WTC Points Table: ಐತಿಹಾಸಿಕ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಭಾರತ
ಗುರುವಾರ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಏಳು ವಿಕೆಟ್‌ಗಳ ಜಯದೊಂದಿಗೆ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಕ್ತಾಯಗೊಳಿಸಿದೆ. ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.
ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ 15 ವಿಕೆಟ್‌ಗಳನ್ನು ಪಡೆದು ಭಾರತದ ಗೆಲುವಿಗೆ ಕಾರಣವಾದರು. ಮೊದಲ ಇನ್ನಿಂಗ್ಸ್‌ನಲ್ಲಿ ಸಿರಾಜ್ 15 ರನ್ ನೀಡಿ 6 ವಿಕೆಟ್ ಪಡೆದರೆ, ಬುಮ್ರಾ ಎರಡು ವಿಕೆಟ್ ಪಡೆದರು. ಎರಡನೇ ಇನ್ನಿಂಗ್ಸ್‌ನಲ್ಲಿ, ಬುಮ್ರಾ 61 ರನ್‌ಗಳಿಗೆ 6 ವಿಕೆಟ್‌ಗಳನ್ನು ಪಡೆದರೆ ಮತ್ತು ಸಿರಾಜ್ ಒಂದು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 55 ರನ್ ಗಳಿಗೆ ಆಲೌಟ್ ಆದರೆ, ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 153 ರನ್‌ಗಳಿಗೆ ಆಲೌಟ್ ಆಗುವ ಮೂಲಕ 98 ರನ್‌ಗಳ ಮುನ್ನಡೆ ಪಡೆದುಕೊಂಡಿತು. ದಕ್ಷಿಣ ಆಫ್ರಿಕಾ ಎರಡನೇ ಇನ್ನಿಂಗ್ಸ್‌ನಲ್ಲಿ 176 ರನ್‌ಗಳಿಗೆ ಆಲೌಟ್ ಆಯಿತು. ಭಾರತ ಮೂರು ವಿಕೆಟ್ ಕಳೆದುಕೊಂಡು 80 ರನ್ ಗಳಿಸುವ ಮೂಲಕ 7 ವಿಕೆಟ್ ಗೆಲುವು ಸಾಧಿಸಿತು.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ
ಎರಡನೇ ಟೆಸ್ಟ್ ಗೆಲುವಿನ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) 2023-25 ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನಕ್ಕೇರಿತು, ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಿಂದ ಕುಸಿಯಿತು. ರೋಹಿತ್ ಶರ್ಮಾ ನೇತೃತ್ವದ ತಂಡವು ಈಗ 54.16 ಶೇಕಡಾ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ಶೇಕಡಾ 50 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ ಐದನೇ ಸ್ಥಾನ ಕಳೆದುಕೊಂಡು ಶೇ.45.83 ಅಂಕಗಳೊಂದಿಗೆ ಆರನೇ ಸ್ಥಾನಕ್ಕೆ ಕುಸಿದಿದೆ.
ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 32 ರನ್‌ಗಳಿಂದ ಸೋತ ನಂತರ ಭಾರತ ಎರಡನೇ ಟೆಸ್ಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಾಪಸಾತಿ ಮಾಡಿತು.
ಎರಡನೇ ಟೆಸ್ಟ್ ಪಂದ್ಯ 106.2 ಓವರ್‌ಗಳಿಗೆ ಮುಕ್ತಾಯವಾಗಿದ್ದು ಹೊಸ ದಾಖಲೆ ಬರೆಯಿತು. 1932 ರಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ 656 ಎಸೆತಗಳಲ್ಲಿ ಮುಕ್ತಾಯವಾಗಿದ್ದು ಈವರೆಗಿನ ದಾಖಲೆಯಾಗಿತ್ತು, ಆದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯ 642 ಎಸೆತಗಳಲ್ಲೇ ಮುಕ್ತಾಯವಾಗಿದೆ.
ನ್ಯೂಲ್ಯಾಂಡ್ಸ್ ಪಿಚ್‌ನಲ್ಲಿ ಅಸ್ಥಿರ ಬೌನ್ಸ್ ಇದ್ದ ಕಾರಣ ಮೊದಲ ದಿನವೇ 23 ವಿಕೆಟ್‌ಗಳು ಬಿದ್ದವು. ನ್ಯೂಲ್ಯಾಂಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಮೊದಲ ಏಷ್ಯನ್ ತಂಡ ಎನ್ನುವ ಕೀರ್ತಿ ಭಾರತದ್ದಾಗಿದೆ. ಈ ಅಂಗಳದಲ್ಲಿ ಭಾರತ ಇದೇ ಮೊದಲ ಬಾರಿಗೆ ಗೆಲುವು ಸಾಧಿಸಿದೆ.












Click it and Unblock the Notifications