Virat Kohli: ಐಸಿಸಿ ರ್‍ಯಾಂಕಿಂಗ್‌ನಲ್ಲಿ ಭರ್ಜರಿ ಏರಿಕೆ ಕಂಡ ವಿರಾಟ್ ಕೊಹ್ಲಿ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಫೈನಲ್ ಪ್ರವೇಶಿಸಿದೆ. ಸತತ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದ್ದು ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. 2013 ಮತ್ತು 2017 ರಲ್ಲಿ ಭಾರತ ಫೈನಲ್‌ಗೇರಿತ್ತು, 2013ರಲ್ಲಿ ಪ್ರಶಸ್ತಿ ಗೆದ್ದಿದ್ದರೆ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು. ಭಾರತದ ಬ್ಯಾಟಿಂಗ್ ಉತ್ತಮ ಪ್ರದರ್ಶನ ನೀಡುತ್ತಿದ್ದು ಐಸಿಸಿ ರ್‍ಯಾಂಕಿಂಗ್‌ನಲ್ಲಿ ಭರ್ಜರಿ ಏರಿಕೆ ಕಂಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದು ಸತತವಾಗಿ ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಪಾಕಿಸ್ತಾನದ ವಿರುದ್ಧ ಶತಕ ಗಳಿಸಿದ ಬಳಿಕ, ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 83 ರನ್ ಗಳಿಸಿ ಗೆಲುವಿಗೆ ಕೊಡುಗೆ ನೀಡಿದ್ದರು. ಉತ್ತಮ ಪ್ರದರ್ಶನ ನೀಡಿದ ಬಳಿಕ ಐಸಿಸಿ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ.

ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ 747 ಅಂಕಗಳೊಂದಿಗೆ 4ನೇ ಸ್ಥಾನಕ್ಕೇರಿದ್ದಾರೆ. ಮೂರನೇ ಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಎರಡು ಸ್ಥಾನ ಕುಸಿದಿದ್ದು 475 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಬಂದಿದ್ದಾರೆ. 791 ಅಂಕಗಳನ್ನು ಪಡೆದಿರುವ ಶುಭಮನ್ ಗಿಲ್ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ಒಂದು ಸ್ಥಾನ ಏರಿಕೆ ಕಂಡಿದ್ದು 702 ಅಂಕಗಳೊಂದಿಗೆ 8ನೇ ಸ್ಥಾನಕ್ಕೇರಿದ್ದಾರೆ. ಐಸಿಸಿ ಏಕದಿನ ರ್‍ಯಾಂಕಿಂಗ್‌ನ ಅಗ್ರ 10 ರಲ್ಲಿ ಭಾರತದ ನಾಲ್ವರು ಬ್ಯಾಟರ್ ಗಳು ಸ್ಥಾನ ಪಡೆದುಕೊಂಡಿದ್ದಾರೆ. ಕೆಎಲ್ ರಾಹುಲ್ 15ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಅಗ್ರಸ್ಥಾನಕ್ಕೇರುತ್ತಾರಾ ಚೇಸ್ ಕಿಂಗ್
ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ಕೊಹ್ಲಿ ಹಲವು ವರ್ಷ ಅಗ್ರಸ್ಥಾನದಲ್ಲಿ ರಾರಾಜಿಸಿದವರು. ಈಗ ಮತ್ತೊಮ್ಮೆ ಅಗ್ರಸ್ಥಾನದ ಸಮೀಪಕ್ಕೆ ಬಂದಿದ್ದಾರೆ. ಮಾರ್ಚ್ 9ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಮತ್ತೊಂದು ದೊಡ್ಡ ಮೊತ್ತ ಗಳಿಸಿದರೆ 2ನೇ ಸ್ಥಾನಕ್ಕೇರುವ ಸಾಧ್ಯತೆ ಕೂಡ ಇದೆ.
ಶುಭಮನ್ ಗಿಲ್ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಪಂದ್ಯಾವಳಿಯಲ್ಲಿ ಎರಡು ಅತ್ಯುತ್ತಮ ಇನ್ನಿಂಗ್ಸ್‌ಗಳೊಂದಿಗೆ ಅವರು ಉತ್ತಮ ಫಾರ್ಮ್‌ನಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಹೆನ್ರಿಕ್ ಕ್ಲಾಸೆನ್ 3 ನೇ ಸ್ಥಾನಕ್ಕೆ ಏರಿದ್ದಾರೆ ಮತ್ತು ನಂಬರ್ 1 ಸ್ಥಾನಕ್ಕೆ ಗಿಲ್‌ಗೆ ಸವಾಲು ಹಾಕುತ್ತಿದ್ದಾರೆ. ಪಾಕಿಸ್ತಾನದ ಬ್ಯಾಟರ್ ಬಾಬರ್ ಆಜಂ ಎರಡನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ 3 ಸ್ಥಾನ ಏರಿಕೆ ಕಂಡಿದ್ದು 11ನೇ ಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ 7 ಸ್ಥಾನ ಜಿಗಿದಿದ್ದು 41ನೇ ಸ್ಥಾನಕ್ಕೆ ಬಂದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ 2 ಪಂದ್ಯಗಳಲ್ಲಿ 7 ವಿಕೆಟ್ ಪಡೆದ ವರುಣ್ ಚಕ್ರವರ್ತಿ 143 ಸ್ಥಾನ ಜಿಗಿದಿದ್ದು 97ನೇ ಸ್ಥಾನಕ್ಕೆ ಬಂದಿದ್ದಾರೆ.












Click it and Unblock the Notifications