Cricket: 'ಇದು ಟೀಮ್ ಇಂಡಿಯಾ ಅಲ್ಲ..': ಸೆಹ್ವಾಗ್ ಶಾಕಿಂಗ್ ಹೇಳಿಕೆ!
ಭಾರತದ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಇಂದು ಸರ್ಪ್ರೈಸ್ ಸಿಕ್ಕಿದೆ. ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತ ತಂಡದ ಆಟಗಾರರನ್ನು ಘೋಷಿಸಲಾಗಿದೆ. ಎಲ್ಲೆಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ. ಹಾಗೇ ಭಾರತ ವಿಶ್ವಕಪ್ ಗೆಲ್ಲುತ್ತಾ? ಎಂಬ ಬಗ್ಗೆಯೂ ಅಭಿಮಾನಿಗಳು ಚಿಂತಿಸುತ್ತಿದ್ದಾರೆ. ಆದ್ರೆ ಈ ಸಂದರ್ಭದಲ್ಲಿ ಭಾರತದ ಮಾಜಿ ಸ್ಟಾರ್ ಆಟಗಾರ ವೀರೇಂದ್ರ ಸೆಹ್ವಾಗ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಹಾಗಾದರೆ ಟೀಂ ಇಂಡಿಯಾ ಬಗ್ಗೆ ಸೆಹ್ವಾಗ್ ಹೇಳಿದ್ದೇನು?
ಹೌದು ಟೀಂ ಇಂಡಿಯಾ ಬಗ್ಗೆ ವೀರೇಂದ್ರ ಸೆಹ್ವಾಗ್ ಮಹತ್ವದ ಹೇಳಿಕೆ ನೀಡಿದ್ದು, ಇಂದು ಘೋಷಣೆಯಾದ ಭಾರತ ತಂಡದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಇಂಡಿಯಾ ಹೆಸರನ್ನು ಭಾರತ ಎಂದು ಬದಲಿಸಲು ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ ಭಾರತದ ಈ ಆಟಗಾರ. ಈ ಮೂಲಕ ಮುಂದಿನ ವಿಶ್ವಕಪ್ ಟೂರ್ನಿಯ ವೇಳೆ ಟೀಮ್ ಇಂಡಿಯಾ ಎನ್ನುವ ಬದಲಿಗೆ ಟೀಮ್ ಭಾರತ್ ಅಂದರೆ #TeamBharat ಎನ್ನುವ ಹ್ಯಾಶ್ ಟ್ಯಾಗ್ ಬಳಸಿ ಎಂದು ವೀರೇಂದ್ರ ಸೆಹ್ವಾಗ್ ಮನವಿ ಮಾಡಿದ್ದಾರೆ.

ಭಾರತದ ಆಟಗಾರರ ಬಗ್ಗೆ ಹೇಳಿದ್ದೇನು?
ಹಾಗೇ ಭಾರತದ ವರ್ಲ್ಡ್ ಕಪ್ ತಂಡದಲ್ಲಿ ಸ್ಥಾನ ಪಡೆದಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಜಸ್‌ಪ್ರೀತ್ ಬುಮ್ರಾ & ರವೀಂದ್ರ ಜಡೇಜಾ ಬಗ್ಗೆ ಕೂಡ ಸೆಹ್ವಾಗ್ ಮಾತನಾಡಿದ್ದಾರೆ. ಒಬ್ಬ ಅಭಿಮಾನಿಯಾಗಿ, ನಾವು ನಮ್ಮ ಹೃದಯದಲ್ಲಿ ಭಾರತ್ ಎಂಬ ಸ್ಫೂರ್ತಿ ಜೊತೆಗೆ ಈ ಆಟಗಾರರನ್ನು ಹುರಿದುಂಬಿಸಬೇಕು ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಹಾಗೇ ಇದೇ ವೇಳೆ ಆಟಗಾರರು ತಮ್ಮ ಗುರುತು ಬದಲಾಗಿರುವ ಬಗ್ಗೆ ತಿಳಿಸಲು ವಿಶ್ವಕಪ್‌ನಲ್ಲಿ "ಭಾರತ್" ಎನ್ನುವ ಪದವಿರುವ ಜೆರ್ಸಿ ಧರಿಸಬೇಕು ಎಂದು ಸೆಹ್ವಾಗ್ ಸಲಹೆ ನೀಡಿದ್ದಾರೆ.
I have always believed a name should be one which instills pride in us.
— Virender Sehwag (@virendersehwag) September 5, 2023
We are Bhartiyas ,India is a name given by the British & it has been long overdue to get our original name ‘Bharat’ back officially. I urge the @BCCI @JayShah to ensure that this World Cup our players have… https://t.co/R4Tbi9AQgA
15 ಆಟಗಾರರ ಪಟ್ಟಿ ರಿಲೀಸ್!
ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ನಡೆಯಲಿರುವ ಮಹತ್ವದ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪ್ರಕಟಿಸಲಾಗಿದೆ. ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಉಳಿದಂತೆ ಸದ್ಯ ಏಷ್ಯಾಕಪ್ ಸರಣಿಯಲ್ಲಿ ಆಡುತ್ತಿರುವ ತಂಡ ಏಕದಿನ ವಿಶ್ವಕಪ್‌ನಲ್ಲಿ ಆಡಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ರಾಷ್ಟ್ರೀಯ ಆಯ್ಕೆ ಸಮಿತಿಯು 15 ಆಟಗಾರರ ಪಟ್ಟಿಯನ್ನ ಆಯ್ಕೆ ಮಾಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಯಾವೆಲ್ಲಾ ಆಟಗಾರರಿಗೆ ವಿಶ್ರಾಂತಿ?
ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿರುವ ಕೆಎಲ್ ರಾಹುಲ್ ಏಕದಿನ ವಿಶ್ವಕಪ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಬ್ಯಾಕ್ಅಪ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದು ಸಂಜು ಸ್ಯಾಮ್ಸನ್‌ಗೆ ಸ್ಥಾನ ಸಿಕ್ಕಿಲ್ಲ. ಇದೇ ವೇಳೆ ತಿಲಕ್ ವರ್ಮಾ ಮತ್ತು ಪ್ರಸಿದ್ಧ್ ಕೃಷ್ಣ ಅವರು ಭಾರತ ತಂಡದ ವಿಶ್ವಕಪ್ ಪಟ್ಟಿಯಿಂದ ಹೊರಗೆ ಉಳಿದಿದ್ದಾರೆ.
ಭಾರತ ತಂಡದ ಆಟಗಾರರ ವಿವರ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) , ಇಶಾನ್ ಕಿಶನ್ (ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಅವರು ಭಾರತದ ವರ್ಲ್ಡ್ ಕಪ್ ತಂಡದಲ್ಲಿ ಸ್ಥಾನವನ್ನು ಪಡೆದಿದ್ದಾರೆ. ಈ ಮೂಲಕ ವಿಶ್ವಕಪ್ ಗೆಲ್ಲಲು ಭಾರತ ಕ್ರಿಕೆಟ್ ತಂಡ ಸಜ್ಜಾಗಿದೆ.
ಒಟ್ನಲ್ಲಿ ಭಾರತ ತಂಡ ವಿಶ್ವಕಪ್‌ಗೆ ಸಿದ್ಧತೆ ನಡೆಸಿರುವ ಸಂದರ್ಭದಲ್ಲೇ ಟೀಂ ಇಂಡಿಯಾದ ಹೆಸರು ಬದಲಾವಣೆಗೆ ಒತ್ತಾಯ ಕೇಳಿಬಂದಿದೆ. ಈ ಕುರಿತು ಭಾರತದ ಮಾಜಿ ಆಟಗಾರರೇ ಒತ್ತಾಯ ಮಾಡಿರುವುದು ವಿಶೇಷ. ಹೀಗಾಗಿ ಸೆಹ್ವಾಗ್ ಮಾಡಿದ ಮನವಿಗೆ ಬಿಸಿಸಿಐನಿಂದ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ಭಾರತ ಈ ಬಾರಿಯ ವಿಶ್ವಕಪ್ ಗೆದ್ದು ಬರಲಿ ಅಂತಾ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications