India vs Australia WTC Final: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು: ಕಾರಣ ಇಲ್ಲಿದೆ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ. ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ನೆನಪಿಗಾಗಿ ಪಂದ್ಯ ಆರಂಭಕ್ಕೆ ಮುನ್ನ ಒಂದು ನಿಮಿಷ ಮೌನಾಚರಣೆ ಮಾಡಿದರು.
ಕಳೆದ ವಾರ ಒಡಿಶಾ ರೈಲು ಡಿಕ್ಕಿಯಲ್ಲಿ ಬಲಿಯಾದ ಜೀವಗಳಿಗೆ ಗೌರವ ಸಲ್ಲಿಸಲು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾ ಕಪ್ಪು ಪಟ್ಟಿ ಧರಿಸಿ ಆಡುತ್ತಿದ್ದಾರೆ.

"ಭಾರತ ತಂಡವು ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸುತ್ತದೆ ಮತ್ತು ದುರಂತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳು ಮತ್ತು ಸ್ನೇಹಿತರಿಗೆ ಸಂತಾಪ ಸೂಚಿಸುತ್ತದೆ" ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
A moment of silence for the memory of victims in the Odisha Train accident. pic.twitter.com/aliPgbKnSW
— Johns. (@CricCrazyJohns) June 7, 2023
ಪ್ರತಿಷ್ಠಿತ ಪ್ರಶಸ್ತಿಗಾಗಿ ಕದನ
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಹಣಾಹಣಿ ನಡೆಸುತ್ತಿವೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಈ ಟೆಸ್ಟ್ ಪಂದ್ಯ ನಡೆಯುತ್ತಿದೆ. 2013ರ ಬಳಿಕ ಐಸಿಸಿ ಟ್ರೋಫಿ ಗೆಲ್ಲದ ಭಾರತ ಪ್ರಶಸ್ತಿಯ ಬರವನ್ನು ನೀಗಿಸಿಕೊಳ್ಳುವ ಉತ್ಸಾಹದಲ್ಲಿದೆ. 2021ರ ವಿಶ್ವ ಟಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸೋಲನುಭವಿಸಿದ್ದ ಭಾರತ ಈ ಬಾರಿ ಗೆಲ್ಲುವ ಹಂಬಲದಲ್ಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಗಳಾಗಿ ಕಣಕ್ಕಿಳಿದಿರುವ ಆಸ್ಟ್ರೇಲಿಯಾ ಕೂಡ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿರುವ ಆಸ್ಟ್ರೇಲಿಯಾ ಭಾರತಕ್ಕೆ ಕಠಿಣ ಸವಾಲು ಹಾಕುವುದು ನಿಶ್ಚಿತವಾಗಿದೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪಿಚ್ ಹೇಗಿದೆ ಎನ್ನುವ ಮಾಹಿತಿ ಇಲ್ಲದೇ ಇರುವುದರಿಂದ ಮೊದಲು ಬೌಲಿಂಗ್ ಮಾಡುವುದಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಇನ್ನು ಭಾರತ ಆಡುವ ಬಳಗದಿಂದ ರವಿಚಂದ್ರನ್ ಅಶ್ವಿನ್ ಹೊರಗುಳಿದಿದ್ದು, ವೇಗಿ ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಶುಭಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್.












Click it and Unblock the Notifications