IPL 2025: ಐಪಿಎಲ್ 2025 ಹೊಸ ವೇಳಾಪಟ್ಟಿ ರಿಲೀಸ್ ಬಗ್ಗೆ ಬಿಸಿಸಿಐ ಬಿಗ್ ಅಪ್ಡೇಟ್
IPL 2025: ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ರದ್ದುಪಡಿಸಿ ಬಿಸಿಸಿಐ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಉಳಿದ ಪಂದ್ಯಗಳು ಯಾವಾಗಿನಿಂದ ಆರಂಭ ಆಗಲಿವೆ ಎನ್ನುವ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಲ್ಲಿದೆ ನೋಡಿ ಸಂಪೂರ್ಣ ವಿವರ.
ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಆಟಗಾರರ ಭದ್ರತೆ ದೃಷ್ಟಿಯಿಂದ ಐಪಿಎಲ್ 2025 ಅನ್ನು ಬಿಸಿಸಿಐ ಮುಂದೂಡಿಕೆ ಮಾಡಿದೆ. ಇಂದು ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ವಾರದ ಮಟ್ಟಿಗೆ ಪ್ರಾಂಚೈಸಿ ಮನವಿ ಮೇರೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಜಮ್ಮು ಮತ್ತು ಪಠಾಣ್‌ಕೋಟ್‌ಗಳಲ್ಲಿ ವಾಯು ದಾಳಿ ಹಿನ್ನೆಲೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧದಲ್ಲಿಯೇ ರದ್ದುಪಡಿಸಲಾಗಿದ್ದು, ಅವರನ್ನು ಡೆಲ್ಲಿ ಕಡೆಗೆ ರೈಲಿನಲ್ಲಿ ಕಳುಹಿಸುವ ಪ್ರಯತ್ನ ನಡೆದಿದೆ. ಯಾಕಂದರೆ, ಇದೀಗ ವಿಮಾನ ಸೇವೆಗಳು ಇಲ್ಲ.
ಇದೀಗ ದೇಶದ ಬಹುತೇಕ ಭಾಗಗಳಲ್ಲಿ ವಿಮಾನ ಸೇವೆಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಆಟಗಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರವಾಸ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಅವರ ಭದ್ರತೆ ದೃಷ್ಟಿಯಿಂದ ಟೂರ್ನಿಯನ್ನೇ ಮುಂದೂಡಿಕೆ ಮಾಡಲಾಗಿದೆ.
ಐಪಿಎಲ್ ಹೊಸ ವೇಳಾಪಟ್ಟಿ ಯಾವಾಗ ಬಿಡುಗಡೆ?: ಒಂದು ವಾರದ ಮಟ್ಟಿಗೆ ಐಪಿಎಲ್ 2025 ಟೂರ್ನಿಯನ್ನು ಸ್ಥಗಿತಗೊಳಿಸಲಾಗಿದೆ. ಹೊಸ ವೇಳಾಪಟ್ಟಿಯನ್ನು ಉಳಿದ 16 ಪಂದ್ಯಗಳ ಹೊಸ ವೇಳಪಟ್ಟಿಯನ್ನು ಸಂಬಂಧಿತ ಅಧಿಕಾರಿಗಳು ಮತ್ತು ಪ್ರಾಂಚೈಸಿಗಳ ಜೊತೆಗೆ ಚರ್ಚೆ ನಡೆಸಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಈ ಪರಿಸ್ಥಿತಿಯಲ್ಲಿ ಕ್ರಿಕೆಟ್ ಮುಂದುವರಿಯುವುದು ಒಳ್ಳೆಯದಲ್ಲ. ಆದ್ದರಿಂದ ಮೇ 25ರಂದು ಕೋಲ್ಕತ್ತಾದಲ್ಲಿ ಮುಕ್ತಾಯ ಆಗಬೇಕಿದ್ದ ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಉಳಿದ ಪಂದ್ಯಗಳ ಹೊಸ ವೇಳಾಪಟ್ಟಿಯನ್ನು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಸಭೆ ನಡೆಸಿ ತನ್ನ ಮುಂದಿರುವ ಆಯ್ಕೆಗಳ ಬಗ್ಗೆ ಚರ್ಚಿಸಲಿದೆ ಎಂದು ತಿಳಿದುಬಂದಿದೆ.
ಕೊರೊನಾ ಸಮಯದಲ್ಲಿ ಐಪಿಎಲ್ ಟೂರ್ನಿಯನ್ನು ವಿದೇಶಗಳಲ್ಲಿ ನಡೆಲಾಗಿತ್ತು. ಈಗಲೂ ಅದೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಯುಎಇ ಅಥವಾ ಆಫ್ರಿಕನ್ ದೇಶಗಳಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕಡಿಮೆ ಆದರೆ ಇಲ್ಲಿಯೇ ಮುಂದುವರೆಸಲಿದೆ.
ಐಪಿಎಲ್ ಮುಂದೂಡಿಕೆ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು, ದೇಶದ ಭದ್ರತೆ, ಬೇರೆ ದೇಶದ ಆಟಗಾರರ ದೃಷ್ಟಿಯಿಂದ ಇದು ಸರಿಯಾಗಿದೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಬಿಸಿಸಿಐ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.
ಆಗಸ್ಟ್ನಿಂದ ಅಂದರೆ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳಿಗೆ ಕ್ರಿಕೆಟ್ ಪಂದ್ಯಗಳು ಇರಲಿವೆ. ಸೆಪ್ಟೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ನಡುವೆ ಪಂದ್ಯಗಳು ನಡೆಯಲಿವೆ. ಈ ವೇಳೆ ಭಾರತ ಏಷ್ಯಾಕಪ್ ಇದ್ದು, ಈ ಪಂದ್ಯಾವಳಿ ನಡೆಯುವುದು ಸಾಧ್ಯತೆ ಕಡಿಮೆಯಿದೆ. ಅಲ್ಲದೆ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸರಣಿಯೂ ನಡೆಯಲಿದೆ. ಆದ್ದರಿಂದ ಬಿಸಿಸಿಐ ಹೊಸ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟ ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.












Click it and Unblock the Notifications