಫಾರ್ಮ್‌ನಲ್ಲಿ ಇಲ್ಲದೇ ಹೋದರೂ ಭಾರತ ತಂಡ ಕಷ್ಟದ ಪರಿಸ್ಥಿತಿಯಲ್ಲಿದ್ದಾಗ ನೆರವಾಗುವ ಸಾಮರ್ಥ್ಯ ಅವರಲ್ಲಿದೆ. ಇಷ್ಟು ದಿನ ತಮ್ಮ ಬ್ಯಾಟಿಂಗ್ ವೈಫಲ್ಯಕ್ಕೆ ಟೀಕೆಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿಗೆ ತಮ್ಮ ಬ್ಯಾಟ್‌ನಿಂದಲೇ ಉತ್ತರ ಕೊಡುವ ಅವಕಾಶ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧ ಕೊಹ್ಲಿ ಏನಾದರೂ ದೊಡ್ಡ ಇನ್ನಿಂಗ್ಸ್ ಆಡಿದರೆ ಅವರು ಮತ್ತೊಮ್ಮೆ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಕಿಂಗ್ ಆಗಲಿದ್ದಾರೆ.
ರೋಹಿತ್ ಶರ್ಮಾ, ಕೆಎಲ್ ರಾಹುಲ್ ಬಾಂಗ್ಲಾದೇಶ ವಿರುದ್ಧ ಉತ್ತಮ ರನ್ ಗಳಿಸುವ ಮೂಲಕ ಫಾರ್ಮ್‌ಗೆ ಮರಳಿದ್ದಾರೆ. ಶುಭಮನ್ ಗಿಲ್ ಶತಕ ಗಳಿಸಿದ್ದಾರೆ. ಭಾರತದ ಬೌಲಿಂಗ್ ಕೂಡ ಬಲಿಷ್ಠವಾಗಿದ್ದು ಪಾಕಿಸ್ತಾನವನ್ನು ಕಟ್ಟಿಹಾಕಲು ಸಜ್ಜಾಗಿದ್ದಾರೆ. ಭಾನುವಾರ (ಫೆಬ್ರವರಿ 23) ಮಧ್ಯಾಹ್ನ 2.30ಕ್ಕೆ ಪಂದ್ಯ ಆರಂಭವಾಗಲಿದೆ.












Click it and Unblock the Notifications