World Cup Points Table: ಅಗ್ರಸ್ಥಾನದಲ್ಲಿ ಭಾರತ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೊನೆಯ ಸ್ಥಾನದಲ್ಲಿ! ಅಂಕಪಟ್ಟಿ ಹೀಗಿದೆ
ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯಾವಳಿ ದಿನದಿಂದ ದಿನಕ್ಕೆ ರೋಚಕವಾಗುತ್ತಿದೆ. ಸೋಮವಾರ ಅಫ್ಘಾನಿಸ್ತಾನ ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ಯಾವ ತಂಡವೂ ಕಡಿಮೆಯಿಲ್ಲ ಎನ್ನುವ ಸಂದೇಶ ನೀಡಿದೆ.
ನೆದರ್ಲ್ಯಾಂಡ್ಸ್ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ್ದರೆ, ನಂತರ ಅಫ್ಘಾನಿಸ್ತಾನ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಮಣಿಸಿ ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಿಸಿತ್ತು. ಇನ್ನು ಭಾರತ ಐಸಿಸಿ ಪಂದ್ಯಾವಳಿಯಲ್ಲಿ 20 ವರ್ಷಗಳ ಬಳಿಕ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ.

ಹಲವು ತಂಡಗಳು ಈಗಾಗಲೇ ಐದು ಪಂದ್ಯಗಳನ್ನಾಡಿದ್ದು, ಪಂದ್ಯಾವಳಿಯ ಮಧ್ಯಂತರಕ್ಕೆ ಬಂದಿದೆ. ಎಲ್ಲಾ ತಂಡಗಳು ಸೆಮಿಫೈನಲ್ ಪ್ರವೇಶಿಸುವ ಉದ್ದೇಶದಲ್ಲಿ ಮುಂದಿನ ಪಂದ್ಯಗನ್ನು ಗೆಲ್ಲಲು ರಣತಂತ್ರ ರೂಪಿಸುತ್ತಿವೆ.
ಪಾಯಿಂಟ್ ಪಟ್ಟಿ ಹೇಗಿದೆ?
ಆಡಿರುವ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ಹೊಸ್ತಿಲಿನಲ್ಲಿದೆ. ಇನ್ನು ಭಾರತದ ವಿರುದ್ಧ ಸೋತ ಬಳಿಕ ನ್ಯೂಜಿಲೆಂಡ್ ತಂಡ 8 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಬಾರಿ ವಿಶ್ವಕಪ್‌ನಲ್ಲಿ ಮುಗ್ಗರಿಸಿದ್ದು 10ನೇ ಸ್ಥಾನದಲ್ಲಿದ್ದಾರೆ. 4 ಪಂದ್ಯಗಳನ್ನಾಡಿರುವ ಇಂಗ್ಲೆಂಡ್ ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ, 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ, ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶಿಸಬೇಕು ಎಂದರೆ ಉಳಿದ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಾಗುತ್ತದೆ.
ದಕ್ಷಿಣ ಆಫ್ರಿಕಾ ತಂಡ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಆಡಿರುವ 4 ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿ ಒಂದು ಪಂದ್ಯದಲ್ಲಿ ಸೋಲುವ ಮೂಲಕ 6 ಅಂಕಗಳೊಂದಿದೆ ಮೂರನೇ ಸ್ಥಾನದಲ್ಲಿದೆ, ಮಂಗಳವಾರದ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಗೆಲುವು ಸಾಧಿಸಿದರೆ ಎರಡನೇ ಸ್ಥಾನಕ್ಕೆ ಜಿಗಿಯಲಿದೆ.
ಆಸ್ಟ್ರೇಲಿಯಾ ತಂಡ ಇದುವರೆಗೆ 4 ಪಂದ್ಯಗಳನ್ನಾಡಿದ್ದು 2ರಲ್ಲಿ ಗೆಲುವು ಸಾಧಿಸಿ 4 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಇನ್ನು ಪಾಕಿಸ್ತಾನ 5 ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಮಾತ್ರ ಗೆದ್ದಿದ್ದು ಮೂರು ಪಂದ್ಯಗಳಲ್ಲಿ ಸೋತಿದೆ ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಪಾಕಿಸ್ತಾನದ ಸೆಮಿಫೈನಲ್ ಹಾದಿ ಕಠಿಣವಾಗಿದೆ.
ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ ಬಳಿಕ ಅಫ್ಘಾನಿಸ್ತಾನ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಜಿಗಿದಿದೆ. 5 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸಿ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ. ಬಾಂಗ್ಲಾದೇಶ 7ನೇ ಸ್ಥಾನದಲ್ಲಿದ್ದು, ನೆದರ್ಲ್ಯಾಂಡ್ಸ್ ತಂಡ 8ನೇ ಸ್ಥಾನದಲ್ಲಿದೆ. ಶ್ರೀಲಂಕಾ 9ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 10ನೇ ಸ್ಥಾನದಲ್ಲಿದೆ.












Click it and Unblock the Notifications