T20 World Cup: ನ್ಯೂಜಿಲೆಂಡ್ ತಂಡ ಪ್ರಕಟ: ಬಲಿಷ್ಠ ಟೀಮ್ ಮುನ್ನಡೆಸಲಿರುವ ಕೇನ್ ವಿಲಿಯಮ್ಸನ್
ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಅತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಇನ್ನೇನು ದಿನಗಣನೆ ಆರಂಭವಾಗಿದೆ. ಈ ಬೆನ್ನಲ್ಲೆ ಎಲ್ಲ ತಂಡಗಳು ತಮ್ಮ ತಮ್ಮ ತಂಡವನ್ನು ಪ್ರಕಟಿಸುವ ತಯಾರಿಯನ್ನು ನಡೆಸಿವೆ. ಈ ಬೆನ್ನಲ್ಲೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಸಹ ಮೆಗಾ ಟೂರ್ನಿಗೆ ತಮ್ಮ ತಂಡವನ್ನು ಪ್ರಕಟಿಸಿದೆ.
ಈ ಬಾರಿ ಟಿ20 ವಿಶ್ವಕಪ್ ನಲ್ಲಿ ಒಟ್ಟು 20 ತಂಡಗಳು ಭಾಗವಹಿಸುತ್ತಿದ್ದು, ಕಿವೀಸ್ ತಂಡ ತನ್ನ ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಕೇನ್ ವಿಲಿಯಮ್ಸನ್ ಈ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಬ್ಯಾಟ್‌ನೊಂದಿಗೆ ಅದ್ಭುತ ಪ್ರದರ್ಶನ ನೀಡಿದ ರಚಿನ್ ರವೀಂದ್ರ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಈ ಬಾರಿ ಪ್ರಸಸ್ತಿಯ ಬರವನ್ನು ನೀಗಿಸುವ ನಿಟ್ಟಿನಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಿದೆ. ಅನುಭವಿ ಹಾಗೂ ಯುವ ಆಟಗಾರರನ್ನು ಒಳಗೊಂಡ ತಂಡ ಬಲಿಷ್ಠವಾಗಿದೆ. ನ್ಯೂಜಿಲೆಂಡ್ ತಂಡ ಸಹ ಅಳೆದು ತೂಗಿ ತಂಡವನ್ನು ಪ್ರಕಟಿಸಿದೆ. ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗದಿದ್ದರೂ ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ.
ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನವನ್ನು ನೀಡುತ್ತಿರುವ ಸ್ಟಾರ್ ಆಟಗಾರ ಡೇರಿಲ್ ಮಿಚೆಲ್ ಅವರಿಗೂ ಈ ತಂಡದಲ್ಲಿ ಸ್ಥಾನ ಲಭಿಸಿದೆ. ಇವರು ಆಡಿದ 8 ಪಂದ್ಯಗಳಲ್ಲಿ 198 ರನ್ ಸಿಡಿಸಿದ್ದು, 132 ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕುತ್ತಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಸಹ ಸೇರಿದೆ. ರಾಜಸ್ಥಾನ ರಾಯಲ್ಸ್ ಗೆಲುವಿನಲ್ಲಿ ಮಿಂಚುತ್ತಿರುವ ಟ್ರೆಂಟ್ ಬೌಲ್ಟ್ ಅವರಿಗೂ ತಂಡದಲ್ಲಿ ಸ್ಥಾನ ಲಭಿಸಿದೆ.

ನ್ಯೂಜಿಲೆಂಡ್ ತಂಡದ ಪ್ರದರ್ಶನ ಹೇಗಿದೆ?
ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ, ಕಿವೀಸ್ ತಂಡವು ನಾಲ್ಕನೇ ಬಾರಿಗೆ ಈ ಮೆಗಾ ಈವೆಂಟ್‌ನಲ್ಲಿ ಆಡಲಿದೆ. ಇದಕ್ಕೂ ಮುನ್ನ 2016ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ತಂಡ ಸೆಮಿಫೈನಲ್ ತಲುಪಿತ್ತು. 2021ರ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ತಲುಪಿ ನಿರಾಸೆ ಅನುಭವಿಸಿತ್ತು. ಇನ್ನು ಕಳೆದ ಆವೃತ್ತಿಯ ವಿಶ್ವಕಪ್‌ನಲ್ಲಿ ಕಿವೀಸ್ ಸೆಮೀಸ್‌ನಲ್ಲಿ ಹೊರ ನಡೆದಿತ್ತು.
ನ್ಯೂಜಿಲೆಂಡ್ ತಂಡದ ವೇಳಾಪಟ್ಟಿ?
ನ್ಯೂಜಿಲೆಂಡ್ ತಂಡವು ಜೂನ್ 7 ರಿಂದ ಅಫ್ಘಾನಿಸ್ತಾನ ವಿರುದ್ಧ 2024 ರ T20 ವಿಶ್ವಕಪ್‌ನಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ. ಕಿವೀಸ್ ಜೂನ್ 12 ರಂದು ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಪಂದ್ಯ ಆಡಲಿದೆ. ಜೂನ್ 14 ರಂದು ಉಗಾಂಡಾ ವಿರುದ್ಧ ಮತ್ತು ಜೂನ್ 17 ರಂದು ಪಪುವಾ ನ್ಯೂಗಿನಿ ವಿರುದ್ಧ ಆಡಲಿದೆ. ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್‌ನಲ್ಲಿ ಸಿ ಗುಂಪಿನ ಕಾಣಿಸಿಕೊಂಡಿದೆ.
ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್, ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಾಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ,












Click it and Unblock the Notifications