WTC Points Table: ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಗೆಲುವು; ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ ಅಪ್‌ಡೇಟ್
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಭಾರತ ಇದುವರೆಗೂ ಆಡಿರುವ 577 ಟೆಸ್ಟ್ ಇತಿಹಾಸದಲ್ಲಿ ಇದು ಅತಿ ದೊಡ್ಡ ರನ್‌ಗಳ ಅಂತರದ ಗೆಲುವಾಗಿದೆ. ರಾಜ್‌ಕೋಟ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ 434 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ.
ಈ ಗೆಲುವಿನ ಮೂಲಕ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿದೆ. ಮಾತ್ರವಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಭಾರತ ಎರಡನೇ ಸ್ಥಾನಕ್ಕೇರಿದೆ. ಮೂರನೇ ಸ್ಥಾನದಲ್ಲಿದ್ದ ಭಾರತ ಈಗ ಎರಡನೇ ಸ್ಥಾನಕ್ಕೇರಿದ್ದು, ಆಸ್ಟ್ರೇಲಿಯಾ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.

ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿ
ನ್ಯೂಜಿಲೆಂಡ್ ನಾಲ್ಕು ಟೆಸ್ಟ್‌ಗಳ ನಂತರ 75% ಅಂಕಗಳೊಂದಿಗೆ (PCT) ಅಗ್ರಸ್ಥಾನದಲ್ಲಿದೆ. ಭಾರತವು 59.52% ರೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 55% ನೊಂದಿಗೆ ಮೂರನೇ ಸ್ಥಾನದಲ್ಲಿದೆ.
ನ್ಯೂಜಿಲೆಂಡ್ ಇದುವರೆಗೂ ಆಡಿರುವ 4 ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಒಂದು ಪಂದ್ಯವನ್ನು ಮಾತ್ರ ಸೋತಿದೆ. ಭಾರತ ಈವರೆಗೂ 7 ಪಂದ್ಯಗಳನ್ನು ಆಡಿದ್ದು, 4 ಪಂದ್ಯಗಳಲ್ಲಿ ಗೆದ್ದರೆ, 2 ಪಂದ್ಯ ಸೋತು, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.
ಆಸ್ಟ್ರೇಲಿಯಾ 10 ಪಂದ್ಯಗಳನ್ನಾಡಿದ್ದು 6 ಪಂದ್ಯಗಳಲ್ಲಿ ಗೆದ್ದರೆ 3 ಪಂದ್ಯಗಳನ್ನು ಸೋತಿದೆ ಒಂದು ಪಂದ್ಯವನ್ನು ಮಾತ್ರ ಡ್ರಾ ಮಾಡಿಕೊಂಡಿದೆ. ಇಂಗ್ಲೆಂಡ್ ತಂಡ ಸದ್ಯ ಈ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಮಾತ್ರ ಗೆದ್ದಿರುವ ಅದು, 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.
ಸರಣಿಯ ನಾಲ್ಕನೇ ಪಂದ್ಯ ಫೆಬ್ರವರಿ 23ರಂದು ಆರಂಭವಾಗಲಿದೆ. ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿಯನ್ನು ಗೆಲ್ಲುವ ಜೊತೆ, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ.












Click it and Unblock the Notifications