Get Updates
Get notified of breaking news, exclusive insights, and must-see stories!

ಅಂಡರ್ 19 ವಿಶ್ವಕಪ್‌ ಫೈನಲ್‌ನಲ್ಲಿ 15 ಸಿಕ್ಸ್, 15 ಬೌಂಡರಿ ಬಾರಿಸಿ ದಾಖಲೆ ಬರೆದ 16 ವರ್ಷದ ವೈಭವ್ ಸೂರ್ಯವಂಶಿ ಯಾರು ಗೊತ್ತಾ?

Vaibhav Suryavanshi: ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಫೆಬ್ರವರಿ 6ರ ಶುಕ್ರವಾರ ನಡೆದ ಅಂಡರ್ 19 ವಿಶ್ವಕಪ್‌ 2026 ಫೈನಲ್‌ನಲ್ಲಿ ಭಾರತ ತಂಡವು ಇಂಗ್ಲೇಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆರನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತು. ಇನ್ನೂ ಈ ಸಾಧನೆ ಪ್ರಮುಖ ಕಾರಣರಾದ 16 ವರ್ಷದ ವೈಭವ್‌ ಸೂರ್ಯವಂಶಿ ಅವರು ಇದೀಗ ಸಖತ್ ಸುದ್ದಿಯಲ್ಲಿದ್ದಾರೆ. ಹಾಗಾದ್ರೆ, ಇವರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ವೈಭವ್ ಸೂರ್ಯವಂಶಿ ಒಳಗಿದ್ದ ಅದ್ಭುತ ಪ್ರತಿಭೆ ಹೊರಬಂದಿದ್ದು ಐಪಿಎಲ್‌ ವೇಳೆ. ಇಂಡಿಯನ್‌ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ ರಾಯಲ್ಸ್‌ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡುವ ಮೂಲಕ ಇಡೀ ದೇಶವೇ ತನ್ನತ್ತ ತಿರುಗುವಂತೆ ಮಾಡಿದ್ದು, ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ.

Who Is Vaibhav Suryavanshi 16-Year-Old Who Led India to U19 World Cup 2026 Triumph Know details

ಅಂಡರ್‌-19 ವಿಶ್ವಕಪ್‌ನಲ್ಲಿ ಭಾರತದ ಪರ ಆಡಿ ಹೊಸ ಇತಿಹಾಸ ಬರೆದ 16 ವರ್ಷದ ವೈಭವ್ ಸೂರ್ಯವಂಶಿ ಇದೀಗ ಅಂತಾಷ್ಟ್ರೀಯ ಮಟ್ಟದವರೆಗೂ ಸುದ್ದಿಯಲ್ಲಿದ್ದಾರೆ. ಅಂಡರ್‌-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅವರ ಆಕ್ರಮಣಕಾರಿ ಬ್ಯಾಟಿಂಗ್ ಕ್ರಿಕೆಟ್ ಪ್ರೇಮಿಗಳನ್ನು ಅಚ್ಚರಿಗೊಳಿದೆ. ಅಷ್ಟರ ಮಟ್ಟಿಗೆ ಫೈನಲ್‌ ಪಂದ್ಯದಲ್ಲಿ ಯಾವುದೇ ಒತ್ತಡವಿಲ್ಲದೆ, ಲೀಲಾಜಾಲವಾಗಿ ಇಂಗ್ಲೆಂಡ್‌ ಬೌಲರ್‌ಗಳನ್ನು ಚೆಂಡಾಡಿದರು.

ಅಂಡರ್‌-19 ವಿಶ್ವಕಪ್‌ನಲ್ಲಿ ಇವರ ಸ್ಟೈಲೀಶ್ ಬ್ಯಾಟಿಂಗ್‌ ಶೈಲಿ ಬರೀ ಭಾರತ ಅಷ್ಟೇ ಅಲ್ಲದೆ, ವಿದೇಶಿ ಆಟಗಾರರ ಗಮನ ಸೆಳೆದಿದೆ. ಅಂಡರ್‌-19 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಕೇವಲ 80 ಎಸೆತಗಳಲ್ಲಿ 15 ಸಿಕ್ಸ್‌, 15 ಬೌಂಡರಿಗಳ ಸಹಿತ ಬರೋಬ್ಬರಿ 175 ರನ್‌ಗಳನ್ನು ಸಿಡಿಸಿ ಭಾರತದ ಗೆಲುವಿಗೆ ಪ್ರಮುಖ ಕಾರಣರಾದ ವೈಭವ್‌ಗೆ ಅಭಿನಂದನೆಗಳ ಸರಮಾಲೆಯೇ ಹರಿದುಬರುತ್ತಿದೆ.

ಅದ್ಭುತ ಸಾಧನೆ ಮಾಡಿದ ವೈಭವ್: ಇಷ್ಟು ಚಿಕ್ಕ ವಯಸ್ಸಿನಲ್ಲಿ ವಿಶ್ವಕಪ್ ಫೈನಲ್‌ನಂತಹ ದೊಡ್ಡ ವೇದಿಕೆಯಲ್ಲಿ ಈ ಮಟ್ಟಿಗೆ ಆಕ್ರಮಣಕಾರಿ ಆಟ ಆಡುವುದು ಅಪರೂಪದ ಸಾಧನೆ ಎನ್ನಬಹುದು. ಅವರ ಬ್ಯಾಟಿಂಗ್ ಶೈಲಿಯನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಮಹಾನ್ ಸಾಧಕರ ಪಟ್ಟಿಗೆ ಸೇರುವುದರಲ್ಲಿ ಎರಡು ಮಾತಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಅಂಡರ್ 19 ವಿಶ್ವಕಪ್‌ಗೆ ಸ್ಥಾನ ಪಡೆದಿದ್ದು ಹೇಗೆ?: ಬಿಹಾರ ಮೂಲದ ವೈಭವ್ ಸೂರ್ಯವಂಶಿ ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸ್ಥಳೀಯ ಟೂರ್ನಿಗಳು ಮತ್ತು ವಯೋಮಿತಿ ಪಂದ್ಯಗಳಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡಿದ ಅವರು ಆಯ್ಕೆಗಾರರ ಗಮನ ಸೆಳೆದಿದ್ದರು. ಬಳಿಕ ಅಂಡರ್‌-19ಗೆ ಆಯ್ಕೆಯಾದ ವೈಭವ್, ಅಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿ ವಿಶ್ವಕಪ್ ತಂಡಕ್ಕೆ ಸ್ಥಾನ ಪಡೆದರು.

ಇಂಗ್ಲೆಂಡ್‌ ವಿರುದ್ಧದ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಆಡಿದ ಸ್ಫೋಟಕ ಇನಿಂಗ್ಸ್ ಭಾರತದ ಗೆಲುವಿಗೆ ಪ್ರಮುಖ ಕಾರಣವಾಯಿತು. ಎದುರಾಳಿಯ ಬೌಲರ್‌ಗಳನ್ನು ಬೆಂಡೆತ್ತುವ ಮೂಲಕ ಪಂದ್ಯವನ್ನು ಭಾರತದ ಕಡೆಗೆ ತಿರುಗಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದರು. ಕ್ರಿಕೆಟ್ ತಜ್ಞರ ಅಭಿಪ್ರಾಯದಂತೆ, ವೈಭವ್ ಸೂರ್ಯವಂಶಿ ಭವಿಷ್ಯದಲ್ಲಿ ಭಾರತದ ಸೀನಿಯರ್ ತಂಡದ ಪ್ರಮುಖ ಆಟಗಾರರಾಗುವ ಸಾಧ್ಯತೆ ಹೆಚ್ಚಿದೆ. ಅವರ ಸಾಧನೆ ಯುವ ಆಟಗಾರರಿಗೆ ಪ್ರೇರಣೆಯಾಗಿದ್ದು, ಭಾರತೀಯ ಕ್ರಿಕೆಟ್‌ಗೆ ಹೊಸ ಆಶಾಕಿರಣವನ್ನು ತಂದಿದೆ.

ಇನ್ನೂ 16 ವರ್ಷದ ವೈಭವ್ ಸೂರ್ಯವಂಶಿ ಅಂಡರ್‌-19 ವಿಶ್ವಕಪ್ ಫೈನಲ್‌ನಲ್ಲಿ ದಾಖಲೆ ಬರೆದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಸೂರ್ಯವಂಶಿ ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ಯುವ ಪ್ರತಿಭೆಯಾಗಿದ್ದು, ಅಂಡರ್-19 ಭಾರತ ತಂಡದಲ್ಲಿ ಸ್ಥಾನ ಪಡೆದು ಯಾವುದೇ ಭಯವಿಲ್ಲದೆ ಆಕ್ರಮಣಕಾರಿ ಆಟದಿಂದ ಅವರು ಗಮನ ಸೆಳೆದಿದ್ದಾರೆ.

ಬಿಹಾರ ಮೂಲದ ಉದಯೋನ್ಮುಖ ಪ್ರತಿಭೆ ವೈಭವ್ ಸೂರ್ಯವಂಶಿ 2024ರಲ್ಲಿ ಕೇವಲ 12 ವರ್ಷದ ವಯಸ್ಸಿನಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಬಿಹಾರ ಪರ ಈ ಸಾಧನೆ ಮಾಡಿದ ಎರಡನೇ ಅತಿಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾದ ಅವರು, ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧ ಕೇವಲ 58 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಬಳಿಕ, ಐಪಿಎಲ್ 2025ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅವರನ್ನು 1.1 ಕೋಟಿ ರೂಪಾಯಗೆ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿತು. ಬಳಿಕ ಅವರು ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಜೈಸ್ವಾಲ್ ಸೇರಿದಂತೆ ಹಲವು ಸ್ಟಾರ್ ಆಟಗಾರರೊಂದಿಗೆ ಅಭ್ಯಾಸ ಮಾಡುವ ಅವಕಾಶ ಪಡೆದು ಲೀಗ್‌ನಲ್ಲಿ ಮಿಂಚಿದರು. ಇಲ್ಲಿಂದಲೇ ಅವರ ಲಕ್‌ ಬದಲಾಯಿತು ಅಂದ್ರೆ ತಪ್ಪಾಗಲಾರದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+