Breaking; ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್, ಫೈನಲ್‌ಗೆ ಚೋಪ್ರಾ
ನವದೆಹಲಿ, ಜುಲೈ 22; ಅಮೆರಿಕದ ಒರೆಗಾನ್‌ನಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ನಡೆಯುತ್ತಿದೆ. ಭಾರತದ ನೀರಜ್ ಚೋಪ್ರಾ ಪುರುಷರ ಜಾವೆಲಿನ್ ಥ್ರೋನಲ್ಲಿ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿರುವ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿಯೂ ಚಿನ್ನದಪದಕದ ನಿರೀಕ್ಷೆ ಹುಟ್ಟಿಸಿದ್ದಾರೆ.
ಭಾರತ ಇದುವರೆಗೂ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದಿಲ್ಲ. ಫೈನಲ್‌ನ ಅರ್ಹತಾ ಸುತ್ತಿನ ಮೊದಲ ಹಂತದಲ್ಲಿಯೇ ನೀರಜ್ ಚೋಪ್ರಾ 88.39 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಪುರುಷರ ವಿಭಾಗದ ಫೈನಲ್‌ಗೆ ಅರ್ಹತೆ ಪಡೆದರು.

ಅರ್ಹತಾ ಸುತ್ತಿನಲ್ಲಿ 32 ಜನರಿದ್ದರು. ಇವರಲ್ಲಿ ನೀರಜ್ ಚೋಪ್ರಾ ಸೇರಿದಂತೆ 12 ಮಂದಿ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ನೂರ್ಮಿ ಗೇಮ್ಸ್ 2022ರಲ್ಲಿ 89.03 ಮೀಟರ್ ಜಾವೆಲಿನ್ ಥ್ರೋ ಮೂಲಕ ಬೆಳ್ಳಿ ಪದಕ ಪಡೆದಿದ್ದ ನೀರಜ್ ಚೋಪ್ರಾ ಈಗ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನೀರಜ್ ಚೋಪ್ರಾ ಪದಕ ಗೆದ್ದರೆ ಅದು ಐತಿಹಾಸಿಕ ಸಾಧನೆಯಾಗಲಿದೆ. 39 ವರ್ಷಗಳ ವಿಶ್ವ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಭಾರತ ಪದಕ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ.
2003ರಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಪ್ಯಾರಿಸ್‌ನಲ್ಲಿ ನಡೆದಿತ್ತು. ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕವನ್ನು ಪಡೆದಿದ್ದರು. ಬಳಿಕ ಯಾವುದೇ ಕ್ರೀಡಾಪಟು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಪಡೆದಿಲ್ಲ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಪುರುಷರ ವಿಭಾಗದ ಜಾವೆಲಿನ್ ಥ್ರೋ ಫೈನಲ್ ಪಂದ್ಯ ಭಾನುವಾರ ನಡೆಯಲಿದೆ. 12 ಸ್ಪರ್ಧಿಗಳ ನಡುವೆ ನೀರಜ್ ಚೋಪ್ರಾ ಸೆಣಸಿ ಭಾರತಕ್ಕೆ ಪದಕ ತರಲಿ ಎಂದು ಕ್ರೀಡಾಭಿಮಾನಿಗಳು ಹಾರೈಸುತ್ತಿದ್ದಾರೆ.
ಜುಲೈ 15ರಿಂದ ಆರಂಭವಾಗಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಜುಲೈ 24ರಂದು ನಡೆಯಲಿದೆ. ಅಂದೇ ನೀರಜ್ ಚೋಪ್ರಾ ಫೈನಲ್‌ನಲ್ಲಿ ಸೆಣಸಲಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications