Breaking; ವಿಶ್ವ ಅಥ್ಲೆಟಿಕ್ಸ್‌; ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

ನವದೆಹಲಿ, ಜುಲೈ 24; ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ 2022ರಲ್ಲಿ ಭಾರತದ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಭಾನುವಾರ ಪುರುಷರ ಜಾವೆಲಿನ್ ಥ್ರೋ ಫೈನಲ್‌ ಪಂದ್ಯ ನಡೆಯಿತು.

ಫೈನಲ್ ಪಂದ್ಯದಲ್ಲಿ ನಾಲ್ಕನೇ ರೌಂಡ್‌ನಲ್ಲಿ 88.13 ಮೀಟರ್ ದೂರ ಜಾವೆಲಿನ್ ಥ್ರೋ ಮಾಡುವ ಮೂಲಕ ನೀರಜ್ ಚೋಪ್ರಾ ಬೆಳ್ಳಿಪದಕ ಪಡೆದರು.

ಅಮೆರಿಕದ ಒರೆಗಾನ್‌ನಲ್ಲಿ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ 2022 ನಡೆಯುತ್ತಿದೆ. ಭಾರತದ ನೀರಜ್ ಚೋಪ್ರಾ ಎರಡನೇ ಸುತ್ತಿನಲ್ಲಿ 82.39 ಮೀಟರ್, 3ನೇ ರೌಂಡ್‌ನಲ್ಲಿ 86.37 ಮೀಟರ್ ಎಸೆದರು.

World Athletics Championship 2022 Neeraj Chopra Wins Silver Medal

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದಿದ್ದ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿಯೂ ಚಿನ್ನದ ಪದಕದ ನಿರೀಕ್ಷೆ ಹುಟ್ಟಿಸಿದ್ದರು. ಆದರೆ ಬೆಳ್ಳಿ ಪದಕ ಗೆದ್ದಿದ್ದಾರೆ.

ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತ ಗೆದ್ದ ಮೊದಲ ಪಕದವಿದಾಗಿದೆ.

ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗೆದ್ದ 2ನೇ ಪದಕವಿದು. 2003ರಲ್ಲಿ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಪ್ಯಾರಿಸ್‌ನಲ್ಲಿ ನಡೆದಿತ್ತು. ಆಗ, ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದಿದ್ದರು.

ಭಾನುವಾರ ನಡೆದ ಜಾವೆಲಿನ್ ಥ್ರೋ ಫೈನಲ್ ಪಂದ್ಯದಲ್ಲಿ ಭಾರತದ ಮತ್ತೊಬ್ಬರು ಫೈನಲಿಸ್ಟ್ ರೋಹಿತ್ ಯಾದವ್ 77.96, 78.05 ಮತ್ತು 78.72 ಮೀಟರ್ ದೂರಕ್ಕೆ ಎಸೆದರು.

ಗ್ರೆನೇಡಾದ ಆಂಡರ್ಸನ್ ಪೀಟರ್ಸ್ 90.54 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದರು. ಜೆಕ್ ಜಾಕುಬ್ ವಾಡ್ಲೆಜ್ 88.09 ಮೀಟರ್ ದೂರ ಎಸೆದು ಕಂಚಿನ ಪದಕ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+