Yashasvi Jaiswal: 147 ವರ್ಷಗಳಲ್ಲೇ ಮೊದಲ ಬಾರಿ ಈ ಐತಿಹಾಸಿಕ ದಾಖಲೆ ಮಾಡಿದ ಯಶಸ್ವಿ ಜೈಸ್ವಾಲ್

ಚೆನ್ನೈನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನವೇ ಯಶಸ್ವಿ ಜೈಸ್ವಾಲ್ ಇತಿಹಾಸ ರಚನೆ ಮಾಡಿದ್ದಾರೆ. 147 ವರ್ಷಗಳಲ್ಲಿ ವಿಶೇಷ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ಎನಿಸಿಕೊಂಡರು. ಭಾರತ ಪ್ರಮುಖ ಆಟಗಾರರ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಯುವ ಆಟಗಾರ ಯಶಸ್ವಿ ಜೈಸ್ವಾಲ್ ತಂಡಕ್ಕೆ ಆಸರೆಯಾದರು, ಅರ್ಧಶತಕ ಗಳಿಸುವ ಮೂಲಕ ಮತ್ತೊಮ್ಮೆ ಉತ್ತಮ ಫಾರ್ಮ್ ಪ್ರದರ್ಶನ ನೀಡಿದರು.

ಅರ್ಧಶತಕ ಗಳಿಸಿದ ಬಳಿಕ ಅವರು 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದರು. ತವರಿನಲ್ಲಿ ತನ್ನ ಮೊದಲ 10 ಪಂದ್ಯಗಳಲ್ಲಿ 750 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಈ ಹಿಂದೆ 1935ರಲ್ಲಿ 747 ರನ್ ಗಳಿಸಿದ ವೆಸ್ಟ್ ಇಂಡೀಸ್‌ನ ಜಾರ್ಜ್ ಹೆಡ್ಲಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. ಜೈಸ್ವಾಲ್ ಈಗ ಆ ದಾಖಲೆ ಮುರಿದು ಮೊದಲ ಸ್ಥಾನಕ್ಕೆ ಬಂದಿದ್ದಾರೆ.

Yashasvi Jaiswal s Historic Feat in Test Cricket Against Bangladesh

ತವರಿನಲ್ಲಿ ಮೊದಲ 10 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರರು

ಯಶಸ್ವಿ ಜೈಸ್ವಾಲ್ (ಭಾರತ) - 755 ರನ್‌

ಜಾರ್ಜ್ ಹೆಡ್ಲಿ (ವೆಸ್ಟ್ ಇಂಡೀಸ್) - 747 ರನ್

ಜಾವೇದ್ ಮಿಯಾಂದಾದ್ (ಪಾಕಿಸ್ತಾನ) -743 ರನ್

ಡೇವ್ ಹೌಟನ್ (ಜಿಂಬಾಬ್ವೆ) - 687 ರನ್

ಸರ್ ವಿವ್ ರಿಚರ್ಡ್ಸ್ (ವೆಸ್ಟ್ ಇಂಡೀಸ್) - 680 ರನ್‌

ಮೊದಲ ದಿನದ ಗೌರವ ಭಾರತಕ್ಕೆ

ಮೊದಲ ದಿನದಾಟದ ಅಂತ್ಯಕ್ಕೆ ಭಾರತ 6 ವಿಕೆಟ್ ಕಳೆದುಕೊಂಡು 339 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 56 ರನ್ ಗಳಿಸಿದರೆ, ರಿಷಬ್ ಪಂತ್ 39 ರನ್ ಗಳಿಸಿದರು. ರವೀಂದ್ರ ಜಡೇಜಾ ಅಜೇಯ 86 ರನ್ ಗಳಿಸಿದ್ದರೆ, ರವಿಚಂದ್ರನ್ ಅಶ್ವಿನ್ ಅಜೇಯ 102 ರನ್ ಗಳಿಸಿ ನಾಲ್ಕನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ.

ಬಾಂಗ್ಲಾದೇಶದ ವೇಗದ ಬೌಲರ್ ಹಸನ್ ಮಹಮೂದ್ 4 ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಆಘಾತ ನೀಡಿದರು. ಆದರೆ ಅಶ್ವಿನ್ ಮತ್ತು ಜಡೇಜಾ ಇಬ್ಬರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾದರು.

ಎರಡನೇ ದಿನ ಭಾರತ ಬೃಹತ್ ಮೊತ್ತ ಕಲೆಹಾಕುವ ಗುರಿ ಹೊಂದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಅಗ್ರಸ್ಥಾನವನ್ನು ಸದ್ಯಕ್ಕೆ ಯಾವ ತಂಡಗಳಿಗೂ ಮುಟ್ಟಲು ಸಾಧ್ಯವಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+