Get Updates
Get notified of breaking news, exclusive insights, and must-see stories!

WTC 2023-2025: ಮುಂದಿನ ಫೈನಲ್ ಪಂದ್ಯ ಕೂಡ ಇಂಗ್ಲೆಂಡ್‌ನಲ್ಲಿ: ಭಾರತದ ಹಾದಿ ಕಠಿಣ: ವೇಳಾಪಟ್ಟಿ ಇಲ್ಲಿದೆ

ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪಿ ನಿರಾಸೆ ಅನುಭವಿಸಿರುವ ಭಾರತ ತಂಡ, ಮುಂದಿನ ಬಾರಿಯ ಟೆಸ್ಟ್ ಚಾಂಪಿಯನ್‌ಶಿಪ್ ಪಯಣವನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಮೂಲಕ ಆರಂಭಿಸಲಿದೆ.

2023-2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದ್ದು, ಭಾರತ ಎರಡು ವರ್ಷಗಳಲ್ಲಿ ಒಟ್ಟು ಆರು ಸರಣಿಗಳನ್ನು ಆಡಲಿದೆ. ಇದರಲ್ಲಿ ಮೂರು ಸರಣಿಗಳು ತವರಿನಲ್ಲಿ ನಡೆದರೆ ಉಳಿದ ಮೂರು ಸರಣಿಗಳು ಹೊರಗೆ ನಡೆಯಲಿವೆ, 6 ಸರಣಿಗಳಿಂದ ಒಟ್ಟು 19 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಬಲಿಷ್ಠ ತಂಡಗಳ ವಿರುದ್ಧ ಸೆಣೆಸಿ ಗೆದ್ದರೆ ಮಾತ್ರ ಮುಂದಿನ ಬಾರಿ ಫೈನಲ್ ತಲುಪಬಹುದಾಗಿದೆ.

WTC 2023-2025 Cycle : Lords Will Host Final: Team India Test Shedule

2023ರ ಜುಲೈ-ಆಗಸ್ಟ್ ತಿಂಗಳಿನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಮೂಲಕ ತನ್ನ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ 2025ರ ಅಭಿಯಾನ ಆರಂಭಿಸಲಿದೆ. ಭಾರತ ವೆಸ್ಟ್ ಇಂಡೀಸ್‌ಗೆ ಪ್ರಯಾಣ ಮಾಡಲಿದ್ದು, ಎರಡು ಟೆಸ್ಟ್, 5 ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.

ಏಕದಿನ ವಿಶ್ವಕಪ್ ಮುಕ್ತಾಯದ ನಂತರ ಭಾರತ ತಂಡ 2023ರ ಡಿಸೆಂಬರ್, 2024 ಜನವರಿಯಲ್ಲಿ ದಕ್ಷಿಣ ಆಫ್ರಿಕಾಗೆ ಪ್ರಯಾಣ ಮಾಡಲಿದ್ದು, 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. 2024 ಜನವರಿ, ಫೆಬ್ರವರಿ ತಿಂಗಳಿನಲ್ಲಿ ಇಂಗ್ಲೆಂಡ್‌ ಭಾರತಕ್ಕೆ ಪ್ರಯಾಣ ಮಾಡಲಿದ್ದು 5 ಪಂದ್ಯಗಳ ಸರಣಿಯನ್ನು ಆಡಲಿದೆ.

2024ರ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಬಾಂಗ್ಲಾದೇಶ ಭಾರತಕ್ಕೆ ಪ್ರಯಾಣ ಮಾಡಲಿದ್ದು, 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. 2024 ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿ ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಆಸ್ಟ್ರೇಲಿಯಾದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿ

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ 2024ರ ನವೆಂಬರ್-2025ರ ಜನವರಿವರೆಗೆ ನಡೆಯಲಿದೆ. ಈ ಬಾರಿ ಆಸ್ಟ್ರೇಲಿಯಾದಲ್ಲಿ ಸರಣಿ ನಡೆಯಲಿದ್ದು, 2025 ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಸೈಕಲ್‌ನಲ್ಲಿ ಭಾರತ ಆಡುವ ಕೊನೆಯ ಟೆಸ್ಟ್ ಸರಣಿ ಇದಾಗಲಿದೆ.

ಭಾರತದ ಹಾದಿ ಕಠಿಣ ಯಾಕೆ?

2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮುನ್ನ ಭಾರತ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ರಲ್ಲಿ ಗೆದ್ದು ಫೈನಲ್‌ಗೆ ಅರ್ಹತೆ ಪಡೆದುಕೊಂಡಿತ್ತು. ತವರಿನ ಲಾಭ ಪಡೆದ ಭಾರತ ಆಸ್ಟ್ರೇಲಿಯಾವನ್ನು ಮಣಿಸುವಲ್ಲಿ ಯಶಸ್ವಿಯಾಗಿತ್ತು.

2023 ರಿಂದ 2025ರ ವರೆಗಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಭಿಯಾನದಲ್ಲಿ ಭಾರತ 19 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಇದರಲ್ಲಿ 10 ಟೆಸ್ಟ್ ಪಂದ್ಯಗಳನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಆಡಬೇಕಿದೆ. ಇಂಗ್ಲೆಂಡ್ ಭಾರತದಲ್ಲಿ ಟೆಸ್ಟ್ ಸರಣಿ ಆಡಿದರೂ, ಅದನ್ನು ಮಣಿಸುವುದು ಸುಲಭವಲ್ಲ, ಇನ್ನು ಆಸ್ಟ್ರೇಲಿಯಾದಲ್ಲಿ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಕೂಡ ಭಾರತಕ್ಕೆ ದೊಡ್ಡ ಸವಾಲಾಗಿದೆ. ಈ ಎರಡೂ ಸರಣಿಗಳು ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025ರ ಫೈನಲ್‌ ಹಾದಿಯನ್ನು ನಿರ್ಧರಿಸಲಿವೆ.

2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸೋತ ಬಳಿಕ ಬಿಸಿಸಿಐ ಅಸಮಾಧಾನಗೊಂಡಿದ್ದು, ತಂಡದಲ್ಲಿ ಮಹತ್ವದ ಬದಲಾವಣೆ ತರಲು ಚಿಂತಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಹಲವು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+