India vs Sri Lanka: 8ನೇ ಬಾರಿ ಏಷ್ಯಾಕಪ್‌ ಗೆಲ್ಲುವ ವಿಶ್ವಾಸದಲ್ಲಿ ಭಾರತ: ಫೈನಲ್ ಪಂದ್ಯದ ಸಮಯ, ವಿವರ

ಶನಿವಾರ ಪುರುಷರ ಭಾರತ ಮತ್ತು ಶ್ರೀಲಂಕಾ ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದ್ದಾರೆ. ಭಾನುವಾರ ಮಹಿಳಾ ಏಷ್ಯಾಕಪ್‌ ಫೈನಲ್ ಪಂದ್ಯದಲ್ಲಿ ಕೂಡ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ.

ಭಾರತ 8ನೇ ಬಾರಿ ಮಹಿಳಾ ಏಷ್ಯಾಕಪ್ ಗೆಲ್ಲಲು ಸಜ್ಜಾಗಿದ್ದರೆ, ಶ್ರೀಲಂಕಾ ಮೊದಲ ಬಾರಿ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಫೈನಲ್‌ನಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷಿಸಲಾಗಿದೆ.

Women s Asia Cup 2024 Final India vs Sri Lanka Showdown

ಭಾರತ ಮತ್ತು ಶ್ರೀಲಂಕಾ ಎರಡೂ ತಂಡಗಳು ಈ ಪಂದ್ಯಾವಳಿಯಲ್ಲಿ ಅಜೇಯವಾಗಿ ಫೈನಲ್ ತಲುಪಿವೆ. ಸೆಮಿಫೈನಲ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್‌ ತಲುಪಿದ್ದರೆ, ಪಾಕಿಸ್ತಾನದ ವಿರುದ್ಧ ಶ್ರೀಲಂಕಾ 3 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಫೈನಲ್ ತಲುಪಿದೆ.

ರೋಚಕ ಹಣಾಹಣಿ ನಿರೀಕ್ಷೆ

ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಸ್ಮೃತಿ ಮಂಧಾನ, ಶಫಾಲಿ ವರ್ಮಾ, ರಿಚಾ ಘೋಷ್ ಬ್ಯಾಟಿಂಗ್‌ನಲ್ಲಿ ಮಿಂಚಿದರೆ, ರೇಣುಕಾಸಿಂಗ್, ದೀಪ್ತಿ ಶರ್ಮಾ, ರಾಧಾ ಯಾದವ್ ಬೌಲಿಂಗ್‌ನಲ್ಲಿ ಎದುರಾಳಿಗಳನ್ನು ತಬ್ಬಿಬ್ಬುಗೊಳಿಸುತ್ತಿದ್ದಾರೆ.

ಮತ್ತೊಂದು ಕಡೆ ಶ್ರೀಲಂಕಾ ತಂದ ನಾಯಕಿ ಚಾಮರಿ ಅಟಪಟ್ಟು ಅತ್ಯುತ್ತಮ ಫಾರ್ಮ್‌ನಲ್ಲಿದ್ದು ಹಲವು ಪಂದ್ಯಗಳಲ್ಲಿ ಏಕಾಂಗಿಯಾಗಿ ತಂಡವನ್ನು ಗೆಲ್ಲಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಕೂಡ ಶ್ರೀಲಂಕಾ ಚಾಮರಿ ಅವರ ಮೇಲೆ ಹೆಚ್ಚು ಅವಲಂಬಿತವಾಗಿದೆ.

ಭಾರತವೇ ಫೇವರಿಟ್ ತಂಡ!

ಏಷ್ಯಾಕಪ್‌ನಲ್ಲಿ ಭಾರತದ ಪ್ರಾಬಲ್ಯ ಮುಂದುವರೆದಿದೆ. ಏಳು ಬಾರಿ ಏಷ್ಯಾಕಪ್ ಗೆದ್ದಿದ್ದರೆ, ಬಾಂಗ್ಲಾದೇಶ ಮಾತ್ರ ಒಮ್ಮೆ ಏಷ್ಯಾಕಪ್ ಗೆದ್ದಿದೆ. ಭಾರತ ಈಗ 8ನೇ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ.

ಪಿಚ್, ಹವಾಮಾನ ವರದಿ

ಡಂಬುಲಾದ ರಣಗಿರಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ. ಮಳೆಯಾಗುವ ಸಾಧ್ಯತೆ ಶೇಕಡಾ 10 ರಷ್ಟಿದ್ದು ಮಳೆಯ ಆತಂಕ ಸದ್ಯಕ್ಕೆ ಇಲ್ಲದಂತಾಗಿದೆ. ಡಂಬುಲಾದಲ್ಲಿ ಚೇಸಿಂಗ್ ಮಾಡುವ ತಂಡಕ್ಕೆ ಹೆಚ್ಚು ಅನುಕೂಲವಿದ್ದು, ಟಾಸ್ ಗೆಲ್ಲುವ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಉಭಯ ತಂಡಗಳ ಆಡುವ ಬಳಗ

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+