WTC Points Table: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ; ಮುಂದುವರೆದ ಭಾರತದ ಪ್ರಾಬಲ್ಯ

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿದೆ. 10 ವರ್ಷಗಳ ಬಳಿಕ ಶ್ರೀಲಂಕಾ ಇಂಗ್ಲೆಂಡ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಪಂದ್ಯವೊಂದನ್ನು ಗೆದ್ದು ಬೀಗಿದೆ. ಆದರೆ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದ ಇಂಗ್ಲೆಂಡ್ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಇಂಗ್ಲೆಂಡ್ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ ಬದಲಾವಣೆಯಾಗಿದೆ.

ಶ್ರೀಲಂಕಾ ಮೂರು ಪಂದ್ಯಗಳ ಸರಣಿಯಲ್ಲಿ ಸೋಲು ಕಂಡರು, ಕೊನೆಯ ಪಂದ್ಯದಲ್ಲಿ ಗೆದ್ದ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಪಾಯಿಂಟ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಬಂದಿದ್ದಾರೆ. ಕೊನೆಯ ಪಂದ್ಯ ಸೋತ ಬಳಿಕ ಇಂಗ್ಲೆಂಡ್ ಆರನೇ ಸ್ಥಾನಕ್ಕೆ ಕುಸಿದಿದೆ. ಶ್ರೀಲಂಕಾ ವಿರುದ್ಧದ ಪಂದ್ಯ ಸೋತ ಬಳಿಕ ನಂತರ ಅವರ ಪಿಸಿಟಿ 42.18 ಕ್ಕೆ ಇಳಿಕೆಯಾಗಿದೆ.

WTC Points Table Update England vs Sri Lanka Test Series Outcome

ಶ್ರೀಲಂಕಾ 10 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ತಮ್ಮ ಮೊದಲ ಟೆಸ್ಟ್ ಗೆಲುವು ಸಾಧಿಸಿದೆ. ಓವಲ್‌ನಲ್ಲಿ ಪಾಥುಮ್ ನಿಸ್ಸಾಂಕಾ ಅವರ ಭರ್ಜರಿ ಶತಕದ ನೆರವಿನಿಂದ 219 ರನ್‌ಗಳನ್ನು ಯಶಸ್ವಿಯಾಗಿ ಬೆನ್ನಟ್ಟಿತು.

ಮೊದಲ ಸ್ಥಾನದಲ್ಲಿ ಭಾರತ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರತ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ವಿಶ್ವಚಾಂಪಿಯನ್‌ ಶಿಪ್ 2023-25ರ ಆವೃತ್ತಿಯಲ್ಲಿ ಈವರೆಗೂ 9 ಪಂದ್ಯಗಳನ್ನು ಆಡಿರುವ ಭಾರತ 6 ಪಂದ್ಯಗಳನ್ನು ಗೆದ್ದು, 2 ರಲ್ಲಿ ಸೋತಿದ್ದು, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. 68.52 ಪಿಸಿಟಿಯೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

12 ಪಂದ್ಯಗಳಲ್ಲಿ 8 ಪಂದ್ಯ ಗೆದ್ದು 3 ಪಂದ್ಯ ಸೋತು ಒಂದು ಟೆಸ್ಟ್ ಡ್ರಾ ಮಾಡಿಕೊಂಡಿರುವ ಆಸ್ಟ್ರೇಲಿಯಾ 62.5 ಪಿಸಿಟಿಯೊಂದಿಗೆ ಸದ್ಯ ಎರಡನೇ ಸ್ಥಾನದಲ್ಲಿದೆ. 50 ಪಿಸಿಟಿ ಹೊಂದಿರುವ ನ್ಯೂಜಿಲೆಂಡ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕ್ರಮವಾಗಿ 4 ರಿಂದ 9ನೇ ಸ್ಥಾನದಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಪಾಕಿಸ್ತಾನ, ವೆಸ್ಟ್ ಇಂಡೀಸ್ ತಂಡಗಳು ಸ್ಥಾನ ಪಡೆದಿವೆ.

ಸೆಪ್ಟೆಂಬರ್ 19ರಿಂದ ಭಾರತ ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಎರಡೂ ಪಂದ್ಯಗಳನ್ನು ಗೆಲ್ಲುವಲ್ಲಿ ಭಾರತ ಯಶಸ್ವಿಯಾದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ಸತತವಾಗಿ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್‌ ಫೈನಲ್ ತಲುಪಿರುವ ಭಾರತ, ಫೈನಲ್‌ನಲ್ಲಿ ನಿರಾಸೆ ಅನುಭವಿಸಿದೆ. ಈ ಬಾರಿ ಫೈನಲ್ ತಲುಪಿ ಪ್ರಶಸ್ತಿ ಬರವನ್ನು ಕೊನೆಗೊಳಿಸುವ ವಿಶ್ವಾಸದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+