ನಾನು ನೀಡುವ ಸಲಹೆಯನ್ನು ಕೊಹ್ಲಿ ಯಾಕೆ ಕೇಳಬೇಕು: ವಿರಾಟ್ ಕೊಹ್ಲಿ ಕುರಿತ ಪ್ರಶ್ನೆಗೆ ಶಾಹಿದ್ ಅಫ್ರಿದಿ ಉತ್ತರ

ಕೆಲವು ದಿನಗಳಿಂದ ಕ್ರಿಕೆಟ್ ವಲಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಜೋರಾಗಿಯೇ ಚರ್ಚೆ ನಡೆಯುತ್ತಿದೆ. ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿರುವ ಅವರು, ಅಲ್ಪ ಮೊತ್ತಕ್ಕೆ ಔಟಾಗುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಿಂದ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಬಿಸಿಸಿಐ ಕಳಪೆ ಫಾರ್ಮ್‌ನಲ್ಲಿರುವ ಕೊಹ್ಲಿಯನ್ನು ಬೇಕಂತಲೆ ಕೈಬಿಟ್ಟಿದೆ ಎನ್ನುವ ಮಾತುಗಳು ಸಹ ಕ್ರೀಡಾ ವಲಯದಲ್ಲಿ ಕೇಳಿಬಂದಿದ್ದವು.

ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಹಲವು ಕ್ರಿಕೆಟಿಗರು, ಮಾಜಿ ಆಟಗಾರರು ಕೂಡ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ಹಲವರು ವಿರಾಟ್‌ ಕೊಹ್ಲಿಗೆ ಬೆಂಬಲ ನೀಡಿದರೆ ಮತ್ತೆ ಕೆಲವರು ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು.

ಸದ್ಯ ವಿಶ್ವದ ನಂಬರ್ 1 ಬ್ಯಾಟರ್ ಬಾಬರ್ ಅಜಂ ಕೂಡ ವಿರಾಟ್ ಕೊಹ್ಲಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಫಾರ್ಮ್‌ ಬಗ್ಗೆ ಚಿಂತೆ ಮಾಡಬೇಕಿಲ್ಲ, ಅವರ ಆಟದ ಬಗ್ಗೆ ಎಲ್ಲರಿಗೂ ಗೊತ್ತು ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈಗ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.

 ನನ್ನ ಸಲಹೆಯನ್ನು ಕೊಹ್ಲಿ ಯಾಕೆ ಪರಿಗಣಿಸುತ್ತಾರೆ

ನನ್ನ ಸಲಹೆಯನ್ನು ಕೊಹ್ಲಿ ಯಾಕೆ ಪರಿಗಣಿಸುತ್ತಾರೆ

ಸ್ಪೋರ್ಟ್ಸ್ ಪಾಕ್‌ಟಿವಿ ಎನ್ನುವ ವಾಹಿನಿಯಲ್ಲಿ ಚರ್ಚೆಯ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ನಿಮ್ಮ ಸಲಹೆ ಏನು ಎಂದು ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಶಾಹಿದ್ ಅಫ್ರಿದಿ, "ಅವರು ನನ್ನ ಸಲಹೆಯ ಬಗ್ಗೆ ಏಕೆ ಕಾಳಜಿ ವಹಿಸುತ್ತಾರೆ? ವಿರಾಟ್‌ ಕೊಹ್ಲಿ ಅವರಿಂದ ನಿರೀಕ್ಷೆ ಹೆಚ್ಚಿರುವ ಕಾರಣ ಅವರು ಉತ್ತಮ ಪ್ರದರ್ಶನ ನೀಡಬೇಕಿದೆ. ಅವರ ಸಾಮರ್ಥ್ಯಕ್ಕೆ ತಕ್ಕಂತೆ ಅವರಿಂದ ಪ್ರದರ್ಶನ ಬರುತ್ತಿಲ್ಲ" ಎಂದು ಹೇಳಿದ್ದಾರೆ.

ಟೀಂ ಇಂಡಿಯಾ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಜಿಂಬಾಬ್ವೆಯಲ್ಲಿ ನಡೆಯಲಿರುವ ಸರಣಿಯಲ್ಲಿ ವಿರಾಟ್.

 ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ

ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ

ಆಸ್ಟ್ರೇಲಿಯಾದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ಅಫ್ರಿದಿ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನ ತಂಡ ಬಲಿಷ್ಠವಾಗಿದೆ ಎಂದರು. ಆದರೂ ಟೀಂ ಇಂಡಿಯಾ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪಾಕಿಸ್ತಾನ ತಂಡಕ್ಕೆ ಎಚ್ಚರಿಕೆ ನೀಡಿದರು.

"ಪಾಕಿಸ್ತಾನ ತಂಡ ಸಮತೋಲನ ಕಾಯ್ದುಕೊಂಡಿದೆ. ಏಷ್ಯಾಕಪ್ ಮಾತ್ರವಲ್ಲ, ವಿಶ್ವಕಪ್‌ನಲ್ಲಿಯೂ ಪಾಕಿಸ್ತಾನ ಉತ್ತಮ ಪ್ರದರ್ಶನ ನೀಡಲಿದೆ. ಎಲ್ಲಾ ಆಟಗಾರರು ಫಿಟ್ ಆಗಿದ್ದಾರೆ ಎಂದು ಭಾವಿಸುತ್ತೇನೆ. ಆಡುವ 11ರ ಬಳಗ ಬಲಿಷ್ಠವಾಗಿದ್ದರೂ, ಬದಲೀ ಆಟಗಾರರ ಕೊರತೆ ಕಾಣಿಸುತ್ತಿದೆ." ಎಂದು ಅಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.

 ವಿಶ್ರಾಂತಿ ಪಡೆಯುತ್ತಿರುವ ವಿರಾಟ್ ಕೊಹ್ಲಿ

ವಿಶ್ರಾಂತಿ ಪಡೆಯುತ್ತಿರುವ ವಿರಾಟ್ ಕೊಹ್ಲಿ

ಐಪಿಎಲ್‌ನಲ್ಲಿ ರನ್‌ ಗಳಿಸಲು ಪರದಾಡಿದ್ದ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಸತತ ವೈಫಲ್ಯ ಅನುಭವಿಸಿದ್ದರು. ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ಪ್ರವಾಸದಲ್ಲಿ ಕೊಹ್ಲಿ ಮರುನಿಗದಿತ ಐದನೇ ಟೆಸ್ಟ್, ಎರಡು ಟಿ20 ಮತ್ತು ಎರಡು ಏಕದಿನ ಪಂದ್ಯಗಳಲ್ಲಿ 20 ರನ್ ಗಡಿ ದಾಟಲು ವಿಫಲರಾಗಿದ್ದರು.

ನಂತರ ವೆಸ್ಟ್ ಇಂಡೀಸ್ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಯಿತು. ಸರಣಿ ಬಳಿಕ ಇಂಗ್ಲೆಂಡ್‌ನಲ್ಲೇ ಉಳಿಯಲು ನಿರ್ಧರಿಸಿದ ವಿರಾಟ್ ಕೊಹ್ಲಿ ಕುಟುಂಬದ ಸದಸ್ಯರ ಜೊತೆ ಕಾಲ ಕಳೆಯತ್ತಿದ್ದಾರೆ.

 ಭರ್ಜರಿ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ

ಭರ್ಜರಿ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ

ಪ್ರಮುಖ ಆಟಗಾರರ ಅನುಪಸ್ಥಿತಿ ತಂಡವನ್ನು ಕಾಡಲು ಯುವ ಆಟಗಾರರು ಅನುವು ಮಾಡಿಕೊಡಲಿಲ್ಲ. ವೆಸ್ಟ್‌ ಇಂಡೀಸ್ ನೆಲದಲ್ಲಿ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ 39 ವರ್ಷಗಳಲ್ಲಿ ಭಾರತ ತಂಡ ಮಾಡಲಾಗದ ಸಾಧನೆಯನ್ನು ಮಾಡಿದರು. ಮೊದಲ ಬಾರಿಗೆ ಕೆರಿಬಿಯನ್ ನೆಲದಲ್ಲಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ದಾಖಲೆ ನಿರ್ಮಿಸಿದರು.

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ, ಕೆ.ಎಲ್‌.ರಾಹುಲ್‌ರಂತಹ ಅಗ್ರ ಆಟಗಾರರ ಅನುಪಸ್ಥಿತಿ ನಡುವೆಯೂಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ ಎನ್ನುವುದು ಸದ್ಯ ಆತಂಕವನ್ನು ದೂರ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+