ವಿಶ್ವಕಪ್ ಫೈನಲ್; ಕ್ರಿಕೆಟ್ ಪ್ರೇಮಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ
ಬೆಂಗಳೂರು, ನವೆಂಬರ್ 19: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿ ಭಾನುವಾರ ಮಧ್ಯಾಹ್ನ ಆರಂಭವಾಗಲಿದೆ. ಕ್ರಿಕೆಟ್ ಪ್ರೇಮಿಗಳು ಪಂದ್ಯ ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಭಾರತ ಗೆದ್ದು ಬರಲಿ ಎಂದು ಪೂಜೆ, ಹೋಮಗಳು ನಡೆಯುತ್ತಿವೆ.
ಕರ್ನಾಟಕ ಸರ್ಕಾರ ಕ್ರೀಡಾ ಪ್ರೇಮಿಗಳ ಅನುಕೂಲಕ್ಕಾಗಿ ಎಲ್ಲಾ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯದ ಉಚಿತ ವೀಕ್ಷಣೆಗೆ ಅನುಕೂಲ ಮಾಡಿಕೊಡಲು ಸುತ್ತೋಲೆಯನ್ನು ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, 'ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.
ಸುತ್ತೋಲೆಯ ವಿವರ; ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ವಿಶ್ವಕಪ್ 2023ರ ಫೈನಲ್ ಪಂದ್ಯ ನೇರ ಪ್ರಸಾರ ಮಾಡುವ ಕುರಿತು ಆಯುಕ್ತರ ಕಾರ್ಯಾಲಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ ಸುತ್ತೋಲೆಯನ್ನು ಹೊರಡಿಸಿದೆ.
ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ದಿನಾಂಕ 19/11/2023ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪ್ರಸಾರ ಮಾಡುವ ಬಗ್ಗೆ ಎಂಬ ವಿಷಯವನ್ನು ಉಲ್ಲೇಖ ಒಳಗೊಂಡಿದೆ.
ದಿನಾಂಕ 19/11/2023ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ/ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಸೂಚಿಸಿದೆ.
ಈ ಬಗ್ಗೆ, ಅಗತ್ಯ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸುವುದು. ಈ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಬಳ್ಳಾರಿಯಲ್ಲಿ ವ್ಯವಸ್ಥೆ; ಬಳ್ಳಾರಿ ಜಿಲ್ಲಾಡಳಿತವು ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆ ವ್ಯವಸ್ಥೆ ಕಲ್ಪಿಸಿದೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನ.19ರ ಭಾನುವಾರದಂದು ನಡೆಯಲಿದ್ದು, ಮ್ಯಾಚ್‍ನ ನೇರ ಪ್ರಸಾರವನ್ನು ಮಧ್ಯಾಹ್ನ 1.30ರಿಂದ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಪಂದ್ಯಾವಳಿಯನ್ನು ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದಾರೆ.
ಕಲಬುರಗಿ; ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನವೆಂಬರ್ 19 (ರವಿವಾರ) ಅಹಮದಾಬಾದ್‌ನಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್-2023ರ ಫೈನಲ್ ಪಂದ್ಯಾವಳಿಯ ಉಚಿತ ನೇರ ಪ್ರಸಾರದ ವ್ಯವಸ್ಥೆಯನ್ನು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಮಾಡಲಾಗಿದ್ದು, ಸಾರ್ವಜನಿಕರು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಅವರು ತಿಳಿಸಿದ್ದಾರೆ. ನೇರ ಪ್ರಸಾರದ ವೀಕ್ಷಣೆಗೆ ಎಲ್.ಇ.ಡಿ ಪರದೆ ಮತ್ತು ಸೌಂಡ್ ಸಿಸ್ಟಮ್ ಅಳವಡಿಸಲಾಗಿದೆ.
ತುಮಕೂರು; ಕ್ರಿಕೆಟ್ ಫೈನಲ್ ಪಂದ್ಯ ವೀಕ್ಷಣೆಗೆ ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ದೊಡ್ಡಪರದೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.
20 ಸಾವಿರಕ್ಕೂ ಹೆಚ್ಚು ಜನರು ಕುಳಿತು ಪಂದ್ಯ ವೀಕ್ಷಿಸಲು ಸೌಲಭ್ಯವಿರುವ ಸುಸಜ್ಜಿತ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆಗೆ ಅವಕಾಶವಿದ್ದು ಕ್ರಿಕೆಟ್ ಹಬ್ಬದ ಸಂಭ್ರಮ ಹೆಚ್ಚಿಸಲಿದೆ. ದೊಡ್ಡ ಪರದೆ ಅಳವಡಿಸಲು ಸರ್ಕಾರದಿಂದಲೇ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಸೂಚನೆ ಬಂದಿದ್ದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸೂಕ್ತ ಭದ್ರತೆಯಲ್ಲಿ ಪಂದ್ಯ ವೀಕ್ಷಣೆಗೆ ಸಕಲ ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಲಾಗಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications