WTC Points Table: ಮತ್ತೆ ಅಗ್ರಸ್ಥಾನಕ್ಕೆ ಭಾರತ; ಫೈನಲ್ ತಲುಪಲು ಇನ್ನೆಷ್ಟು ಟೆಸ್ಟ್ ಗೆಲ್ಲಬೇಕು?

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 295 ರನ್‌ಗಳ ಬೃಹತ್ ಜಯ ಸಾಧಿಸಿದೆ. ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇದು ಎರಡನೇ ಅತಿ ದೊಡ್ಡ ಗೆಲುವಾಗಿದ್ದು ಟೀಂ ಇಂಡಿಯಾ ವಿಶ್ವಾಸವನ್ನು ಹೆಚ್ಚಿಸಿದ್ದು ಸರಣಿ ಗೆಲುವಿನ ಭರವಸೆ ಹೆಚ್ಚಿಸಿದೆ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದ ಭಾರತ ಇದೀಗ ಮತ್ತೆ ಅಗ್ರಸ್ಥಾನಕ್ಕೆ ಏರಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಆಡಲೇಬೇಕೆನ್ನುವ ಛಲದಿಂದ ಭಾರತ ಆಸ್ಟ್ರೇಲಿಯಾಗೆ ಕಾಲಿಟ್ಟಿದ್ದು, ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಗೆದ್ದರೆ ಮಾತ್ರ ಭಾರತ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಬಹುದು. ಆಸ್ಟ್ರೇಲಿಯಾ ಮತ್ತು ಭಾರತಕ್ಕೆ ಈ ಸರಣಿ ಅತ್ಯಂತ ಮಹತ್ವದ್ದು, ಎರಡೂ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಆಡಲು ಎದುರು ನೋಡುತ್ತಿವೆ. ಮೊದಲ ಟೆಸ್ಟ್‌ಗೆ ಮುನ್ನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಇದೀಗ ಎರಡನೇ ಸ್ಥಾನಕ್ಕೆ ಕುಸಿತ ಕಂಡಿದೆ.

WTC Points Table India Regains Top Spot After Winning 1st Test Against Australia

ಮತ್ತೆ ಮೊದಲ ಸ್ಥಾನಕ್ಕೆ ಭಾರತ

2023-2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಸೈಕಲ್‌ನಲ್ಲಿ ಈವರೆಗೂ 15 ಟೆಸ್ಟ್ ಪಂದ್ಯಗಳನ್ನಾಡಿರುವ ಭಾರತ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳಲ್ಲಿ ಸೋತಿದ್ದು, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದು, 61.110 ಪಿಸಿಟಿ (ಶೇಕಡವಾರು ಅಂಕ) ಯೊಂದಿಗೆ ಅಗ್ರ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ 13 ಪಂದ್ಯಗಳಲ್ಲಿ 8 ಪಂದ್ಯ ಗೆದ್ದಿದ್ದು, 4 ಪಂದ್ಯಗಳನ್ನು ಸೋತು, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದು, 57.690 ಪಿಸಿಟಿಯೊಂದಿಗೆ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ 55.560 ಪಿಸಿಟಿ ಹೊಂದಿದ್ದು, ನ್ಯೂಜಿಲೆಂಡ್ 54.550 ಪಿಸಿಟಿ ಮತ್ತು ದಕ್ಷಿಣ ಆಫ್ರಿಕಾ 54.170 ಪಿಸಿಟಿಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ರೇಸ್‌ನಲ್ಲಿವೆ.

ಭಾರತ ಎಷ್ಟು ಪಂದ್ಯ ಗೆಲ್ಲಬೇಕು?

ಭಾರತ ಯಾವ ತಂಡದ ಫಲಿತಾಂಶವನ್ನು ಅವಲಂಬಿಸದೆ ಫೈನಲ್ ತಲುಪಬೇಕಾದರೆ ಕನಿಷ್ಠ 4 ಪಂದ್ಯಗಳನ್ನು ಗೆದ್ದು 1 ಪಂದ್ಯವನ್ನು ಡ್ರಾ ಮಾಡಿಕೊಂಡರೆ ಸಾಕಾಗುತ್ತದೆ. ಇನ್ನೊಂದು ಪಂದ್ಯ ಗೆದ್ದರೂ ಭಾರತ ಫೈನಲ್‌ ರೇಸ್‌ನಲ್ಲಿ ಇರಲಿದ್ದು, ಉಳಿದ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ. ಆದ್ದರಿಂದಲೇ ಭಾರತ ಕನಿಷ್ಠ 3-4 ಪಂದ್ಯವನ್ನಾದರೂ ಗೆದ್ದರೆ ಫೈನಲ್ ಹಾದಿ ಸುಲಭವಾಗಲಿದೆ.

ಪರ್ತ್‌ ಟೆಸ್ಟ್‌ನಲ್ಲಿ ಭಾರಿ ಗೆಲುವು ಸಾಧಿಸಿರುವ ಭಾರತ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಡಿಸೆಂಬರ್ 6ರಂದು ಎರಡನೇ ಟೆಸ್ಟ್ ಆರಂಭವಾಗಲಿದ್ದು, ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+