WPL 2026: ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11: ಇಲ್ಲಿದೆ ನೋಡಿ ಸಂಪೂರ್ಣ ವಿವರ
WPL 2026: ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ. ಹಾಗಾದ್ರೆ, ಎರಡು ತಂಡಗಳ ಪ್ಲೇಯಿಂಗ್ 11, ಪಂದ್ಯದ ಸಮಯ, ಸ್ಥಳದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಡಬ್ಲ್ಯೂಪಿಎಲ್ ನಾಲ್ಕನೇ ಸೀಸನ್ ಇದೀಗ ನಿರ್ಣಾಯಕ ಹಂತ ತಲುಪಿದೆ. ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಳ್ಳುವ ಹೊತ್ತಿಗೆ ಅಂಕಪಟ್ಟಿಯ ಮೊದಲ ಮೂರು ಸ್ಥಾನಗಳಲ್ಲಿ ಸ್ಥಾನ ಪಡೆಯುವ ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆಯಲಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ನೇರವಾಗಿ ಫೈನಲ್ ಪ್ರವೇಶಿಸುವ ಅವಕಾಶ ಪಡೆಯುತ್ತದೆ. ಎರಡು ಹಾಗೂ ಮೂರನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅತ್ಯುತ್ತಮ ಪ್ರದರ್ಶದ ಮೂಲಕ ಸತತ ಐದು ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಆದರೆ, ಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಲು ಬೇಕಾದ ಮಹತ್ವದ ಹಂತದಲ್ಲಿ ತಂಡ ಸತತವಾಗಿ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಆರ್‌ಸಿಬಿ ತಂಡದ ಗೆಲುವಿನ ಓಟಕ್ಕೆ ಮೊದಲು ಬ್ರೇಕ್ ಹಾಕಿದ್ದು ಡೆಲ್ಲಿ ಕ್ಯಾಪಿಟಲ್ಸ್, ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತು. ಇದೀಗ ಫೈನಲ್ ಪ್ರವೇಶಕ್ಕೆ ಇರುವುದು ಒಂದೇ ಅವಕಾಶ. ಅದು ಯುಪಿ ವಾರಿಯರ್ಸ್ ವಿರುದ್ಧ ಗೆದ್ದರೆ ಮಾತ್ರ.
ಆರ್‌ಸಿಬಿಗೆ ಇನ್ನೂ ನೇರ ಫೈನಲ್ ಪ್ರವೇಶಿಸುವ ಅವಕಾಶ ಉಳಿದಿದೆ. ಜನವರಿ 29ರ ಗುರುವಾರ ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಬೆಂಗಳೂರು ತಂಡ 12 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಈ ಮೂಲಕ ಯಾವುದೇ ಲೆಕ್ಕಾಚಾರಗಳಿಲ್ಲದೆ ಫೈನಲ್ ಪ್ರವೇಶಿಸಬಹುದು.
ಒಂದು ವೇಳೆ ಈ ಪಂದ್ಯದಲ್ಲಿ ಸೋಲು ಕಂಡರೂ ಆರ್‌ಸಿಬಿಗೆ ಒಂದು ಭಯಪಡುವ ಅಗತ್ಯವಿಲ್ಲ. ಯಾಕಂದ್ರೆ, ತಂಡದ ನೆಟ್ ರನ್ ರೇಟ್ +0.947 ಆಗಿದ್ದು, ಇತರ ಯಾವುದೇ ತಂಡಕ್ಕಿಂತ ಉತ್ತಮವಾಗಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ತಂಡದ ನೆಟ್ ರನ್ ರೇಟ್ -0.271 ಆಗಿದೆ.
ಒಂದು ವೇಳೆ ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿ ಭಾರೀ ಅಂತರದಿಂದ ಸೋತು, ಜೊತೆಗೆ ಗುಜರಾತ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಭಾರೀ ಗೆಲುವು ಸಾಧಿಸಿದರೆ ಮಾತ್ರ ಅಗ್ರಸ್ಥಾನ ಬದಲಾವಣೆಯ ಸಾಧ್ಯತೆ ಇದೆ. ಆದರೆ ಬಲಿಷ್ಠ ಮುಂಬೈ ವಿರುದ್ಧ ಅಂತಹ ಗೆಲ್ಲುವುದು ಕಷ್ಟಸಾಧ್ಯವಾಗಿರುವುದರಿಂದ, ಸೋಲಿನಲ್ಲಿಯೂ ಆರ್‌ಸಿಬಿ ಫೈನಲ್ ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆರ್‌ಸಿಬಿ ಪ್ಲೇಯಿಂಗ್ 11: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯಕ್, ರಾಧಾ ಯಾದವ್, ನಾಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ, ಲಾರೆನ್ ಬೆಲ್.
ಆರ್‌ಸಿಬಿ - ಯುಪಿ ಮುಖಾಮುಖಿ ದಾಖಲೆ
* ಒಟ್ಟು ಪಂದ್ಯಗಳು: 7
* ಆರ್‌ಸಿಬಿ ಜಯ: 4
* ಯುಪಿ ವಾರಿಯರ್ಸ್ ಜಯ: 2
* ಟೈ: 1
ಪಂದ್ಯದ ಸ್ಥಳ, ಸಮಯ, ನೇರಪ್ರಸಾರದ ವಿವರ
* ಸ್ಥಳ: ವಡೋದರಾ
* ಸಮಯ: 7:30
* ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಜಿಯೋ ಹಾಟ್‌ಸ್ಟಾರ್ ವೆಬ್‌ಸೈಟ್, ಆಪ್‌ನಲ್ಲಿ ಲಭ್ಯವಿರುತ್ತದೆ.
ಒಟ್ಟಿನಲ್ಲಿ ಇಂದಿನ ಪಂದ್ಯ ಯುಪಿ ವಾರಿಯರ್ಸ್ ಹಾಗೂ ಆರ್‌ಸಿಬಿ ಎರಡೂ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಯುಪಿ ವಾರಿಯರ್ಸ್ ಪಾಲಿಗೆ ಈ ಪಂದ್ಯ ಗೆಲುವು ಸೀಸನ್ ಉಳಿಸಿಕೊಳ್ಳುವ ಕೊನೆಯ ಅವಕಾಶ ಆಗಿದೆ. ಮತ್ತೊಂದೆಡೆ ರಾಯಲ್ ಚಾಲೆಂಜರ್ಡ್ ಬೆಂಗಳೂರು ತಂಡ ಅಗ್ರಸ್ಥಾನ ಕಾಯ್ದುಕೊಳ್ಳಲು ಹಾಗೂ ನೇರ ಫೈನಲ್ ಪ್ರವೇಶಕ್ಕೆ ಪ್ರಮುಖವಾಗಿದೆ ಎಂದು ಹೇಳಬಹುದು.












Click it and Unblock the Notifications