WPL 2024: 'ಶ್ರೇಯಾಂಕಿತೆ' ಆಟಗಾರ್ತಿಗೆ ಪ್ರಪೋಸ್ ಮಾಡಿದ ಉತ್ತರ ಕರ್ನಾಟಕದ ಹೈದ
ಬೆಂಗಳೂರು, ಫೆಬ್ರವರಿ.28: ದೇಶದಲ್ಲಿ ಕ್ರಿಕೆಟ್ ಕ್ರೇಜ್ ಹೇಗಿದೆ ಎಂಬುದು ಗೊತ್ತೆ ಇದೆ. ಕ್ರಿಕೆಟ್ ಪ್ರೇಮಿಗಳ ಹಬ್ಬ ಐಪಿಎಲ್ ಇನ್ನೇನು ಮಾರ್ಚ್ 22ಕ್ಕೆ ಆರಂಭವಾಗಲಿದೆ. ಮಹಿಳಾ ಕ್ರಿಕೆಟ್‌ಗೂ ಕ್ರೇಜ್ ಸೃಷ್ಟಿಯಾಗಿದ್ದು, ಅದಕ್ಕೂ ತಮ್ಮದೇ ಆದ ಅಭಿಮಾನಿ ಬಳಗವಿದೆ. ಸದ್ಯ ಮಹಿಳಾ ಪ್ರೀಮಿಯರ್ ಲೀಗ್ ನಡೆಯುತ್ತಿದ್ದು, ಹಲವು ವಿಶೇಷ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ.
ಹೌದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ 2024 ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕ್ರಿಕೆಟ್ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರಿಗೆ ಮಂಗಳವಾರ ಅಭಿಮಾನಿಯೊಬ್ಬರು ಫೀಲ್ಡ್‌ನಲ್ಲಿಯೇ ಮದುವೆ ಪ್ರಪೋಸಲ್ ಇಟ್ಟಿದ್ದಾರೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿತ್ತು.

ಶ್ರೇಯಾಂಕಾ ಪಾಟೀಲ್ ನನ್ನ ಮದುವೆಯಾಗುತ್ತೀರಾ?
ಕ್ರೀಡಾಪಟುಗಳು ತಮ್ಮ ಸಂಗಾತಿಯೊಂದಿಗೆ ಫೀಲ್ಡ್‌ನಲ್ಲಿಯೇ ಪ್ರೇಮ ನಿವೇದನೆ ಮಾಡಿಕೊಳ್ಳುವ ಹಲವು ಘಟನೆಗಳನ್ನು ನೋಡಿದ್ದೇವೆ. ಈಗ ಅಭಿಮಾನಿಗಳು ಕೂಡ ತಮ್ಮ ಪ್ರೇಮ ನಿವೇದನೆ ಮಾಡಿಕೊಳ್ಳಲು ತೊಡಗಿದ್ದಾರೆ. ಇದೇ ರೀತಿಯ ಘಟನೆಯಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರಿಗೆ ಅಭಿಮಾನಿ ಎಲ್ಲರ ಮುಂದೆ ಪ್ಲೇಕಾರ್ಡ್ ಹಿಡಿದು ಪ್ರಪೋಸ್ ಮಾಡಿದ್ದಾರೆ.
ಆರ್‌ಸಿಬಿ ಇನಿಂಗ್ಸ್‌ನ ಏಳನೇ ಓವರ್‌ನಲ್ಲಿ " ನನ್ನನ್ನು ಮದುವೆಯಾಗುತ್ತೀರಾ ಶ್ರೇಯಾಂಕಾ ಪಾಟೀಲ್... ಫ್ರಂ ಉತ್ತರ ಕರ್ನಾಟಕ..." ಎಂದು ಬರೆದಿದ್ದ ಪ್ಲೇಕಾರ್ಡ್ ಹಿಡಿದು ನಿಂತ ಅಭಿಮಾನಿ ಜೋರಾಗಿ ಕೂಗಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗಿದೆ. ಈ ವಿಡಿಯೋ ನೋಡಿ ಆರ್‌ಸಿಬಿ ಆಟಗಾರರು ಕೂಡ ನಗು ಹರಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯವನ್ನು ಆರ್‌ಸಿಬಿ ಎಂಟು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಸ್ಮೃತಿ ಮಂಧಾನ ಮತ್ತು ಸಬ್ಬಿನೇನಿ ಮೇಘನಾ ಅವರ ಆಕರ್ಷಕ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುಜರಾತ್ ಜೈಂಟ್ಸ್ ವಿರುದ್ಧ ಎಂಟು ವಿಕೆಟ್‌ಗಳ ಆರಾಮದಾಯಕ ಜಯ ಸಾಧಿಸಿತು.

108 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿಗೆ ಸ್ಮೃತಿ ಮಂಧಾನ ಮತ್ತು ಸೋಫಿ ಡಿವೈನ್ ಜೋಡಿಯು 32 ರನ್‌ಗಳ ಜೊತೆಯಾಟ ನೀಡಿತ್ತು. ಸ್ಮೃತಿ ಮಂಧಾನ 27 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿ, 159.26 ಸ್ಟ್ರೈಕ್ ರೇಟ್‌ನೊಂದಿಗೆ 43 ರನ್ ಗಳಿಸಿದರು. ಬಳಿಕ ಒಂಬತ್ತನೇ ಓವರ್‌ನಲ್ಲಿ ತನುಜಾ ಕನ್ವರ್ ಅವರಿಗೆ ವಿಕೆಟ್ ಒಪ್ಪಿಸಿದರು. ಆರ್‌ಸಿಬಿ T20 ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ.












Click it and Unblock the Notifications