WPL 2025 Final: ಮುಂಬೈಗೆ ಡೆಲ್ಲಿ ಸವಾಲು; ಮೊದಲ ಪ್ರಶಸ್ತಿ ಗೆಲ್ಲುತ್ತಾ ಡೆಲ್ಲಿ ಕ್ಯಾಪಿಟಲ್ಸ್
ಮಹಿಳಾ ಪ್ರೀಮಿಯರ್ ಲೀಗ್ 2025ರ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದಿದೆ. ಮೊದಲ ಆವೃತ್ತಿಯಲ್ಲಿ ಫೈನಲ್ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮೂರನೇ ಆವೃತ್ತಿಯಲ್ಲೂ ಫೈನಲ್‌ನಲ್ಲಿ ಸೆಣೆಸಲು ಸಜ್ಜಾಗಿವೆ. ಉದ್ಘಾಟನಾ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧ ಗೆದ್ದಿದ್ದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು. ಎರಡನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು, ಆದರೆ ಆರ್ ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಕಪ್ ಗೆದ್ದುಕೊಂಡಿತ್ತು.
ಇದೀಗ ಸತತ ಮೂರನೇ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಬಾರಿಯಾದರೂ ಪ್ರಶಸ್ತಿ ಗೆಲ್ಲಲೇಬೇಕು ಎಂದು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧಾರ ಮಾಡಿದೆ. ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಬಲಿಷ್ಠ ತಂಡ, ಸತತವಾಗಿ ಮೂರು ಆವೃತ್ತಿಯಲ್ಲಿ ನೇರವಾಗಿ ಫೈನಲ್ ಪ್ರವೇಶಿಸಿರುವುದು ಇದಕ್ಕೆ ಸಾಕ್ಷಿ.

ಒತ್ತಡ ನಿಭಾಯಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್
ಎರಡೂ ಆವೃತ್ತಿಯಲ್ಲಿ ಫೈನಲ್ ತಲುಪಿದ್ದರೂ ಒತ್ತಡ ನಿಭಾಯಿಸುವಲ್ಲಿ ಎಡವಿದ್ದೇ ತಂಡದ ಸೋಲಿಗೆ ಕಾರಣವಾಗಿದೆ. ತಂಡದಲ್ಲಿ ಸ್ಟಾರ್ ಬ್ಯಾಟರ್ ಗಳಿದ್ದರೂ, ಮುಖ್ಯವಾದ ಪಂದ್ಯದಲ್ಲೇ ಕೈಕೊಟ್ಟಿದ್ದು ದುಬಾರಿಯಾಗಿತ್ತು. ಈ ಬಾರಿ ಎಲ್ಲಾ ತಪ್ಪು ತಿದ್ದಿಕೊಂಡು ಮೊದಲ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ ಮೆಗ್ ಲ್ಯಾನಿಂಗ್ ಪಡೆ.
ಮುಂಬೈನ ಬ್ರಬೌರ್ನ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ಫೈನಲ್ ಪಂದ್ಯಕ್ಕೆ ಮುನ್ನ ಬಾಲಿವುಡ್ ತಾರೆಗಳಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ.
ಫೈನಲ್ ಪಂದ್ಯದಲ್ಲಿ ಎರಡೂ ತಂಡಗಳು ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಇದೆ. ಮುಂಬೈ ಇಂಡಿಯನ್ಸ್ ತವರಿನಲ್ಲಿ ಫೈನಲ್ ಪಂದ್ಯ ಆಡುತ್ತಿದ್ದು ಹೆಚ್ಚಿನ ಅಭಿಮಾನಿಗಳ ಬೆಂಬಲ ಪಡೆಯಲಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಅಮೆಲಿಯಾ ಕೆರ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮನ್‌ಜೋತ್ ಕೌರ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸಜೀವನ್ ಸಜಾನಾ, ಜಿ ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಮ್ ಇಸ್ಮಾಯಿಲ್, ಸೈಕಾ ಇಶಾಕ್.
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಸ್ ಜೊನಾಸ್ಸೆನ್, ಜೆಮಿಮಾ ರಾಡ್ರಿಗಸ್, ಅನ್ನಾಬೆಲ್ ಸದರ್ಲ್ಯಾಂಡ್, ಮರಿಜಾನ್ ಕಪ್, ಸಾರಾ ಬ್ರೈಸ್ (ವಿಕೆಟ್ ಕೀಪರ್), ನಿಕಿ ಪ್ರಸಾದ್, ಮಿನ್ನು ಮಣಿ, ಶಿಖಾ ಪಾಂಡೆ, ಎನ್ ಚರಣಿ.












Click it and Unblock the Notifications