WPL 2026: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11
WPL 2026 RCB: ಆರ್‌ಸಿಬಿ ಗೆಲವಿನ ಓಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ರೇಕ್ ಹಾಕಿತ್ತು. ಈ ಮೂಲಕ ಬೆಂಗಳೂರು ತಂಡ ಆಡಿದ ಆರರಲ್ಲಿ ಐದು ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಇನ್ನೂ ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಫೈನಲ್‌ಗೇರಲು ಭಾರೀ ಸಿದ್ಧತೆ ನಡೆಸಿದೆ. ಹಾಗಾದ್ರೆ ಪ್ಲೇಯಿಂಗ್ 11 ಹೇಗಿರಲಿದೆ ಹಾಗೂ ಸಮಯ, ಸ್ಥಳದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಡೋದರಾದ ಕೋಟಂಬಿಯ ಬಿಸಿಎ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಮೂಲಕ ಇಂದಿನ ಪಂದ್ಯದಲ್ಲಿ ಗೆದ್ದು ಫೈನಲ್‌ಗೇರಲು ಭರ್ಜರಿ ಸಿದ್ಧತೆ ನಡೆಸಿದೆ. ಹಾಗಾದ್ರೆ, ಬೆಂಗಳೂರು ತಂಡದ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಸತತ 5 ಪಂದ್ಯಗಳಲ್ಲಿ ಗೆಲುವು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರನೇ ಪಂದ್ಯದಲ್ಲಿ ಸೋಲಿಸುವಲ್ಲಿ ಯಶಸ್ವಿಯಾಯಿತು. ಈ ಸೋಲಿನೊಂದಿಗೆ ಆರ್‌ಸಿಬಿ ತಂಡದ ಫೈನಲ್ ಲೆಕ್ಕಾಚಾರ ಸಹ ಬದಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದ್ದರೆ, ನೇರವಾಗಿ ಫೈನಲ್ ಪ್ರವೇಶಿಸಬಹುದಿತ್ತು. ಆದರೆ, ಇದೀಗ ಬೆಂಗಳೂರು ತಂಡಕ್ಕೆ ಮುಂದಿನ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಅನಿವಾರ್ಯವಾಗಿದೆ.
ಇಂದು ಮುಂಬೈ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದರೆ, ನೇರವಾಗಿ ಫೈನಲ್ ಪ್ರವೇಶ ಮಾಡಲಿದೆ. ಟೂರ್ನಿ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್‌ಗೆ ಪ್ರವೇಶಿಸುತ್ತದೆ. 2 ಹಾಗೂ 3ನೇ ಸ್ಥಾನಗಳನ್ನು ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಬೇಕಿದೆ.
ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಅಂಕಗಳೊಂದಿಗೆ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಸದ್ಯ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವ ಆರ್‌ಸಿಬಿ ಮುಂದಿನ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದರೆ, ಫೈನಲ್‌ಗೆ ಪ್ರವೇಶಿಸಲಿದೆ. ಒಂದು ವೇಳೆ ಇಂದೇ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೇ ನೇರವಾಗಿ ಫೈನಲ್ ಆಡಲು ಅರ್ಹತೆ ಪಡೆಯಲಿದೆ.
ಯಾಕಂದ್ರೆ, ಆರ್‌ಸಿಬಿ ತಂಡವನ್ನು ಹೊರತುಪಡಿಸಿ ಬೇರೆ ಯಾವುದೇ ತಂಡಕ್ಕೆ 12 ಅಂಕಗಳನ್ನು ಪಡೆಯಲು ಅವಕಾಶ ಇಲ್ಲ. ಉಳಿದ ನಾಲ್ಕು ತಂಡಗಳು ಮುಂದಿನ ಎಲ್ಲಾ ಪಂದ್ಯಗಳಲ್ಲೂ ಗೆದ್ದರೂ ಸಹ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಬಹುದು. ಜನವರಿ 26ರ ಸೋಮವಾರ ಮುಂಬೈ ಇಂಡಿಯನ್ಸ್ ಹಾಗೂ ಜನವರಿ 29ರಂದು ಯುಪಿ ವಾರಿಯರ್ಸ್ ಆಡಬೇಕಿದೆ. ಫೈನಲ್‌ಗೆ ಲಗ್ಗೆ ಇಡಬೇಕೆಂದರೆ ಇವೆರಡರಲ್ಲಿ ಒಂದು ಪಂದ್ಯದಲ್ಲಾದರೂ ಗೆಲ್ಲಲ್ಲೇಬೇಕಿದೆ.
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಗ್ರೇಸ್ ಗ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಗೌತಮಿ ನಾಯಕ್, ರಿಚಾ ಘೋಷ್ (ವಿಕೆಟ್ ಕೀಪರ್), ನಾಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಸಯಾಲಿ ಸತ್ಘರೆ, ಲಾರೆನ್ ಬೆಲ್.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ಹೇಲಿ ಮ್ಯಾಥ್ಯೂಸ್/ಅಮೆಲಿಯಾ ಕೆರ್, ಸಜೀವನ್ ಸಜನಾ, ನ್ಯಾಟ್ ಸ್ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಾಹಿಲಾ ಫಿರ್ದೌಸ್ (ವಿಕೆಟ್ ಕೀಪರ್), ನಿಕೋಲಾ ಕ್ಯಾರಿ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಪೂನಂ ಖೆಮ್ನಾರ್, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್.
ಪಂದ್ಯದ ಸ್ಥಳ, ಸಮಯ, ನೇರಪ್ರಸಾರದ ವಿವರ
* ಪಂದ್ಯದ ಸ್ಥಳ: ವಡೋದರಾದ ಕೋಟಂಬಿಯಲ್ಲಿರುವ ಬರೋಡಾ ಕ್ರಿಕೆಟ್ ಕ್ರೀಡಾಂಗಣ
* ಸಮಯ : ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30 ಗಂಟೆ
* ನೇರಪ್ರಸಾರ: ಭಾರತದಲ್ಲಿ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಹಾಗೂ JioHotstar ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.












Click it and Unblock the Notifications