VVS Laxman: ಭಾರತ ತಂಡಕ್ಕೆ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ.. ಗೌತಮ್ ಗಂಭೀರ್ ಕಥೆ ಏನು?

V.V.S. Laxman: ಭಾರತೀಯ ಕ್ರಿಕೆಟ್‌ ವಲಯದಲ್ಲಿ ಮಹತ್ವದ ಬದಲಾವಣೆಯೊಂದು ನಡೆದಿದೆ. ದೇಶದ ಪುರುಷರ ಕ್ರಿಕೆಟ್‌ ತಂಡಕ್ಕೆ ವಿವಿಎಸ್ ಲಕ್ಷ್ಮಣ್ ಅವರನ್ನು ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ. ಹಾಗಾದ್ರೆ, ಗೌತಮ್ ಗಂಭೀರ್ ಅವರ ಕಥೆ ಏನು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೆಲವೇ ದಿನಗಳಲ್ಲಿ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ ಆರಂಭವಾಗಲಿದೆ. ಸೆಪ್ಟೆಂಬರ್ 24ರಿಂದ ಚೀನಾದಲ್ಲಿ ಆರಂಭವಾಗಲಿರುವ ಈ ಬಹುಕ್ರೀಡಾಕೂಟದಲ್ಲಿ ಭಾರತೀಯ ಪುರುಷ ಕ್ರಿಕೆಟ್ ತಂಡಕ್ಕೆ ಕ್ರಿಕೆಟ್ ದಿಗ್ಗಜ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

VVS Laxman Appointed As Team India Cricket Head Coach for 2026 Asian Games Know Complete details

ಗೌತಮ್ ಗಂಭೀರ್ ಕಥೆ ಏನು?

ರಾಷ್ಟ್ರೀಯ ತಂಡದ ಖಾಯಂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಮುಂಬರುವ ಪ್ರಮುಖ ಅಂತಾರಾಷ್ಟ್ರೀಯ ದ್ವಿಪಕ್ಷೀಯ ಸರಣಿಗಳಲ್ಲಿ ಹಿರಿಯ ತಂಡದ ಜೊತೆ ನಿರತರಾಗಿದ್ದಾರೆ. ಆದ್ದರಿಂದ ಬಿಸಿ‌ಸಿಐ ಏಷ್ಯನ್ ಗೇಮ್ಸ್‌ಗೆ ಕಳುಹಿಸಿಕೊಡಲಿರುವ ಭಾರತ 'ಎ' ತಂಡದ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ವಹಿಸಲು ತೀರ್ಮಾನ ಮಾಡಿದೆ.

ಭಾರತದ ಮೊದಲ ಪಂದ್ಯ ಯಾವಾಗ?

ಏಷ್ಯನ್ ಗೇಮ್ಸ್ ಕ್ರೀಡಾಕೂಟವು ಸೆಪ್ಟೆಂಬರ್ 24ರಿಂದ ಅಧಿಕೃತವಾಗಿ ಚಾಲನೆ ಆಗಲಿದೆ. ಕ್ರಿಕೆಟ್ ವಿಭಾಗದ ಸ್ಪರ್ಧೆಗಳು ಸೆಪ್ಟೆಂಬರ್ 24ರಿಂದಲೇ ಪ್ರಾರಂಭವಾಗಲಿವೆ. ಅಂತಾರಾಷ್ಟ್ರೀಯ ಟಿ-20 ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಕಾರಣದಿಂದ ಭಾರತ ನೇರವಾಗಿ ಕ್ವಾರ್ಟರ್ ಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ನಿರ್ಧಾರ

ಆದ್ದರಿಂದ ಭಾರತ ತಂಡದ ಮೊದಲ ಮೊದಲ ಪಂದ್ಯ ಸೆಪ್ಟೆಂಬರ್ 28, 2026ರಿಂದ ಆರಂಭವಾಗಲಿದೆ. ಭಾರತವೇ ಈ ಬಾರಿ ಟೂರ್ನಿಯಲ್ಲಿ ಚಿನ್ನದ ಪದಕ ಗೆಲ್ಲುವ ಅತ್ಯಂತ ಪ್ರಬಲ ಹಾಗೂ ನೆಚ್ಚಿನ ತಂಡವಾಗಿ ಕಣಕ್ಕಿಳಿಯುತ್ತಿದೆ. ಇನ್ನು ಮುಂಬರುವ ಪ್ರಮುಖ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.

ಯುವ ಆಟಗಾರರಿಗೆ ಮಣೆ ಹಾಕಲು ಪ್ಲ್ಯಾನ್

ಆದ್ದರಿಂದ ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್‌ನಲ್ಲಿ ಮಿಂಚಿರುವ ಪ್ರತಿಭಾವಂತ ಯುವ ಆಟಗಾರರನ್ನೊಳಗೊಂಡ ತಂಡವನ್ನು ಈ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗುತ್ತದೆ. ಈ ಹಿಂದೆ 2023ರ ಏಷ್ಯನ್ ಗೇಮ್ಸ್‌ನಲ್ಲೂ ಋತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತೀಯ ಯುವ ಪಡೆ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿತ್ತು. ಅದೇ ರೀತಿಯಲ್ಲಿ ಈ ಬಾರಿಯೂ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ದೊಡ್ಡ ವೇದಿಕೆ ಸಿಗಲಿದೆ.

ವಿವಿಎಸ್ ಲಕ್ಷ್ಮಣ್ ಅವರು ಹಿಂದೆ ಹಿರಿಯ ತಂಡದ ಮುಖ್ಯ ಕೋಚ್ ಲಭ್ಯವಿಲ್ಲದಿದ್ದಾಗ ಹಲವು ದ್ವಿಪಕ್ಷೀಯ ಸರಣಿಗಳಲ್ಲಿ ಭಾರತ ತಂಡಕ್ಕೆ ಯಶಸ್ವಿ ತರಬೇತುದಾರರಾಗಿ ಮಾರ್ಗದರ್ಶನ ನೀಡಿದ ಅನುಭವ ಹೊಂದಿದ್ದಾರೆ. ಜೊತೆಗೆ ಎನ್‌ಸಿಎ ಮುಖ್ಯಸ್ಥರಾಗಿ ದೇಶದ ಯುವ ಪ್ರತಿಭೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಲಕ್ಷ್ಮಣ್ ಅವರ ತರಬೇತಿ ಭಾರತಕ್ಕೆ ಮತ್ತೊಮ್ಮೆ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ತಂದುಕೊಡುವ ಭರವಸೆಯನ್ನು ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+