Virat Kohli: 146 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ದಾಖಲೆ ಮಾಡಿದ ವಿರಾಟ್ ಕೊಹ್ಲಿ
ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಭಾರತ ಕನಸು ಕನಸಾಗೇ ಉಳಿದಿದೆ. ಡಿಸೆಂಬರ್ 26ರಂದು ಶುರುವಾರ ಬಾಕ್ಸಿಂಗ್ ಡೇ ಟೆಸ್ಟ್ ಮೂರೇ ದಿನದಲ್ಲಿ ಮುಕ್ತಾಯವಾಗಿದೆ. ಭಾರತ ಹರಿಣಗಳ ವಿರುದ್ಧ ಹೀನಾಯ ಸೋಲು ಕಂಡಿದೆ.
ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 131 ರನ್ಗಳಿಗೆ ಆಲೌಟ್ ಆದ ಭಾರತ ಇನ್ನಿಂಗ್ಸ್ ಮತ್ತು 32 ರನ್ಗಳಿಂದ ಸೋಲು ಕಂಡಿದೆ. ಮೊದಲನೇ ಇನ್ನಿಂಗ್ಸ್ನಲ್ಲಿ 245 ರನ್ಗಳಿಗೆ ಆಲೌಟ್ ಆಗಿದ್ದ ಭಾರತ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 131 ರನ್ಗಳಿಗೆ ಆಲೌಟ್ ಆಯಿತು. ಎರಡನೇ ಇನ್ನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಗಿಲ್ 26 ರನ್ ಗಳಿಸಿದರು. ಉಳಿದ ಎಲ್ಲಾ ಬ್ಯಾಟರ್ ಗಳು ಒಂದಂಕಿಗೆ ಔಟ್ ಆದರು.

ಭಾರತ ಸೋಲನುಭವಿಸಿದರು ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದರು. 146 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಯಾವ ಕ್ರಿಕೆಟಿಗನೂ ಮಾಡಲಾಗದ ಸಾಧನೆಯನ್ನು ವಿರಾಟ್ ಕೊಹ್ಲಿ ಮಾಡಿದ್ದಾರೆ. 2023ರಲ್ಲಿ ಕೊಹ್ಲಿ ಎಲ್ಲಾ ಮಾದರಿ ಕ್ರಿಕೆಟ್ ಸೇರಿ 2000 ಕ್ಕಿಂತ ಅಧಿಕ ಅಂತರಾಷ್ಟ್ರೀಯ ರನ್ ಗಳಿಸಿದ್ದಾರೆ. ಕೊಹ್ಲಿ ಕೇವಲ 35 ಪಂದ್ಯಗಳಿಂದ ಒಟ್ಟು 2048 ರನ್ಗಳೊಂದಿಗೆ 2023 ಅನ್ನು ಪೂರ್ಣಗೊಳಿಸಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 7 ಕ್ಯಾಲೆಂಡರ್ ವರ್ಷದಲ್ಲಿ 2000 ಕ್ಕಿಂತ ಅಧಿಕ ರನ್ ಗಳಿಸಿದ ಸಾಧನೆಯನ್ನು ಕೊಹ್ಲಿ ಮಾಡಿದ್ದಾರೆ. ಅವರು ಈ ಹಿಂದೆ 2012 (2186 ರನ್), 2014 (2286 ರನ್), 2016 (2595 ರನ್), 2017 (2818 ರನ್), 2018 (2735 ರನ್) ಮತ್ತು 2019 (2455 ರನ್) ನಲ್ಲಿ ಈ ಸಾಧನೆ ಮಾಡಿದ್ದರು. 1877 ರಲ್ಲಿ (ಅಧಿಕೃತ ದಾಖಲೆಯ ಪ್ರಕಾರ) ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಆಡಿದ ನಂತರ ಯಾವುದೇ ಆಟಗಾರನು ಈ ಸಾಧನೆಯನ್ನು ಸಾಧಿಸಿಲ್ಲ.
35 ಪಂದ್ಯಗಳಲ್ಲಿ 2048 ರನ್
2023ರಲ್ಲಿ ವಿರಾಟ್ ಕೊಹ್ಲಿ ಕೇವಲ 35 ಪಂದ್ಯಗಳಿಂದ ಒಟ್ಟು 2048 ರನ್ಗಳೊಂದಿಗೆ 2023 ಅನ್ನು ಪೂರ್ಣಗೊಳಿಸಿದರು. 2023 ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಶುಭಮನ್ ಗಿಲ್, ಅವರು 2154 ರನ್ ಗಳಿಸಿದ್ದಾರೆ, ಆದರೆ ಇದನ್ನು ಮಾಡಲು ಅವರು 48 ಪಂದ್ಯಗಳನ್ನು ತೆಗೆದುಕೊಂಡರು. ಡೇರಿಲ್ ಮಿಚೆಲ್ 2023 ರಲ್ಲಿ ಇದುವರೆಗೆ 49 ಪಂದ್ಯಗಳಲ್ಲಿ 1970 ರನ್ ಗಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications