Virat Kohli: ಟೀಂ ಇಂಡಿಯಾ ಸೇರಿಕೊಂಡ ವಿರಾಟ್ ಕೊಹ್ಲಿ

ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಆಗಸ್ಟ್ 1ರಿಂದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದ್ದು, ಏಕದಿನ ತಂಡಕ್ಕೆ ಆಯ್ಕೆಯಾದ ಆಟಗಾರರು ಶ್ರೀಲಂಕಾಗೆ ಪ್ರಯಾಣಿಸಿದ್ದಾರೆ.

ನಾಯಕ ರೋಹಿತ್ ಶರ್ಮಾ ಕೂಡ ಶ್ರೀಲಂಕಾಗೆ ಪ್ರಯಾಣಿಸಿದ್ದು, ತಂಡವನ್ನು ಸೇರಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಕೂಡ ಇಂದು ಶ್ರೀಲಂಕಾ ತಲುಪಿದ್ದು, ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ನಾಳೆ (ಮಂಗಳವಾರ) ಕೊನೆಯ ಟಿ20 ಪಂದ್ಯವನ್ನಾಡಲಿದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ವಿಶ್ವಾಸದಲ್ಲಿದೆ.

Virat Kohli Rejoins Team India for ODI Series Against Sri Lanka

ರಜೆಯ ನಂತರ ವಾಪಸಾದ ಕೊಹ್ಲಿ

ಟಿ20 ವಿಶ್ವಕಪ್ ಗೆದ್ದ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ, ಭಾರತದಲ್ಲಿ ಸಂಭ್ರಮಾಚರಣೆ ಮುಗಿದ ಬಳಿಕ ಲಂಡನ್‌ಗೆ ಹಾರಿದ್ದರು. ಪತ್ನಿ ಮತ್ತು ಮಕ್ಕಳ ಜೊತೆ ಕಾಲ ಕಳೆದ ವಿರಾಟ್ ಕೊಹ್ಲಿ ಈಗ ಮತ್ತೆ ಮೈದಾನಕ್ಕೆ ಇಳಿಯಲು ಸಜ್ಜಾಗಿದ್ದಾರೆ.

ಗಂಭೀರ್ ಮನವಿ ಸ್ವೀಕರಿಸಿದ ರೋಹಿತ್, ಕೊಹ್ಲಿ

ವರದಿಗಳ ಪ್ರಕಾರ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಏಕದಿನ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಬಯಸಿದ್ದರು. ಗಂಭೀರ್ ಅವರ ಮನವಿಯ ಮೇರೆಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಏಕದಿನ ಸರಣಿಯಲ್ಲಿ ಆಡಲು ಲಭ್ಯವಿರುವುದಾಗಿ ತಿಳಿಸಿದರು.

ವಿರಾಟ್ ಕೊಹ್ಲಿ ಮಾತ್ರವಲ್ಲದೆ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಶಿವಂ ದುಬೆ, ಕೆಎಲ್ ರಾಹುಲ್ ಶ್ರೀಲಂಕಾಗೆ ಪ್ರಯಾಣಿಸಿದ್ದು, ಅಭ್ಯಾಸ ಆರಂಭಿಸಲಿದ್ದಾರೆ.

ಏಕದಿನ ಸರಣಿ ವೇಳಾಪಟ್ಟಿ

ಮೊದಲ ಏಕದಿನ ಪಂದ್ಯ - ಆಗಸ್ಟ್ 2
ಎರಡನೇ ಏಕದಿನ ಪಂದ್ಯ - ಆಗಸ್ಟ್ 4
ಮೂರನೇ ಏಕದಿನ ಪಂದ್ಯ - ಆಗಸ್ಟ್ 7

ಮೂರು ಏಕದಿನ ಪಂದ್ಯಗಳು ಕೊಲಂಬೋದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿವೆ. ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಪಂದ್ಯಗಳು ಆರಂಭವಾಗಲಿವೆ.

ಏಕದಿನ ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹುಬ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+