WTC Final 2023: ಬರೀ ಇದೇ ಆಯ್ತು! ಭಾರತ ತಂಡದ ಪ್ರದರ್ಶನ ನೋಡಿ ಅಭಿಮಾನಿಗಳು ಹೇಳಿದ್ದೇನು?

ಭಾರತ ತಂಡ ಐಸಿಸಿ ಟ್ರೋಫಿ ಬರ ಮುಂದುವರೆದಿದೆ, 2013ರ ಬಳಿಕ ಭಾರತ ಐಸಿಸಿ ಕಪ್ ಗೆದ್ದಿಲ್ಲ. ಸತತ ಎರಡನೇ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿದ್ದ ಭಾರತ ತಂಡ ಈ ಬಾರಿ ಕಪ್ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, ಆಸ್ಟ್ರೇಲಿಯಾ ತಂಡ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತವನ್ನು 209 ರನ್‌ಗಳ ಅಂತರದಲ್ಲಿ ಸೋಲಿಸುವ ಮೂಲಕ ಪ್ರತಿಷ್ಠಿತ ಪ್ರಶಸ್ತಿ ಗೆದ್ದುಕೊಂಡಿದೆ.

ಇನ್ನು ಕೊನೆಯ ದಿನದಲ್ಲಿ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಪಂದ್ಯವನ್ನು ಡ್ರಾ ಮಾಡುತ್ತಾರೆ ಅಥವಾ ಪಂದ್ಯ ಗೆಲ್ಲಿಸುತ್ತಾರೆ ಎಂದು ನಂಬಿಕೆ ಇಡಲಾಗಿತ್ತು, ಆದರೆ ವಿರಾಟ್ ಕೊಹ್ಲಿ 49 ರನ್ ಗಳಿಸಿ ಔಟಾಗುತ್ತಿದ್ದಂತೆ ಭಾರತ ತಂಡದ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು. ಅಂತಿಮವಾಗಿ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 234 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

WTC Final 2023

10 ವರ್ಷಗಳಿಂದ ಭಾರತ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗುತ್ತಿಲ್ಲ, ಸೆಮಿಫೈನಲ್ ಅಥವಾ ಫೈನಲ್ ಪಂದ್ಯಗಳಲ್ಲಿ ಸೋಲನುಭವಿಸುತ್ತಿದೆ. 2022ರ ಟಿ20 ವಿಶ್ವಕಪ್‌ನಲ್ಲಿ ಕೂಡ ಭಾರತ ಸೆಮಿಫೈನಲ್‌ನಲ್ಲಿ ಸೋಲು ಕಂಡಿತ್ತು, ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಕೂಡ ಸೋಲು ಕಂಡಿತ್ತು.

ನೆತ್ತಿಗೇರಿದ ಅಭಿಮಾನಿಗಳ ಕೋಪ!

ಇನ್ನು ಪ್ರಮುಖ ಪಂದ್ಯಗಳಲ್ಲೇ ಭಾರತ ತಂಡದ ಕೆಟ್ಟ ಪ್ರದರ್ಶನವನ್ನು ಕಂಡ ಅಭಿಮಾನಿಗಳು ಸಿಟ್ಟಾಗಿದ್ದಾರೆ. ತಂಡದ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಮುಖ ಪಂದ್ಯಗಳಲ್ಲೇ ಕೈಕೊಟ್ಟ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿರುದ್ಧ ಕೂಡ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ.

ಭಾರತ ತಂಡ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಡುತ್ತಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಮಾಜಿ ಕ್ರಿಕೆಟಿಗರು ಕೂಡ ಬೇಸರ ಹೊರಹಾಕಿದ್ದಾರೆ.

ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಮಾತನಾಡಿ, "ಐಸಿಸಿ ಟ್ರೋಫಿ ಗೆಲ್ಲುವುದು ಸುಲಭವಲ್ಲ, ಮಹೇಂದ್ರ ಸಿಂಗ್ ಧೋನಿ ಇದನ್ನು ಸುಲಭವಾಗಿಸಿದ್ದರು" ಎಂದು ಹೇಳುವ ಮೂಲಕ ಭಾರತ ತಂಡ ಧೋನಿಯನ್ನು ಮಿಸ್ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ ಭಾರತದ ಸೋಲಿಗೆ ಪ್ರತಿಕ್ರಿಯೆ ನೀಡಿ, "ಭಾರತದಲ್ಲಿ ತಂಡಕ್ಕಿಂತ ಹೆಚ್ಚಾಗಿ ಸ್ಟಾರ್ ಆಟಗಾರರಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಆದರೆ ನೀವು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡಗಳನ್ನು ನೋಡಿದರೆ, ಅಲ್ಲಿ ಸ್ಟಾರ್ ಆಟಗಾರರಿಗಿಂತ ತಂಡಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ" ಎಂದು ಹೇಳಿದ್ದಾರೆ.

ಇನ್ನೂ ಕೆಲವರು ಕೋಚ್ ರಾಹುಲ್ ದ್ರಾವಿಡ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತದ ತಂಡದ ಕೋಚ್‌ ಅನ್ನು ಬದಲಾವಣೆ ಮಾಡಬೇಕು ಎಂದು ಹೇಳಿದ್ದಾರೆ. ಇನ್ನು ಹಲವು ಬಳಕೆದಾರು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಪ್ರಮುಖ ಪಂದ್ಯಗಳಲ್ಲಿ ಸೋಲು ಕಂಡಿದೆ, ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+