Virat Kohli Instagram Post: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಬಳಿಕ ವಿರಾಟ್ ಕೊಹ್ಲಿ ಇನ್ಸ್ಟಾ ಪೋಸ್ಟ್ ಭಾರೀ ವೈರಲ್
Virat Kohli Insta Post Viral: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಬೆನ್ನಲ್ಲೇ ವಿರಾಟ್ ಕೊಹ್ಲಿ ಅವರು ಇನ್ಸ್ಟಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಅಭಿಮಾನಿಗಳ ಮನ ಗೆದ್ದಿದ್ದಾರೆ. ಇದು ಇದೀಗ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ. ಹಾಗಾದ್ರೆ, ಇದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇದೀಗ ಸದ್ಯ ವಿರಾಟ್ ಕೊಹ್ಲಿ ಅವರು ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡುತ್ತಿದ್ದಾರೆ. ಐಪಿಎಲ್ ನಡೆಯುತ್ತಿರುವ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಮೂಲಕ ಬಿಸಿಸಿಐಗೆ ಬಿಗ್ ಶಾಕ್ ನೀಡಿದ್ದಾರೆ. ಅಲ್ಲದೆ, ನಿವೃತ್ತಿ ಬಳಿಕ ವಿರಾಟ್ ಕೊಹ್ಲಿ ಅವರು ಸಾಮಾಜಿಕ ಜಾಲತಾಣ ಭಾಗವಾಗಿರುವ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ವೊಂದನ್ನು ಮಾಡಿ ಅಭಿಮಾನಿಗಳು ಹಾಗೂ ಇತರ ಕ್ರಿಕೆಟ್ ಆಟಗಾರರ ಮನ ಗೆದ್ದಿದ್ದಾರೆ.

ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಸೋಮವಾರ ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಹ ಟೆಸ್ಟ್‌ಗೆ ಗುಡ್ ಬೈ ಹೇಳಿದ್ದಾರೆ. ಕೊಹ್ಲಿ ಅವರ ಈ ನಡೆ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
ಮೇ 7ರಂದು ಮುಂಬೈನಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರನ್ನೊಳಗೊಂಡ ಬಿಸಿಸಿಐ ಸಭೆಗೆ ರೋಹಿತ್ ಶರ್ಮಾ ಅವರ ಟೆಸ್ಟ್ ನಿವೃತ್ತಿ ಘೋಷಣೆಯನ್ನು ತಿಳಿಸಿದರು. ವಿರಾಟ್ ಕೊಹ್ಲಿ ಸಹ ಮಂಡಳಿಗೆ ಇದೇ ನಿರ್ಧಾರವನ್ನು ತಿಳಿಸಿದ್ದರು. ಇದೀಗ ಅಧಿಕೃತವಾಗಿ ನಿವೃತ್ತಿ ಘೋಷಣಡ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ, ಇನ್ಸ್ಟಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಗಮನ ಸೆಳೆದಿದ್ದಾರೆ.
"ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ನೀಲಿ ಜೆರ್ಸಿ ಹಾಕಿ 14 ವರ್ಷಗಳಾಗಿವೆ. ಈ ಪಯಣ ಇಲ್ಲಿಯವರೆಗೆ ಕರೆದುಕೊಂಡು ಬರುತ್ತದೆ ಎಂದು ನಾನು ಊಹಿಸಿಯೂ ಇರಲಿಲ್ಲ. ಇದು ನನ್ನನ್ನು ಪರೀಕ್ಷಿಸಿ, ರೂಪಿಸಿ, ಜೀವನ ಪಾಠ ಕಲಿಸಿದೆ. ನನ್ನ ಟೆಸ್ಟ್ ಜೀವನ ನನಗೆ ತುಂಬಾ ಸಂತಸ ತಂದಿದೆ," ಎಂದು ವಿರಾಟ್ ಕೊಹ್ಲಿ ನಿವೃತ್ತಿ ಬಳಿಕ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ. ಇದು ಇದೀಗ ಭಾರೀ ವೈರಲ್ ಆಗುತ್ತಿದೆ.
ಕೊಹ್ಲಿ ಅವರಿಗೆ ಧನ್ಯವಾದಗಳ ಸರಮಾಲೆ: ಅಲ್ಲದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸಹ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿರಾಟ್ ಕೊಹ್ಲಿ ಅವರ ಫೋಟೋ ಹಂಚಿಕೊಂಡು ಧನ್ಯವಾದಗಳು ಎಂದು ಬರೆದಿದ್ದಾರೆ. ಅಷ್ಟೇ ಅಲ್ಲದೆ, ಅಭಿಮಾನಿಗಳ ವಾಟ್ಸಪ್ ಸ್ಟೇಟಸ್‌ಗಳಲ್ಲಿ ಕೊಹ್ಲಿ ಅವರದ್ದೇ ಫೋಟೋ, ವಿಡಿಯೋಗಳು ರಾರಾಜಿಸುತ್ತಿವೆ.
ಕೊಹ್ಲಿ ಮನವೊಲಿಸಲು ಮುಂದಾಗಿದ್ದ ಬಿಸಿಸಿಐ: ಕಳೆದ ಎರಡು ದಿನಗಳ ಹಿಂದೆಯೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ ಮಾಡುವುದಾಗಿ ಬಿಸಿಸಿಐಗೆ ತಿಳಿಸಿದ್ದರು. ಆದರೆ, ಇಂಗ್ಲೆಂಡ್ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಮಂಡಳಿ ಅವರನ್ನು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿತ್ತು. ಆದರೆ, ಇದೀಗ ಕೊನೆಗೂ ಅಂದುಕೊಂಡಂತೆ ಅವರು ನಿವೃತ್ತಿ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ಇನ್ನು ರೋಹಿತ್ ಶರ್ಮಾ ಅವರು ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಾಯಕನ ಸ್ಥಾನವನ್ನು ಯಾರು ತುಂಬಲಿದ್ದಾರೆ ಎನ್ನುವ ಪ್ರಶ್ನೆ ಮೂಡಿತ್ತು. ಇದರ ಬೆನ್ನಲ್ಲೇ ಶುಭಮನ್ ಗಿಲ್, ಕೆಎಲ್ ರಾಹುಲ್, ರಿಷಭ್ ಪಂತ್ ಹೆಸರುಗಳು ಕೇಳಿಬಂದಿದ್ದವು.
ವಿರಾಟ್ ಕೊಹ್ಲಿ ಅವರು 2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್‌ನಲ್ಲಿ ಮೊದಲ ಬಾರಿಗೆ ಟೆಸ್ಟ್‌ನಲ್ಲಿ ಭಾರತೀಯ ತಂಡವನ್ನು ಮುನ್ನಡೆಸಿದರು. ಎಂಎಸ್ ಧೋನಿ ಬದಲಿಗೆ ಕೊಹ್ಲಿ ನೇತೃತ್ವದಲ್ಲಿ ಭಾರತವು ದೀರ್ಘ ಸ್ವರೂಪದಲ್ಲಿ ಅನೇಕ ಗೆಲುವುಗಳನ್ನು ಕಂಡಿತು. ಕೊಹ್ಲಿ ತಮ್ಮ ನಾಯಕತ್ವದಲ್ಲಿ ಎರಡು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಳಿಗೆ ಮುನ್ನಡೆಸಿದರು. ಆದರೆ, ಈ ವೇಳೆ ಗೆಲುವು ಸಾಧ್ಯ ಆಗಲಿಲ್ಲ.












Click it and Unblock the Notifications