ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ: ಟಿ20 ರ್‍ಯಾಂಕಿಂಗ್‌ನಲ್ಲಿ ದಿನೇಶ್ ಕಾರ್ತಿಕ್

|
Google Oneindia Kannada News

ಭಾರತದ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ 108 ಸ್ಥಾನಗಳನ್ನು ಜಿಗಿತ ಕಂಡಿದ್ದಾರೆ. ಮ್ಯಾಚ್ ಫಿನಿಶರ್ ಆಗಿ ವೃತ್ತಿ ಜೀವನದ ಎರಡನೇ ಇನ್ನಿಂಗ್ಸ್ ಆಡುತ್ತಿರುವ ಕಾರ್ತಿಕ್ ಟಿ20 ರ್‍ಯಾಂಕಿಂಗ್ ಪಟ್ಟಿಯಲ್ಲಿ ಈಗ 87 ನೇ ಸ್ಥಾನದಲ್ಲಿದ್ದಾರೆ, ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಟಿ20 ಸರಣಿಯಲ್ಲಿ ಮೂರು ವರ್ಷಗಳ ನಂತರ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದರು.

ದಿನೇಶ್ ಕಾರ್ತಿಕ್ ಅವರು 2022 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭದಿಂದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದ ದಿನೇಶ್ ಕಾರ್ತಿಕ್, ಭರ್ಜರಿ ಪ್ರದರ್ಶನ ನೀಡಿದ್ದರು. ಆರ್‌ಸಿಬಿ ಗೆಲುವಿನಲ್ಲಿ ದಿನೇಶ್ ಕಾರ್ತಿಕ್ ಮಹತ್ವದ ಪಾತ್ರ ವಹಿಸಿದ್ದರು. ಅವರ ಪ್ರದರ್ಶನಕ್ಕೆ ಎಲ್ಲ ಕಡೆಯಿಂದ ಪ್ರಶಂಸೆ ವ್ಯಕ್ತವಾಗಿತ್ತು, ನಂತರ ದಿನೇಶ್ ಕಾರ್ತಿಕ್ ಅಂತರಾಷ್ಟ್ರೀಯ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದರು.

30 ವರ್ಷಗಳ ನಂತರ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಏಕದಿನ ಸರಣಿ ಗೆದ್ದ ಶ್ರೀಲಂಕಾ30 ವರ್ಷಗಳ ನಂತರ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಏಕದಿನ ಸರಣಿ ಗೆದ್ದ ಶ್ರೀಲಂಕಾ

ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಸರಣಿಯ 4 ನೇ ಟಿ20 ಪಂದ್ಯದಲ್ಲಿ ದೆಹಲಿಯ ರಾಜ್‌ಕೋಟ್‌ ಮೈದಾನದಲ್ಲಿ ದಿನೇಶ್ ಕಾರ್ತಿಕ್ ಕೇವಲ 27 ಎಸೆತಗಳಲ್ಲಿ 55 ರನ್ ಗಳಿಸಿದರು. ಇದು ಭಾರತ ತಂಡ ಉತ್ತಮ ಮೊತ್ತ ಕಲೆ ಹಾಕಲು ಕಾರಣವಾಯಿತು, ಈ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತ್ತು. ಸರಣಿಯನ್ನು ಸಮಬಲಗೊಳಿಸುವಲ್ಲಿ ದಿನೇಶ್ ಕಾರ್ತಿಕ್ ಆಟ ನಿರ್ಣಾಯಕವಾಗಿತ್ತು.

ಟಿ20 ವಿಭಾಗದಲ್ಲಿ ರ್‍ಯಾಂಕಿಂಗ್

ಟಿ20 ವಿಭಾಗದಲ್ಲಿ ರ್‍ಯಾಂಕಿಂಗ್

ವಿಶ್ವ ಟಿ20 ರ್‍ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಮತ್ತೋರ್ವ ಆಟಗಾರ ಮಹಮ್ಮದ್ ರಿಜ್ವಾನ್ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಓಪನಿಂಗ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಟಾಪ್ 10ರಲ್ಲಿ ಸ್ಥಾನ ಪಡೆದಿರುವ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ವಿರಾಟ್‌ ಕೊಹ್ಲಿ 21ನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಜೋಶ್ ಹೇಝಲ್‌ವುಡ್ ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಆದಿಲ್ ರಶೀದ್ ಎರಡನೇ ಸ್ಥಾನದಲ್ಲಿದ್ದಾರೆ. ಟಿ20 ರ್‍ಯಾಂಕಿಂಗ್‌ ಟಾಪ್ 10 ಸ್ಥಾನಗಳಲ್ಲಿ ಭಾರತದ ಯಾವೊಬ್ಬ ಬೌಲರ್ ಕೂಡ ಕಾಣಿಸಿಕೊಂಡಿಲ್ಲ.

ಬೆಂಗಳೂರಿನಲ್ಲಿ ಮುಂಬೈ-ಮಧ್ಯ ಪ್ರದೇಶ ತಂಡಗಳ ನಡುವೆ ರಣಜಿ ಫೈನಲ್ ಫೈಟ್ಬೆಂಗಳೂರಿನಲ್ಲಿ ಮುಂಬೈ-ಮಧ್ಯ ಪ್ರದೇಶ ತಂಡಗಳ ನಡುವೆ ರಣಜಿ ಫೈನಲ್ ಫೈಟ್

ಟೆಸ್ಟ್ ವಿಭಾಗದಲ್ಲಿ ಜೋ ರೂಟ್‌ಗೆ ಅಗ್ರಸ್ಥಾನ

ಟೆಸ್ಟ್ ವಿಭಾಗದಲ್ಲಿ ಜೋ ರೂಟ್‌ಗೆ ಅಗ್ರಸ್ಥಾನ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಇಂಗ್ಲೆಂಡ್‌ನ ಜೋ ರೂಟ್‌ ಟೆಸ್ಟ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅಗ್ರ ಸ್ಥಾನದಲ್ಲಿ ಮಾರ್ನಸ್ ಲಬುಷನೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಭಾರತದ ಆರಂಭಿಕ ಬ್ಯಾಟ್ಸ್‌ಮನ್ 8ನೇ ಸ್ಥಾನ ಪಡೆದಿದ್ದರೆ ವಿರಾಟ್ ಕೊಹ್ಲಿ 10, ರಿಷಬ್ ಪಂತ್ 11ನೇ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ವಿಭಾಗದಲ್ಲಿ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಭಾರತದ ಸ್ಪಿನ್ನರ್ ರವಿಚಂದ್ರನ್ ಎರಡನೇ ಸ್ಥಾನದಲ್ಲಿದ್ದರೆ, ವೇಗಿ ಜಸ್ಪ್ರೀತ್ ಬುಮ್ರಾ 3ನೇ ಸ್ಥಾನದಲ್ಲಿದ್ದಾರೆ.

ಬಾಬರ್ ಅಜಮ್ ಪಾರಮ್ಯ

ಬಾಬರ್ ಅಜಮ್ ಪಾರಮ್ಯ

ಏಕದಿನ ಮಾದರಿ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಬ್ಯಾಟರ್ ಬಾಬರ್ ಅಜಮ್ ಅಗ್ರ ಸ್ಥಾನ ಕಾಪಾಡಿಕೊಂಡಿದ್ದಾರೆ. ಇನ್ನೋರ್ವ ಬ್ಯಾಟರ್ ಇಮಾಮ್ ಉಲ್ ಹಕ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದಾರೆ. ಮತ್ತೋರ್ವ ಬ್ಯಾಟರ್ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್‌ ಬೌಲ್ಟ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಇಂಗ್ಲೆಂಡ್‌ನ ಕ್ರಿಸ್‌ ವೋಕ್ಸ್ ಎರಡನೇ ಸ್ಥಾನದಲ್ಲಿದ್ದರೆ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ 5ನೇ ಸ್ಥಾನಕ್ಕೇರಿದ್ದಾರೆ.

ರವೀಂದ್ರ ಜಡೇಜಾ ಈಗಲೂ ನಂಬರ್ 1

ರವೀಂದ್ರ ಜಡೇಜಾ ಈಗಲೂ ನಂಬರ್ 1

ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಆಲ್‌ರೌಂಡರ್ ವಿಭಾಗದಲ್ಲಿ ಟೆಸ್ಟ್ ಮಾದರಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಬಾಂಗ್ಲಾದ ಶಕೀಬ್ ಅಲ ಹಸನ್ ಎರಡನೇ ಸ್ಥಾನದಲ್ಲಿದ್ದರೆ, ಭಾರತದ ಮತ್ತೋರ್ವ ಆಟಗಾರ ರವಿಚಂದ್ರನ್ ಅಶ್ವಿನ್ ಮೂರನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡ ಅಗ್ರ ರ್‍ಯಾಂಕಿಂಗ್‌ನಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಏಕದಿನ ವಿಭಾಗದಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ, ಪಾಕಿಸ್ತಾನ ಮತ್ತು ಭಾರತ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ. ಟಿ20 ಮಾದರಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್‌ ಎರಡನೇ ಸ್ಥಾನದಲ್ಲಿದೆ.

English summary
Veteran wicketkeeper-batsman Dinesh Karthik has jumped 108 places in the ICC T20 rankings. Karthik, who is playing the second innings of his career as a match finisher, is now No. 87 on the T20 rankings, three years after He played an international match against South Africa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X