ICC Test Ranking: 10ನೇ ಸ್ಥಾನಕ್ಕೇರಿದ ಜೈಸ್ವಾಲ್; ಆಡದಿದ್ದರೂ ಒಂದು ಸ್ಥಾನ ಏರಿಕೆ ಕಂಡ ವಿರಾಟ್ ಕೊಹ್ಲಿ
ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಏರಿಕೆ ಕಂಡಿದ್ದಾರೆ. ಮೊದಲ ಬಾರಿಗೆ ಅವರು ಅಗ್ರ 10ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಟೆಸ್ಟ್ ಬ್ಯಾಟಿಂಗ್ ವಿಭಾಗದಲ್ಲಿ ಜೈಸ್ವಾಲ್ 10ನೇ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ 8ನೇ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಎರಡು ದ್ವಿಶತಕ ಸಿಡಿಸಿದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ವಿಶ್ವ ಕ್ರಿಕೆಟ್‌ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಮಾರ್ಚ್ 7ರಿಂದ ಭಾರತ ಇಂಗ್ಲೆಂಡ್ ವಿರುದ್ಧದ ಸರಣಿಯ ಕೊನೆಯ ಟೆಸ್ಟ್ ಪಂದ್ಯ ಆಡಲಿದ್ದು, ಜೈಸ್ವಾಲ್ ಮತ್ತೊಂದು ದೊಡ್ಡ ಮೊತ್ತ ಗಳಿಸಲುಸಜ್ಜಾಗಿದ್ದಾರೆ.

ಭಾರತದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಆಡದಿದ್ದರೂ ರ್‍ಯಾಂಕಿಂಗ್‌ನಲ್ಲಿ ಮಾತ್ರ ಏರಿಕೆ ಕಾಣುತ್ತಲೇ ಇದ್ದಾರೆ. ಸದ್ಯ ಅವರು ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ 8ನೇ ಸ್ಥಾನದಲ್ಲಿದ್ದು, ಉತ್ತಮ ರ್‍ಯಾಂಕಿಂಗ್ ಹೊಂದಿರುವ ಭಾರತದ ಬ್ಯಾಟರ್ ಆಗಿದ್ದಾರೆ.
ಮೊದಲ ಸ್ಥಾನದಲ್ಲಿ ಕೇನ್ ವಿಲಿಯಮ್ಸನ್
ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್ ತಂಡ ಶ್ರೇಷ್ಠ ಬ್ಯಾಟರ್ ಕೇನ್ ವಿಲಿಯಮ್ಸನ್ ಐಸಿಸಿ ರ್‍ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್‌ನ ಹಿರಿಯ ಬ್ಯಾಟರ್ ಜೋ ರೂಟ್ ಒಂದು ಸ್ಥಾನ ಏರಿಕೆ ಕಂಡಿದ್ದು ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 8ನೇ ಸ್ಥಾನದಲ್ಲಿದ್ದು, ಯಶಸ್ವಿ ಜೈಸ್ವಾಲ್ 10ನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 11ನೇ ಸ್ಥಾನದಲ್ಲಿದ್ದಾರೆ. ರಿಷಬ್ ಪಂತ್ ಕಳೆದ ಒಂದೂವರೆ ವರ್ಷದಿಂದ ಕ್ರಿಕೆಟ್ ಆಡದೇ ಇದ್ದರೂ 14ನೇ ಸ್ಥಾನದಲ್ಲಿದ್ದಾರೆ.
ಆರ್ ಸಿಬಿ ಆಟಗಾರನ ಸ್ಥಾನ ಜಿಗಿತ
ಆಸ್ಟ್ರೇಲಿಯಾದ ಯುವ ಪ್ರತಿಭೆ, ಕ್ಯಾಮರೂನ್ ಗ್ರೀನ್, ನ್ಯೂಜಿಲೆಂಡ್ ವಿರುದ್ಧ ಶತಕದ ನಂತರ ಬ್ಯಾಟಿಂಗ್ ಶ್ರೇಯಾಂಕದಲ್ಲಿ 22 ಸ್ಥಾನಗಳನ್ನು ಜಿಗಿದು 23 ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.
ಸ್ಟೀವ್ ಸ್ಮಿತ್ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಟ್ರಾವಿಸ್ ಹೆಡ್ ಒಂದು ಸ್ಥಾನವನ್ನು ಕಳೆದುಕೊಂಡರು ಮತ್ತು 2019 ರಿಂದ ಮೊದಲ ಬಾರಿಗೆ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರ 10 ರಿಂದ ಹೊರಗುಳಿಯುತ್ತಾರೆ.
ಅಗ್ರಸ್ಥಾನದಲ್ಲಿ ಬುಮ್ರಾ
ಜಸ್ಪ್ರೀತ್ ಬುಮ್ರಾ ಬೌಲಿಂಗ್ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಇಲ್ಲೂ ಕೂಡ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.
ಏಕದಿನ ವಿಭಾಗದಲ್ಲಿ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿದ್ದರೆ, ಶುಭಮನ್ ಗಿಲ್ 2ನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದು, ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದಾರೆ.












Click it and Unblock the Notifications