Robin Uthappa: ಕ್ರೀಡಾ ಸ್ಪೂರ್ತಿ ಮೆರೆದ ಕನ್ನಡಿಗ ರಾಬಿನ್ ಉತ್ತಪ್ಪ: ಫೋಟೋ ಟ್ರೆಂಡ್
ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ (WCL 2024) ಫೈನಲ್‌ನಲ್ಲಿ, ಭಾರತ ಚಾಂಪಿಯನ್ಸ್ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಈ ಪಂದ್ಯದಲ್ಲಿ ಪಠಾಣ್ ಬ್ರದರ್ಸ್‌ನ ಮಿಂಚು, ಅಂಬಟಿ ರಾಯುಡು ಅವರ ಬಿರುಸಿನ ಇನ್ನಿಂಗ್ಸ್ ಮತ್ತು ರಾಬಿನ್ ಉತ್ತಪ್ಪ ಅವರ ಕ್ರೀಡಾಸ್ಫೂರ್ತಿ ಎಲ್ಲರ ಗಮನ ಸೆಳೆದಿದೆ.
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಮಾಡುವಾಗ ಪಾಕಿಸ್ತಾನ ತಂಡದ ಮಿಸ್ಬಾ-ಉಲ್-ಹಕ್ ಗಾಯಗೊಂಡರು. ಈ ಸಮಯದಲ್ಲಿ, ರಾಬಿನ್ ಉತ್ತಪ್ಪ ಎಡವುತ್ತಿರುವ ಮಿಸ್ಬಾ-ಉಲ್-ಹಕ್‌ಗೆ ಆಸರೆಯಾದರು. ಉತ್ತಪ್ಪ ಅವರ ಈ ಕ್ರೀಡಾ ಸ್ಪೂರ್ತಿಗೆ ಸಾಮಾಜಿಕ ತಾಣದಲ್ಲಿ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡಿದ್ದಾರೆ.

ಫೈನಲ್‌ನಲ್ಲಿ ಪಠಾಣ ಬ್ರದರ್ಸ್ ಕಮಾಲ್
ಫೈನಲ್ ಪಂದ್ಯದಲ್ಲಿ ಇರ್ಫಾನ್ ಪಠಾಣ್ ಮತ್ತು ಯೂಸುಫ್ ಪಠಾಣ್ ಅವರ ಮ್ಯಾಜಿಕ್ ಕಂಡುಬಂದಿದೆ. ಇರ್ಫಾನ್ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರೆ, ಯೂಸುಫ್ ಪಠಾಣ್ ಬ್ಯಾಟಿಂಗ್‌ನಲ್ಲಿ ಪಾಕಿಸ್ತಾನದ ಬೌಲರ್‌ಗಳನ್ನು ಕಾಡಿದರು. ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಇರ್ಫಾನ್ 3 ಓವರ್ ಗಳಲ್ಲಿ ಕೇವಲ 12 ರನ್ ನೀಡಿ ಒಂದು ವಿಕೆಟ್ ಪಡೆದರು.
ಯೂಸುಫ್ ಪಠಾಣ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 16 ಎಸೆತಗಳಲ್ಲಿ 30 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ, ಒಂದು ಬೌಂಡರಿ ಮತ್ತು 3 ಅದ್ಭುತ ಸಿಕ್ಸರ್‌ಗಳನ್ನು ಸೇರಿವೆ. ಫೈನಲ್‌ನಲ್ಲಿ ಭಾರತ ಚಾಂಪಿಯನ್ಸ್ ತಂಡವು ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Robin Uthappa helping Misbah Ul Haq after he started limping due to his hamstring injury. Moment of the match, we are brothers 🇵🇰🇮🇳❤️❤️❤️#WCLFinal #WCL2024 pic.twitter.com/glWylP90k8
— Out Of Context Cricket (@Iamzanwar) July 13, 2024
ವೈರಲ್ ಚಿತ್ರ
ಮಿಸ್ಬಾ ಉಲ್ ಹಕ್ ಬ್ಯಾಟಿಂಗ್ ಮಾಡುವಾಗ ಸ್ನಾಯು ಸೆಳೆತಕ್ಕೆ ಒಳಗಾದರು. ನಂತರ ಅವರು ನಡೆಯಲು ಸಹ ಸಾಧ್ಯವಾಗಲಿಲ್ಲ, ಮಿಸ್ಬಾ ಅವರನ್ನು ಈ ಸ್ಥಿತಿಯಲ್ಲಿ ನೋಡಿದ ಭಾರತೀಯ ಚಾಂಪಿಯನ್ಸ್ ವಿಕೆಟ್ ಕೀಪರ್ ರಾಬಿನ್ ಉತ್ತಪ್ಪ ಓಡಿ ಬಂದು ಮಿಸ್ಬಾ ಅವರ ಕೈಯನ್ನು ತಮ್ಮ ಹೆಗಲ ಮೇಲೆ ಹಾಕಿಕೊಂಡರು. ಮಿಸ್ಬಾ ಅವರು ತುಂಬಾ ನೋವನ್ನು ಅನುಭವಿಸುತ್ತಿದ್ದರು, ಅವರು ಮುಂದೆ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮಿಸ್ಬಾ ಮೈದಾನ ತೊರೆಯಬೇಕಾಯಿತು. ಇದೀಗ ಮಿಸ್ಬಾ ಮತ್ತು ಉತ್ತಪ್ಪ ಅವರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
ರಾಬಿನ್ ಉತ್ತಪ್ಪ ಅವರ ಕ್ರೀಡಾ ಸ್ಪೂರ್ತಿಗೆ ಅಭಿಮಾನಿಗಳು ತರಹೆವಾರಿ ಕಮೆಂಟ್‌ಗಳನ್ನು ನೀಡುತ್ತಿದ್ದಾರೆ. ಕನ್ನಡಿಗನ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications