Ind vs Aus: ಕೊಹ್ಲಿ-ರಾಹುಲ್ ಭರ್ಜರಿ ಆಟ: ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದ ಭಾರತ

ಏಕದಿನ ವಿಶ್ವಕಪ್ 2023ರ ಪಂದ್ಯಾವಳಿಯ ಪ್ರಯಾಣವನ್ನು ಭಾರತ ತಂಡ ಗೆಲುವಿನೊಂದಿಗೆ ಆರಂಭಿಸಿದೆ. ಅಕ್ಟೋಬರ್ 8ರಂದು ಚೆನ್ನೈ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಭಾರತಕ್ಕೆ ಸುಲಭ ಜಯ ತಂದುಕೊಟ್ಟರು. ಭಾರತ ತನ್ನ ಮೊದಲನೇ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ.

World Cup 2023 : Kohli and KL Rahul Lead India to A Six-Wicket Win Over Australia

ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಮತ್ತು ಅಶ್ವಿನ್ ಅವರ ಸ್ಪಿನ್ ಬೌಲಿಂಗ್ ಎದುರು ತತ್ತರಿಸಿದ ಕಾಂಗರೂ ಪಡೆ ಕೇವಲ 199 ರನ್‌ಗಳಿಗೆ ಆಲೌಟ್ ಆಯಿತು.

ಡೇವಿಡ್ ವಾರ್ನರ್ 41, ಸ್ಟೀವ್ ಸ್ಮಿತ್ 46, ಲ್ಯಾಬುಸ್ಚಾಗ್ನೆ 27, ಮಿಚೆಲ್ ಸ್ಟಾರ್ಕ್ 28 ರನ್ ಗಳಿಸಿದ್ದು ಹೊರತುಪಡಿಸಿ ಉಳಿದ ಬ್ಯಾಟರ್ ಗಳು ರನ್ ಗಳಿಸಲು ವಿಫಲವಾದರು. ರವೀಂದ್ರ ಜಡೇಜಾ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರೆ. ಕುಲದೀಪ್ ಯಾದವ್ ಮತ್ತು ಬುಮ್ರಾ ತಲಾ ಎರಡು ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ಮತ್ತು ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

ಭಾರತಕ್ಕೆ ಆರಂಭಿಕ ಆಘಾತ

ಈ ಸುಲಭದ ಗುರಿಯನ್ನು ಬೆನ್ನತ್ತಿದ ಭಾರತಕ್ಕೆ ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಜಲ್‌ವುಡ್ ಆಘಾತ ನೀಡಿದರು. ಇಶಾನ್ ಕಿಶನ್ ಎದುರಿಸಿದ ಮೊದಲ ಎಸೆತದಲ್ಲೇ ಔಟಾದರೆ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಸೊನ್ನೆಗೆ ಔಟಾದರು. 2 ರನ್ ಗಳಿಸುಷ್ಟರಲ್ಲಿ ಭಾರತ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಸಂದರ್ಭದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ರನ್ ಗಳಿಸಿದ ಈ ಜೋಡಿ ನಂತರ ಸುಲಭವಾಗಿ ರನ್ ಗಳಿಸಿ ಭಾರತ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

4ನೇ ವಿಕೆಟ್‌ಗೆ ಈ ಜೋಡಿ 165 ರನ್‌ಗಳ ಜೊತೆಯಾಟ ಆಡಿತು. ವಿರಾಟ್ ಕೊಹ್ಲಿ 116 ಎಸೆತಗಳಲ್ಲಿ 85 ರನ್ ಗಳಿಸಿದರೆ, ಕೆಎಲ್ ರಾಹುಲ್ 115 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 97 ರನ್ ಗಳಿಸಿ ಶತಕ ಗಳಿಸುವ ಅವಕಾಶ ಕಳೆದುಕೊಂಡರು. ಹಾರ್ದಿಕ್ ಪಾಂಡ್ಯ 8 ಎಸೆತಗಳಲ್ಲಿ ಅಜೇಯ 11 ರನ್ ಗಳಿಸಿದರು.

ಏಕದಿನ ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲೇ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನ ಮಣಿಸಿರುವ ಭಾರತ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಭಾರತ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 11ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+